ಕಚೇರಿಯಲ್ಲಿ ಸಮವಸ್ತ್ರದಲ್ಲಿದ್ದುಕೊಂಡೇ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಡಿಜಿಪಿ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಡಿಜಿಪಿ ರಾಮಚಂದ್ರ ರಾವ್ ಮಹಿಳೆಯರೊಂದಿಗೆ ಅಸಭ್ಯವಾಗಿ ನಡೆದುಕೊಂಡಿರುವ ವೀಡಿಯೊ ವೈರಲ್ ಆದ ಬೆನ್ನಲ್ಲೇ ರಾಜ್ಯ ಸರ್ಕಾರ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದೆ.
ನಿನ್ನೆ ಮಧ್ಯಾಹ್ನ 10 ದಿನಗಳ ಕಡ್ಡಾಯ ರಜೆ ಮೇಲೆ ತೆರಳಿದ್ದ ರಾಜಚಂದ್ರ ರಾವ್ ಅವರನ್ನು ರಾತ್ರಿ ಅಮಾನತುಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ವಿಚಾರಣೆ ಬಾಕಿಯಿರುವ ಕಾರಣ ಅಮಾನತುಗೊಳಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಿದೆ.
ಕಚೇರಿಯಲ್ಲಿ ಪೊಲೀಸ್ ಸಮವಸ್ತ್ರದಲ್ಲೇ ರಾಮಚಂದ್ರರಾವ್ ಮಹಿಳೆಯನ್ನು ಅಪ್ಪಿಕೊಂಡು ಚುಂಬಿಸುತ್ತಿದ್ದ ದೃಶ್ಯಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿವೆ. ಇದು ರನ್ಯಾರಾವ್ ಅಕ್ರಮ ಚಿನ್ನ ಸಾಗಣೆ ಪ್ರಕರಣಕ್ಕಿಂತ ಮೊದಲು ನಡೆದಿರುವ ಘಟನೆ ಎಂದು ಹೇಳಲಾಗುತ್ತಿದೆ. ಡಿಜಿಪಿ ಶ್ರೇಣಿಯ ಅಧಿಕಾರಿಯೊಬ್ಬರ ಈ ನಡೆಗೆ ಸಾರ್ವಜನಿಕ ವಲಯದಲ್ಲೂ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಈ ಬಗ್ಗೆ ಮಾಹಿತಿ ಪಡೆದ ಸಿಎಂ ಸಿದ್ದರಾಮಯ್ಯ ಅವರು ಅಧಿಕಾರಿಯ ಇಂಥ ಕೀಳು ನಡವಳಿಕೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮಾಡೆಲ್ ಜೊತೆ ಸರಸವಾಡುವಾಗ ವೀಡಿಯೊ ಮಾಡಿಕೊಂಡಿದ್ದು, ಕ್ಯಾಮೆರಾ ಎದುರೇ ವಿವಸ್ತ್ರರಾಗಿ ವಿಕೃತಿ ಮೆರೆದಿದ್ದಾರೆ ಎಂಬ ಆರೋಪವೂ ಕೇಳಿ ಬಂದಿದೆ. ಕಚೇರಿಗೆ ಕೆಲಸದ ನಿಮಿತ್ತ ಬರುವ ಮಹಿಳೆಯರ ಜೊತೆಗೂ ಈ ಅಧಿಕಾರಿ ಸರಸವಾಡುತ್ತಿದ್ದರು ಎನ್ನಲಾಗಿದೆ.
ಅಕ್ರಮ ಚಿನ್ನ ಸಾಗಾಟ ಮಾಡಿದ್ದ ಪ್ರಕರಣ ಸಂಬಂಧ ನಟಿ ರನ್ಯಾ ರಾವ್ ಬಂಧನ ಬಳಿಕ ಡಿಜಿಪಿ ರಾಮಚಂದ್ರ ರಾವ್ ಹೆಸರೂ ಪ್ರಕರಣದಲ್ಲಿ ತಳಕು ಹಾಕಿಕೊಂಡಿತ್ತು. ರನ್ಯಾ ರಾವ್‌ಗೆ ವಿಮಾನ ನಿಲ್ದಾಣದಲ್ಲಿ ಪ್ರೋಟೋಕಾಲ್ ನೀಡಿದ ಬಗ್ಗೆ ತನಿಖೆಗೆ ಕರ್ನಾಟಕ ಗೃಹ ಇಲಾಖೆ ಆದೇಶಿಸಿತ್ತು.


