Menu

ಸಂತ್ರಸ್ತೆಯ ಹೆಸರು, ಶಾಲೆ, ತರಗತಿ, ವಿಳಾಸ ಬಹಿರಂಗ: ಶ್ರೀರಾಮುಲು ವಿರುದ್ಧ ಪೋಕ್ಸೋ ಕೇಸ್‌

ಬಳ್ಳಾರಿ ಜಿಲ್ಲೆಯಲ್ಲಿ ನಡೆದಿದ್ದ ಸಮಾವೇಶವೊಂದರಲ್ಲಿ ಪೋಕ್ಸೋ ಕೇಸ್‌ನ ಸಂತ್ರಸ್ತೆಯ ಹೆಸರು, ವಿಳಾಸ ಬಹಿರಂಗಪಡಿಸಿದ ಆರೋಪದಡಿ ಮಾಜಿ ಸಚಿವ ಶ್ರೀರಾಮುಲು ವಿರುದ್ಧ ಪ್ರಕರಣ ದಾಖಲಾಗಿದೆ.

ಬಳ್ಳಾರಿಯ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಭಾಷಣದ ವೇಳೆ ಶ್ರೀ ರಾಮುಲು ಪೋಕ್ಸೋ ಕಾಯ್ದೆಯನ್ನು ಸ್ಪಷ್ಟವಾಗಿ ಉಲ್ಲಂಘಿಸಿದ್ದಾರೆಂದು ದೂರಿನಲ್ಲಿ ಆರೋಪಿಸಲಾಗಿದೆ.

ಜ.17ರಂದು ನಡೆದ ಬಿಜೆಪಿಯ ಬೃಹತ್ ಪ್ರತಿಭಟನಾ ಸಮಾವೇಶದಲ್ಲಿ ಮಾತನಾಡುವಾಗ ಶ್ರೀರಾಮುಲು ಬಳ್ಳಾರಿ ಗಾಂಜಾ, ಡ್ರಗ್ಸ್ ಹಬ್ ಆಗಿದೆ. ಡ್ರಗ್ ಸೇವಿಸಿಯೇ ಶಾಲಾ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಹೇಳುತ್ತಾ, ಪೋಕ್ಸೋ ಕೇಸ್‌ನ ಸಂತ್ರಸ್ತೆಯ ಹೆಸರು, ಮನೆ ವಿಳಾಸ, ತರಗತಿ ಹಾಗೂ ಓದುವ ಶಾಲೆಯ ಹೆಸರನ್ನೂ ಕೂಡ ಬಹಿರಂಗಪಡಿಸಿದ್ದರು.

ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿರುವುದರಿಂದ ಮತ್ತು ಸಂತ್ರಸ್ತೆಯ ಗುರುತು ಬಹಿರಂಗಪಡಿಸಿರುವುದು ಸ್ಪಷ್ಟವಾಗಿ ಕಂಡುಬಂದಿರುವುದರಿಂದ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಶ್ರೀರಾಮುಲು, ನಾನು ಸಂತ್ರಸ್ತೆಯ ಕುಟುಂಬಕ್ಕೆ ನ್ಯಾಯ ಸಿಗಬೇಕು ಎಂಬ ಕಳಕಳಿಯಿಂದ ಮಾತನಾಡಿದ್ದೇನೆ ಹೊರತು, ಅವರಿಗೆ ತೊಂದರೆ ನೀಡುವ ಉದ್ದೇಶ ನನಗಿರಲಿಲ್ಲ. ಇದು ರಾಜಕೀಯ ಪ್ರೇರಿತ ಕೇಸ್ ಎಂದು ಹೇಳಿದ್ದಾರೆ.

Related Posts

Leave a Reply

Your email address will not be published. Required fields are marked *