ಬಾಂಗ್ಲಾ ಅಕ್ರಮ ವಲಸಿಗರ ಪತ್ತೆ ಮಾಡಿದ್ದಕ್ಕೆ ಪೊಲೀಸರ ಕಿರುಕುಳ ತಾಳಲಾರದೇ ವ್ಯಕ್ತಿಯೊಬ್ಬ ಬೆಂಗಳೂರಿನ ವಿಧಾನಸೌಧ ಮುಂಭಾಗ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ಡಾ. ನಾಗೇಂದ್ರ ಎಂಬವರು ವಿಧಾನಸೌಧದ ಎದುರೇ ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ಸ್ಥಳದಲ್ಲಿದ್ದ ವಿಧಾನಸೌಧ ಪೊಲೀಸರು ತಕ್ಷಣ ಸ್ಪಂದಿಸಿ, ಅವರನ್ನು ಬೌರಿಂಗ್ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ. ವೈದ್ಯರ ಪ್ರಕಾರ ಡಾ. ನಾಗೇಂದ್ರ ಅವರ ಸ್ಥಿತಿ ಗಂಭೀರವಾಗಿದ್ದು ಚಿಕಿತ್ಸೆ ಮುಂದುವರಿದಿದೆ.
ಹಸನ್ ಎಂಬಾತ ಅಕ್ರಮ ಬಾಂಗ್ಲಾ ವಲಸಿಗ ಎಂದು ಆರೋಪಿಸಿ ಪುನೀತ್ ಕೆರೆಹಳ್ಳಿ ಸೋಲದೇವನಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರು ನೀಡಿ ಠಾಣೆಯಿಂದ ಹೋಗುತ್ತಿದ್ದ ವೇಳೆ, ಬಾಗಲಗುಂಟೆ ಪೊಲೀಸರು ಪುನೀತ್ ಕೆರೆಹಳ್ಳಿಯನ್ನು ಬಂಧಿಸಿದ್ದರು.
ಅಕ್ರಮ ಬಾಂಗ್ಲಾ ವಲಸಿಗರ ವಿವರಗಳನ್ನು ನಾಗೇಂದ್ರ ಮತ್ತು ಪುನೀತ್ ಕೆರೇಹಳ್ಳಿ ಪೊಲೀಸರಿಗೆ ನೀಡಿದ್ದರು. ಈ ಹಿನ್ನಲೆಯಲ್ಲಿ ದೂರು ನೀಡಿದವರ ವಿರುದ್ಧವೇ ಪ್ರಕರಣ ದಾಖಲಾಗಿತ್ತು.
ಸೂಲದೇವನಹಳ್ಳಿ ಪೊಲೀಸರಿಂದ ನಿರಂತರ ಕಿರುಕುಳ ಹಿನ್ನೆಲೆಯಲ್ಲಿ ನಾಗೇಂದ್ರ ನೊಂದು ಶನಿವಾರ ಬೆಳಿಗ್ಗೆ ವಿಧಾನಸೌಧ ಮುಂಭಾಗ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ವಿಷ ಸೇವಿಸುವುದನ್ನು ಗಮನಿಸಿದ ವಿಧಾನಸೌಧ ಪೊಲೀಸರು ತಕ್ಷಣ ವಿಷದ ಬಾಟಲಿಯನ್ನು ಕಿತ್ತುಕೊಂಡು, ಡಾ. ನಾಗೇಂದ್ರಪ್ಪ ಅವರನ್ನು ಆಸ್ಪತ್ರೆಗೆ ರವಾನೆ ಮಾಡಿದ್ದಾರೆ.
ಅಕ್ರಮ ಬಾಂಗ್ಲಾದೇಶ ವಲಸಿಗರ ಪತ್ತೆ ಕಾರ್ಯಾಚರಣೆಗೆ ಮುಂದಾಗಿದ್ದ ರಾಷ್ಟ್ರ ರಕ್ಷಣಾ ಪಡೆಯ ಮುಖಂಡ ಪುನೀತ್ ಕೆರೆಹಳ್ಳಿಯನ್ನು ಪೊಲೀಸರು ಬಂಧಿಸಿದ್ದರು. ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕೆಂಪಾಪುರದಲ್ಲಿ ಅಕ್ರಮ ಬಾಂಗ್ಲಾ ವಲಸಿಗರು ಇದ್ದಾರೆ ಎಂದು ಮಾಹಿತಿ ಸಿಕ್ಕ ಹಿನ್ನೆಲೆ ಪುನೀತ್ ಕೆರೆಹಳ್ಳಿ ಅಲ್ಲಿಗೆ ತೆರಳಿದ್ದರು.


