Menu

ಆನಗೋಡು ಮೃಗಾಲಯದಲ್ಲಿ ನಾಲ್ಕು ಜಿಂಕೆಗಳ ಸಾವು

ಆನಗೋಡು ಗ್ರಾಮದ ಬಳಿ ಇರುವ ಇಂದಿರಾ ಪ್ರಿಯದರ್ಶಿನಿ ಕಿರು ಮೃಗಾಲಯದಲ್ಲಿ ನಾಲ್ಕು ಚುಕ್ಕಿ ಜಿಂಕೆಗಳು ನಿಗೂಢವಾಗಿ ಮೃತಪಟ್ಟಿವೆ. ಮೂರು ದಿನಗಳಲ್ಲಿ ನಾಲ್ಕು ಚುಕ್ಕಿ ಜಿಂಕೆಗಳು ಮೃತಪಟ್ಟಿದ್ದು, ಮೃಗಾಯಲದಲ್ಲಿ ಹೆಮರಾಜಿಕ್ ಸೆಫ್ಟಿಸೆಮಿಯಾ ಎಂಬ ಸಾಂಕ್ರಾಮಿಕ ರೋಗ ಹರಡಿರಬಹುದು ಎಂದು ವೈದ್ಯರು ಶಂಕಿಸಿದ್ದಾರೆ.

ಮೃಗಾಲಯದಲ್ಲಿ 170 ಚುಕ್ಕೆ ಜಿಂಕೆಗಳಿದ್ದು, ಅವುಗಳನ್ನು ಉಳಿಸಿಕೊಳ್ಳಲು ವೈದ್ಯರು ರೋಗನಿರೋಧಕ ಚಿಕಿತ್ಸೆ ಆರಂಭಿಸಿದ್ದಾರೆ. ಚಿಕಿತ್ಸೆ ನಡೆಯುತ್ತಿರುವ ಹಿನ್ನೆಲೆ ಅರಣ್ಯ ಇಲಾಖೆ ಅಧಿಕಾರಿಗಳು ತಾತ್ಕಾಲಿಕವಾಗಿ ಸಾರ್ವಜನಿಕರ ವೀಕ್ಷಣೆಗೆ ನಿರ್ಬಂಧ ಹೇರಿದ್ದಾರೆ.

ಕಳೆದ ನವೆಂಬರ್‌ನಲ್ಲಿ ಬೆಳಗಾವಿ ಕಿತ್ತೂರು ರಾಣಿ ಚೆನ್ನಮ್ಮ ಕಿರು ಮೃಗಾಲಯದಲ್ಲಿ  ೩೧ ಜಿಂಕೆಗಳು ಮೃತಪಟ್ಟಿದ್ದವು.  ಪ್ರಯೋಗಾಲಯದ ವರದಿಗಳು ಮತ್ತು ಪಶುವೈದ್ಯಕೀಯ ತಪಾಸಣೆಯ ಪ್ರಕಾರ, ಈ ಸಾಮೂಹಿಕ ಸಾವಿಗೆ ‘ಗಳಲೆ ರೋಗ’ (Hemorrhagic Septicemia – HS) ಎಂಬ ಬ್ಯಾಕ್ಟೀರಿಯಾ ಸೋಂಕು ಕಾರಣ ಎಂದು ದೃಢಪಟ್ಟಿದೆ.

ಈ ಸೋಂಕು ಸೋಂಕು ತಗುಲಿದ 24 ರಿಂದ 48 ಗಂಟೆಗಳಲ್ಲೇ ಪ್ರಾಣಿಗಳು ಸಾಯುತ್ತವೆ. ಐಸಿಎಆರ್ (ICAR) ಸಂಸ್ಥೆಯು ಸೆಪ್ಟೆಂಬರ್ ತಿಂಗಳಿನಲ್ಲೇ ಬೆಳಗಾವಿ ಜಿಲ್ಲೆಯಲ್ಲಿ ಈ ರೋಗ ಹರಡುವ ಸಾಧ್ಯತೆ ಇದೆ ಎಂದು ಮುನ್ನೆಚ್ಚರಿಕೆ ನೀಡಿತ್ತು. ಆದರೆ ಮೃಗಾಲಯದ ಅಧಿಕಾರಿಗಳು ಲಸಿಕೆ ಹಾಕುವಲ್ಲಿ ಅಥವಾ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಲ್ಲಿ ವಿಫಲರಾಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

Related Posts

Leave a Reply

Your email address will not be published. Required fields are marked *