ಚಿಕ್ಕಬಳ್ಳಾಪುರದ ಶಿಡ್ಲಘಟ್ಟ ಪೌರಾಯುಕ್ತೆಗೆ ನಿಂದಿಸಿದ್ದ ರಾಜೀವ್ ಗೌಡ ಅವರನ್ನು ಕಾಂಗ್ರೆಸ್ ಪಕ್ಷ ಅಮಾನತುಗೊಳಿಸಿದೆ.
ಕಲ್ಟ್ ಚಿತ್ರದ ಬ್ಯಾನರ್ ವಿಷಯದಲ್ಲಿ ಪೌರಾಯುಕ್ತೆ ನಿರ್ಮಲಾ ಗೌಡ ಅವರಿಗೆ ದೂರವಾಣಿಯಲ್ಲಿ ಅಶ್ಲೀಲವಾಗಿ ನಿಂದಿಸಿದ್ದ ರಾಜೀವ್ ಗೌಡ ಅವರನ್ನು ತತ್ ಕ್ಷಣದಿಂದಲೇ ಜಾರಿಗೆ ಬರುವಂತೆ ಅಮಾನತುಗೊಳಿಸಿ ಕಾಂಗ್ರೆಸ್ ಪಕ್ಷ ಆದೇಶ ಹೊರಡಿಸಿದೆ.
ರಾಜೀವ್ ಗೌಡ ವಿರುದ್ಧ ಶಿಡ್ಲಘಟ್ಟ ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣಗಳು ದಾಖಲಾಗಿದ್ದು, ರಾಜೀವ್ ಗೌಡ ತಲೆಮರೆಸಿಕೊಂಡಿದ್ದಾರೆ.
ಪೌರಾಯುಕ್ತೆಗೆ ನಿಂದಿಸಿದ ಬಗ್ಗೆ ಸ್ಪಷ್ಟನೆ ನೀಡುವಂತೆ ಕಾಂಗ್ರೆಸ್ ನೋಟಿಸ್ ಜಾರಿ ಮಾಡಿದ್ದು, 7 ದಿನಗಳ ಒಳಗಾಗಿ ಉತ್ತರ ನೀಡದೇ ಇದ್ದರೆ ಶಿಸ್ತುಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿತ್ತು.
ಆದರೆ ಗಡುವು ಮುಗಿದರೂ ರಾಜೀವ್ ಗೌಡ ಯಾವುದೇ ಸ್ಪಷ್ಟನೆ ನೀಡದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಶಿಸ್ತುಪಾಲನಾ ಸಮಿತಿ ಶಿಫಾರಸಿನ ಮೇರೆಗೆ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.


