Menu

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್ ನಾಳೆ ಅಧಿಕಾರ ಸ್ವೀಕಾರ

nitin nabin

ಬಿಜೆಪಿ ಕಾರ್ಯಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿರುವ ನಿತಿನ್ ನಬಿನ್ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿದ್ದು, ಜನವರಿ 20ರಂದು ಅಧಿಕಾರ ಸ್ವೀಕರಿಸಲಿದ್ದಾರೆ. ಅಧಿಕಾರ ಸ್ವೀಕಕಾರ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಿರಿಯ ಬಿಜೆಪಿ ನಾಯಕರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

45 ವರ್ಷದ ನಿತಿನ್ ನಬಿನ್ ಅವರು ಜೆಪಿ ನಡ್ಡಾ ಸ್ಥಾನವನ್ನು ತುಂಬಲಿದ್ದು, ಬಿಜೆಪಿಯ ಅತ್ಯಂತ ಕಿರಿಯ ರಾಷ್ಟ್ರೀಯ ಅಧ್ಯಕ್ಷ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ನಿತಿನ್ ನಬಿನ್ ಪರವಾಗಿ ಒಟ್ಟು 37 ನಾಮಪತ್ರಗಳು ಸಲ್ಲಿಕೆಯಾಗಿದ್ದವು. ಬೇರೆ ಭ್ಯರ್ಥಿಗಳು ನಾಮಪತ್ರ ಸಲ್ಲಿಸದ ಕಾರಣ ಚುನಾವಣಾಧಿಕಾರಿ ಕೆ. ಲಕ್ಷ್ಮಣ್ ಅವರು ನಬಿನ್ ಅವರನ್ನು ಅವಿರೋಧವಾಗಿ ಆಯ್ಕೆ ಎಂದು ಘೋಷಿಸಿದ್ದಾರೆ.

ಪಾಟ್ನಾ ಜಿಲ್ಲೆಯ ಬಂಕಿಪುರ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುವ ನಿತಿನ್ ನಬಿನ್, ದಿವಂಗತ ಬಿಜೆಪಿ ನಾಯಕ ನಬಿನ್ ಕಿಶೋರ್ ಪ್ರಸಾದ್ ಸಿನ್ಹಾ ಅವರ ಪುತ್ರ. ಎರಡು ದಶಕಗಳಿಂದ ಸಂಘಟನೆಯಲ್ಲಿ ಸಕ್ರಿಯರಾಗಿರುವ ನಿತಿನ್‌ ಭಾರತೀಯ ಜನತಾ ಯುವ ಮೋರ್ಚಾದ ಬಿಹಾರ ಘಟಕದ ಅಧ್ಯಕ್ಷರಾಗಿ ಹಾಗೂ ಛತ್ತೀಸ್‌ಗಢದ ಚುನಾವಣಾ ಉಸ್ತುವಾರಿಯಾಗಿ ಕೆಲಸ ಮಾಡಿದ್ದಾರೆ.

ಛತ್ತೀಸ್‌ಗಢದ ಉಸ್ತುವಾರಿಯಾಗಿದ್ದ ನಬಿನ್‌ ಅಲ್ಲಿ ಪಕ್ಷವನ್ನು ಆಡಳಿತಕ್ಕೆ ತರುವಲ್ಲಿ ಮಹತ್ವದ ಪಾತ್ರ ವಹಿಸಿದ್ದರು. ಇವರ ಕೆಲಸವನ್ನು ಗುರುತಿಸಿದ ಬಳಿಕ ಇವರಿಗೆ ದೆಹಲಿ ಚುನಾವಣೆಯ ಪ್ರಚಾರದಲ್ಲಿ ಪ್ರಮುಖ ಪಾತ್ರ ನೀಡಲಾಗಿತ್ತು.

ನಿತಿನ್ ನಬಿನ್ ಬಿಹಾರದ ಕಾಯಸ್ಥ ಸಮುದಾಯದಿಂದ ಬಂದಿದ್ದಾರೆ. ಬಿಹಾರದಲ್ಲಿ ಕಾಯಸ್ಥ ಮೇಲ್ವರ್ಗದ ಜಾತಿ ಎಂದು ಪರಿಗಣಿಸಿದರೂ ಇತರ ಜಾತಿಗಳ ಜೊತೆ ಸಂಘರ್ಷದಲ್ಲಿ ಇಲ್ಲ. ಬಿಹಾರ ಚುನಾವಣಾ ಸಮಯದಲ್ಲಿ ಗೃಹ ಸಚಿವ ಅಮಿತ್‌ ಶಾ ನಿತಿನ್ ಮನೆಗೆ ಭೇಟಿ ನೀಡಿ ಅವರ ಸಂಘಟನಾ ಕೆಲಸಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

Related Posts

Leave a Reply

Your email address will not be published. Required fields are marked *