Menu

ರಾಜ್ಯದ ಗ್ರಾಮ ಪಂಚಾಯ್ತಿಗಳಿಗೆ ಮಹಾತ್ಮಗಾಂಧಿ ಹೆಸರು: ಮುಖ್ಯಮಂತ್ರಿ ಘೋಷಣೆ

ಮಹಾತ್ಮಗಾಂಧಿ ಹೆಸರು ಕೇಳಿದರೆ ಇವರಿಗೆ ಆಗಲ್ಲ. ದುರುದ್ದೇಶದಿಂದ ಮನ್ ರೇಗಾ ಹೆಸರು ಬದಲಾವಣೆ ಮಾಡಿ ‘ವಿಬಿ ಜೀ ರಾಮ್ ಜೀ’ ಜಾರಿ ಮಾಡಿದ್ದಾರೆ. ನಾವು ರಾಜ್ಯದಲ್ಲಿರುವ ಗ್ರಾಮ ಪಂಚಾಯ್ತಿಗಳಿಗೆ ಮಹಾತ್ಮಗಾಂಧಿ ಹೆಸರು ಇಡುತ್ತಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಘೋಷಣೆ ಮಾಡಿದ್ದಾರೆ.

ಫ್ರೀಡಂಪಾರ್ಕ್ ನಲ್ಲಿ “ಮನರೇಗಾ ಬಚಾವೋ ” ಆಂದೋಲನದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಗುಡುಗಿದ  ಸಿಎಂ, ಮನ್ ರೇಗಾ ಯೋಜನೆಯಲ್ಲಿ ರಾಮ ಅನ್ನೋ ಹೆಸರು ಬರುವ ರೀತಿ ಯೋಜನೆ ಮಾಡಿದ್ದಾರೆ. ದಶರಥ ರಾಮ ಇಲ್ಲ,  ಕೌಶಲ್ಯ ರಾಮ ಇಲ್ಲ,  ಸೀತಾ ರಾಮ ಸಹ ಇಲ್ಲ. ಈ ಕಾಯ್ದೆಯಲ್ಲಿ ರಾಮ ಇಲ್ಲ. ಬಡವರು ದಲಿತರು, ರೈತರ ಬಗ್ಗೆ ಚಿಂತಿಸುವುದು ಕಾಂಗ್ರೆಸ್ ಮಾತ್ರ. ಬಡವರ ಬಗ್ಗೆ ಮಾತಾಡುವುದು ಕಾಂಗ್ರೆಸ್ ಮಾತ್ರ. RSS ಮಾರ್ಗದರ್ಶನದಂತೆ ಬಡವರ ಕಾರ್ಯಕ್ರಮಗಳನ್ನು ಬಿಜೆಪಿಯವರು ರದ್ದು ಮಾಡಿದ್ದಾರೆ ಎಂದರು.

ಆರ್ ಎಸ್ ಎಸ್ ನವರಿಗೆ ಬಡವರು ಮುಖ್ಯವಾಹಿನಿಗೆ ಬರುವುದು ಬೇಕಾಗಿಲ್ಲ. ಬಡವರು ಬಡವರಾಗಿಯೇ ಉಳಿದು ಸದಾಕಾಲ ಸೇವಕರಾಗಿಯೇ ಇರಬೇಕು ಎನ್ನುವುದು ಬಿಜೆಪಿ ಸಿದ್ಧಾಂತ. ಬಡವರ ವಿರೋಧಿ ಬಿಜೆಪಿ ಬಡವರ ಪರವಾದ ಎಲ್ಲ ಕಾರ್ಯಕ್ರಮಗಳನ್ನೂ ರದ್ದುಗೊಳಿಸುತ್ತಿದೆ ಎಂದು ಸಿದ್ದರಾಮಯ್ಯ ಆಕ್ರೋಶ  ವ್ಯಕ್ತಪಡಿಸಿದ್ದಾರೆ.

ಕೇಂದ್ರ ಸರ್ಕಾರದ ಜನವಿರೋಧಿ ನೀತಿಯನ್ನು ಕಾಂಗ್ರೆಸ್ ಪಕ್ಷ ವಿರೋಧಿಸುತ್ತಿದ್ದು, ವಿಬಿ ರಾಮ್ ಜಿ ರದ್ದುಪಡಿಸಿ ನರೇಗಾ ಪುನರ್ಸ್ಥಾಪನೆಯಾಗುವವರೆಗೆ ಹೋರಾಟ ಮುಂದುವರೆಸಲಾಗುವುದು.  ಬಿಜೆಪಿಯವರು ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಕಾಯ್ದೆ (MGNREGA) ಕಾಯ್ದೆಯನ್ನು ರದ್ದು ಮಾಡಿ, ದುರುದ್ದೇಶದಿಂದ ವಿಬಿ ಜಿ ರಾಮ್ ಜಿ ಕಾಯ್ದೆಯನ್ನು ಜಾರಿಗೆ ತಂದಿದ್ದಾರೆ. ಹೊಸ ಕಾಯ್ದೆಗೆ ವಿಕಸಿತ ಭಾರತ- ಗ್ಯಾರಂಟಿ ಫಾರ್ ರೋಜ್ಗಾರ್ ಮತ್ತು ಆಜೀವಿಕ ಮಿಶನ್ (ಗ್ರಾಮೀಣ) ಎಂಬ ಹೆಸರಿಟ್ಟಿದ್ದಾರೆ ಎಂದು ತಿಳಿಸಿದರು.

2005 ರಲ್ಲಿ ಮನಮೋಹನ್ ಸಿಂಗ್ ಪ್ರದಾನಿಯಾಗಿದ್ದ ಸಂದರ್ಭದಲ್ಲಿ ನರೇಗಾ ಕಾಯ್ದೆಯನ್ನು ಜಾರಿಗೆ ತಂದಿದ್ದರು. ಅಂತೆಯೇ ಆಹಾರ ಹಕ್ಕು, ಕೆಲಸದ ಹಕ್ಕು, ಶಿಕ್ಷಣ ಹಕ್ಕು, ಮಾಹಿತಿ ಹಕ್ಕು, ಅರಣ್ಯ ಕಾಯ್ದೆ ಗಳನ್ನು ಕಾಂಗ್ರೆಸ್ನ ಸರ್ಕಾರದ ಅವಧಿ ಯಲ್ಲಿಯೇ ಜಾರಿಗೆ ಬಂದ ಜನಪರ ಕಾಯ್ದೆಗಳಾಗಿದ್ದುವು. ಕಾಂಗ್ರೆಸ್ ಸರ್ಕಾರ ಎಂದಿಗೂ ಮಹಿಳೆಯರಿಗೆ, ದಲಿತರಿಗೆ ಹಿಂದುಳಿದವರಿಗೆ, ಅಲ್ಪಸಂಖ್ಯಾತರಿಗೆ ಸಣ್ಣ ರೈತರು ಬಗ್ಗೆ ಕೇವಲ ಕಾಂಗ್ರೆಸ್ ಪಕ್ಷ ಮಾತ್ರ ಚಿಂತನೆ ಮಾಡುತ್ತದೆ ಎಂದರು.

ಬಿಜೆಪಿಯವರು  ಗ್ರಾಮೀಣ ಪ್ರದೇಶಗಳಲ್ಲಿ ಜನರಿಗೆ ಉದ್ಯೋಗ ಸಿಗದಂತೆ ಮಾಡುತ್ತಿದ್ದಾರೆ. ಶೇ. 53 ರಷ್ಟು ಮಹಿಳೆಯರು, ಶೇ. 28 ರಷ್ಟು ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದವರು ಮತ್ತು  5 ಲಕ್ಷ ಅಂಗವಿಕಲರು ಕೂಲಿ ಕೆಲಸದಲ್ಲಿ ನಿರತರಾಗಿದ್ದು, ನರೇಗಾ ಯೋಜನೆಯಿಂದ ಎಲ್ಲರಿಗೂ ಉದ್ಯೋಗ ಸಿಗುವಂತಾಗಿತ್ತು. ಆದರೆ ಕೇಂದ್ರ ಸರ್ಕಾರ, ಆರ್ ಎಸ್ ಎಸ್ ಅವರ ಜೊತೆಗೂಡಿ ಬಡಜನರು ಸದಾ ಸೇವಕರಾಗಿಯೇ ಇರಬೇಕೆಂದು ಹುನ್ನಾರ ಮಾಡಿದ್ದಾರೆ. ಈಗ ಬಡವರ ಗ್ರಾಮೀಣ ಬಡಜನರ ಕೆಲಸವನ್ನು ಸ್ಥಳೀಯ ಗ್ರಾಮೀಣ ಆಡಳಿತ ಬಿಟ್ಟು , ದಿಲ್ಲಿಯಲ್ಲಿ ನಿರ್ಧರಿಸಲಾಗುತ್ತದೆ ಎಂದು ಹೇಳಿದರು.

ಎಲ್ಲ ಗ್ರಾಮಪಂಚಾಯತಿಗಳಲ್ಲಿ ಬಡ ಕೂಲಿ ಕಾರ್ಮಿಕರಿಗೆ ಕೆಲಸ ಸಿಗುವ ಅವಕಾಶವಿಲ್ಲ. ನರೇಗಾ ಯೋಜನೆಯಿಂದ, ಹಿಂದೆ ಕೂಲಿಗಾರರಿಗೆ 100 ದಿನಗಳ ಕೆಲಸ ಖಾತ್ರಿಯಾಗಿ ಸಿಗುತ್ತಿತ್ತು.  ನರೇಗಾ ಅಡಿಯಲ್ಲಿ ವೆಚ್ಚಮಾಡಲಾಗುವ ಅನುದಾನವನ್ನು ಕೇಂದ್ರ ಸರ್ಕಾರವೇ ನೀಡುತ್ತಿತ್ತು. ಈಗ ಈ ಅನುದಾನವನ್ನು ನಿಲ್ಲಿಸಲಾಗಿದ್ದು, ಕೇಂದ್ರದ ಈ ಹೊಸ ಕಾಯ್ದೆಯಂತೆ ಶೇ. 40 ರಷ್ಟು ರಾಜ್ಯ ಸರ್ಕಾರಗಳು ಕೊಟ್ಟು, ಕೇಂದ್ರ ಶೇ. 60 ರಷ್ಟು ಮಾತ್ರ ಪಾವತಿಸುತ್ತವೆ ಎಂದರು.

ಕೇಂದ್ರದ ಇಂತಹ ಜನವಿರೋಧಿ ನೀತಿಯಿಂದ ಹಲವು ರಾಜ್ಯಗಳು ಕಷ್ಟಕ್ಕೆ ಸಿಲುಕಿವೆ. ಆದ್ದರಿಂದ ನಮ್ಮ ಸರ್ಕಾರ ಹಾಗೂ ಕಾಂಗ್ರೆಸ್ ಪಕ್ಷ, ಕೇಂದ್ರದ ನೀತಿಯ್ನು ಪ್ರತಿಭಟಿಸುತ್ತಿದೆ. ಈ ಕಾಯ್ದೆಯನ್ನು ರದ್ದುಪಡಿಸಿ, ಪುನ: ನರೇಗಾ ವನ್ನು ಪುನರ್ ಸ್ಥಾಪಿಸುವವರೆಗೂ ಇಡೀ ದೇಶದ ಜನರು ಈ ಹೋರಾಟ ಮುಂದುವರಸಬೇಕಿದೆ. ಈ ಬಾರಿ ರೈತರು, ಕಾರ್ಮಿಕರು, ಮಹಿಳೆಯರು ಈ ಹೋರಾಟದಲ್ಲಿ ಕೈಜೋಡಿಸಲಿದ್ದಾರೆ ಎಂದರು.

ನರೇಗಾ ರದ್ಧತಿ ಬಗ್ಗೆ ವಿಶೇಷ ಅಧಿವೇಶನ- ಬಿಜೆಪಿ ಚರ್ಚಿಸುತ್ತಿಲ್ಲ

ಡಾ.ಬಿ.ಆರ್. ಅಂಬೇಡ್ಕರ್ ಹೇಳಿದಂತೆ ದೇಶದಲ್ಲಿ ಸಮಾನತೆ ಸ್ಥಾಪನೆಯಾಗಿಸಲು ಆರ್ಥಿಕ ,ಸಾಮಾಜಿಕ ಸ್ವಾತಂತ್ರ್ಯ ಎಲ್ಲರಿಗೂ ದೊರೆಯಬೇಕು. ಮಹಾತ್ಮಾ ಗಾಂಧಿಯವರು ಗ್ರಾಮ ಸ್ವರಾಜ್ಯ ಪ್ರತಿಪಾದಿಸಿದರು. ಗೋಡ್ಸೆಯವರು ಮಹಾತ್ಮಾ ಗಾಂಧಿಯವರ ಹತ್ಯೆಯನ್ನು ಮಾಡಿದರೆ, ಬಿಜೆಪಿಯವರು ನರೇಗಾ ಯೋಜನೆಯನ್ನು ರದ್ದುಗೊಳಿಸುವ ಮೂಲಕ, ಮಹಾತ್ಮಾ ಗಾಂಧಿಯವರನ್ನು ಮತ್ತೊಮ್ಮೆ ಹತ್ಯೆ ಮಾಡಿದಂತಾಗಿದೆ. ಬಿಜೆಪಿಯವರು ಈಗ ಸುಳ್ಳು ಹೇಳುತ್ತಿದ್ದಾರೆ . ಈ ಕಾಯ್ದೆಯ ರದ್ದತಿಯ ಬಗ್ಗೆ ಚರ್ಚಿಸಲು ವಿಶೇಷ ಅಧಿವೇಶನವನ್ನು ಕರೆಯಲಾಗಿದೆ. ಆದರೆ ಬಿಜೆಪಿಯವರು ಅಧಿವೇಶನದಲ್ಲಿ ಚರ್ಚೆಗೆ ಅವಕಾಶ ನೀಡುತ್ತಿಲ್ಲ. ಆದರೆ ರದ್ದತಿಯ ವಿರುದ್ಧ ಸರ್ಕಾರ ಖಂಡಿತ ನಿರ್ಣಯ ಕೈಗೊಳ್ಳಲಿದೆ ಎಂದು ತಿಳಿಸಿದರು.

Related Posts

Leave a Reply

Your email address will not be published. Required fields are marked *