Menu

ಮದ್ಯ ಮಾರಾಟಗಾರರಿಂದ ರಾಹುಲ್‌ ಗಾಂಧಿಗೆ ದೂರು: ಸಿಎಂ, ಡಿಸಿಎಂಗೆ ನಾಚಿಕೆಯಾಗ್ಬೇಕು ಎಂದ ಆರ್‌ ಅಶೋಕ

ashoka

ಅಬಕಾರಿ ಇಲಾಖೆಯಲ್ಲಿ ಎಗ್ಗಿಲ್ಲದೆ ನಡೆಯುತ್ತಿರುವ ಕಮಿಷನ್ ದಂಧೆ, ಭ್ರಷ್ಟಾಚಾರದ ಬಗ್ಗೆ ಬೇಸತ್ತಿರುವ ಮದ್ಯ ಮಾರಾಟಗಾರರ ಸಂಘ ಈ ಬಗ್ಗೆ ರಾಹುಲ್ ಗಾಂಧಿ ಅವರಿಗೆ ದೂರು ಕೊಡಲು ಮುಂದಾಗಿದೆ. ಈ ನಡೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಶಿವಕುಮಾರ್‌ ಅವರಿಗೆ ನಿಜಕ್ಕೂ ನಾಚಿಕೆಗೇಡಿನ ವಿಷಯ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ ಟೀಕಿಸಿದ್ದಾರೆ.

ಆದರೆ ಪಾಪ ಮದ್ಯ ಮಾರಾಟಗಾರರಿಗೆ ಇದರಿಂದ ಯಾವುದೇ ಪ್ರಯೋಜನೆ ಆಗುವ ಸಾಧ್ಯತೆ ಇಲ್ಲ. ವಸೂಲಿ ಮಾಡೋಕೆ ಆದೇಶ ಕೊಟ್ಟಿರೋದೇ ರಾಹುಲ್‌ ಗಾಂಧಿ ಅವರಾಗಿರುವಾಗ ಇನ್ನು ಅವರಿಂದ ಏನು ಪರಿಹಾರ ನಿರೀಕ್ಷಿಸಲು ಸಾಧ್ಯ ಎಂದು ಪ್ರಶ್ನಿಸಿದ್ದಾರೆ.

ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್‌ ಂಆಡಿರುವ ಅಶೋಕ, ಈ ಲೂಟಿಕೋರ @INCKarnataka ಸರ್ಕಾರ ತೊಲಗುವವರೆಗೂ ಗುತ್ತಿಗೆದಾರರ, ಮದ್ಯ ಮಾರಾಟಗಾರರ ಸಮಸ್ಯೆ ಬಗೆಹರಿಯಲ್ಲ. ಇದು ಮಾತ್ರ ಗ್ಯಾರೆಂಟಿ.ಮದ್ಯ ಮಾರಾಟಗಾರರ ಸಂಘದ ರಾಜ್ಯಾಧ್ಯಕ್ಷರಾದ ಎಸ್.ಗುರುಸ್ವಾಮಿ ಅವರು ಈ ಸಂದರ್ಶನದಲ್ಲಿ ಅಬಕಾರಿ ಇಲಾಖೆಯಲ್ಲಿ ನಡೆಯುತ್ತಿರುವ ಬ್ರಹ್ಮಾಂಡ ಭ್ರಷ್ಟಾಚಾರ, ಕಮಿಷನ್ ದಂಧೆ ಬಗ್ಗೆ ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ. @INCKarnataka ಪಕ್ಷಕ್ಕೆ ಕಿಂಚಿತ್ತಾದರೂ ನಾಚಿಕೆ, ಮಾನ, ಮರ್ಯಾದೆ ಇದ್ದರೆ ಈ ಕೂಡಲೇ ಸಚಿವ ಆರ್.ಬಿ.ತಿಮ್ಮಾಪುರ ಅವರ ರಾಜೀನಾಮೆ ಪಡೆಯಬೇಕು ಎಂದು ಒತ್ತಾಯಿಸಿದ್ದಾರೆ.

Related Posts

Leave a Reply

Your email address will not be published. Required fields are marked *