ಮಹಾರಾಷ್ಟ್ರ ಶಸ್ತ್ರಾಸ್ತ್ರ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ 8 ಮಂದಿ ಮೃತಪಟ್ಟಿದ್ದಾರೆ.
ನಾಗ್ಪುರದ ಬಂದಾರ ಜಿಲ್ಲೆಯ ಎಲ್ ಟಿಪಿ ಸೆಕ್ಷನ್ ನಲ್ಲಿ ಶುಕ್ರವಾರ ಬೆಳಿಗ್ಗೆ 10.30ರ ಸುಮಾರಿಗೆ ಸ್ಫೋಟ ಸಂಭವಿಸಿದ್ದು, ದುರ್ಘಟನೆಯಲ್ಲಿ 14 ಮಂದಿ ಸಿಲುಕಿದ್ದರು.
ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ದುರಂತದಲ್ಲಿ ಕನಿಷ್ಠ 8 ಮಂದಿ ಮೃತಪಟ್ಟಿದ್ದು, ಸ್ಫೋಟದ ಶಬ್ಧ 5 ಕಿ.ಮೀ. ದೂರದವರೆಗೆ ಕೇಳಿದೆ. ರಕ್ಷಣಾ ಕಾರ್ಯ ಭರದಿಂದ ಸಾಗಿದೆ ಎಂದು ತಿಳಿಸಿದ್ದಾರೆ.
ಆವಶೇಷಗಳಡಿ ಸಿಲುಕಿದ್ದ ಮೂವರನ್ನು ರಕ್ಷಿಸಲಾಗಿದ್ದು, ಒಂದು ಶವವನ್ನು ಹೊರತೆಗೆಯಲಾಗಿದೆ. ಘಟನಾ ಸ್ಥಳದಲ್ಲಿ ದಟ್ಟ ಹೊಗೆ ಆವರಿಸಿದ್ದರಿಂದ ಕೆಲವರು ಉಸಿರುಗಟ್ಟಿ ಮೃತಪಟ್ಟಿರುವ ಸಾಧ್ಯತೆ ಇದ್ದು, ರಕ್ಷಣಾ ಕಾರ್ಯಕ್ಕೂ ಅಡ್ಡಿಯಾಗಿದೆ.