Saturday, January 24, 2026
Menu

ಉಗ್ರ ಸಂಘಟನೆ ಪರ ಕೆಲಸ ಮಾಡಿದ್ದ ಶಿರಸಿ ಯುವಕನಿಗೆ 10 ವರ್ಷ ಜೈಲು!

terrorist

ಶಿರಸಿ (ಉತ್ತರ ಕನ್ನಡ): ಯುವಕರನ್ನು ತೀವ್ರವಾದದತ್ತ ಸೆಳೆಯುವ ಹಾಗೂ ಪಾಕ್​ ಮೂಲದ ಉಗ್ರ ಸಂಘಟನೆ ಲಷ್ಕರ್-ಇ-ತೊಯ್ಬಾಗೆ ಸೇರ್ಪಡೆಗೊಳಿಸುವ ಸಂಚು ರೂಪಿಸಿದ್ದ ಆರೋಪದಡಿ, ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಿವಾಸಿಯೊಬ್ಬನಿಗೆ ವಿಶೇಷ ಎನ್‌ಐಎ ನ್ಯಾಯಾಲಯ 10 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿದೆ.

ಶಿಕ್ಷೆ ವಿಧಿಸಲ್ಪಟ್ಟ ಅಪರಾಧಿ ಸಯ್ಯದ್ ಎಂ. ಇದ್ರಿಸ್ ಎಂದು ಗುರುತಿಸಲಾಗಿದ್ದು, ಭಾರತೀಯ ದಂಡ ಸಂಹಿತೆ ಹಾಗೂ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಅಡಿ ನ್ಯಾಯಾಲಯ ತೀರ್ಪು ನೀಡಿದೆ. ಜೈಲು ಶಿಕ್ಷೆಯ ಜೊತೆಗೆ ಅಪರಾಧಿಗೆ 70 ಸಾವಿರ ರೂ. ದಂಡವನ್ನೂ ವಿಧಿಸಿದೆ.

ಈ ಪ್ರಕರಣವು ಮೊದಲಿಗೆ 2020ರ ಎಪ್ರಿಲ್‌ನಲ್ಲಿ ಪಶ್ಚಿಮ ಬಂಗಾಳ ಪೊಲೀಸರಿಂದ ದಾಖಲಾಗಿದ್ದು, ನಂತರ ಹೆಚ್ಚಿನ ತನಿಖೆಗಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ)ಗೆ ಹಸ್ತಾಂತರಿಸಲಾಗಿತ್ತು. ತನಿಖೆಯ ವೇಳೆ ಎನ್‌ಐಎ ಶಿರಸಿಯಲ್ಲಿ ಸಯ್ಯದ್ ಇದ್ರಿಸ್ ಹಾಗೂ ಜಮ್ಮು–ಕಾಶ್ಮೀರ ನಿವಾಸಿ ಅಲ್ತಾಫ್ ಅಹ್ಮದ್ ರಾಥೆರ್ ಎಂಬ ಆರೋಪಿಗಳನ್ನು ಬಂಧಿಸಿತ್ತು.

ಎನ್‌ಐಎ ಆರೋಪದಂತೆ, ಈ ಇಬ್ಬರು ತಾನಿಯಾ ಪರ್ವೀನ್​ ಎಂಬ ಮಹಿಳೆಯೊಂದಿಗೆ ಸೇರಿಕೊಂಡು ಪಶ್ಚಿಮ ಬಂಗಾಳದಲ್ಲಿ ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಯ ಘಟಕ ಸ್ಥಾಪಿಸಲು ಸಂಚು ರೂಪಿಸಿದ್ದರು. ಇದಕ್ಕೂ ಮುನ್ನ ಪಶ್ಚಿಮ ಬಂಗಾಳದ ಉತ್ತರ ಪರಗಣ ಜಿಲ್ಲೆಯ ಬದೂರಿಯಾ ಪ್ರದೇಶದಲ್ಲಿ ನಡೆದ ಶೋಧ ಕಾರ್ಯಾಚರಣೆಯಲ್ಲಿ ತಾನಿಯಾ ಪರ್ವೀನ್​ನನ್ನು ಪೊಲೀಸರು ಬಂಧಿಸಿದ್ದರು.

ಶೋಧದ ವೇಳೆ ಕಾನೂನುಬಾಹಿರ ಸಾಹಿತ್ಯ ಸೇರಿದಂತೆ ಹಲವು ಅಕ್ರಮ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದರು. ಪ್ರಕರಣದ ವಿಚಾರಣೆ ಪೂರ್ಣಗೊಂಡ ಬಳಿಕ, ನ್ಯಾಯಾಲಯವು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಕಠಿಣ ಶಿಕ್ಷೆ ವಿಧಿಸಿದೆ.

 

Related Posts

Leave a Reply

Your email address will not be published. Required fields are marked *