Wednesday, January 28, 2026
Menu

ಮಂಗನಕಾಯಿಲೆಗೆ ತೀರ್ಥಹಳ್ಳಿ ಯುವಕ ಬಲಿ

ಶಿವಮೊಗ್ಗದ ತೀರ್ಥಹಳ್ಳಿ ತಾಲೂಕಿನ ಕಟಗಾರು ಗ್ರಾಮದ 29 ವರ್ಷದ ಯುವಕ ಮಂಗನಕಾಯಿಲೆ (ಕೆಎಫ್ ಡಿ)ಯಿಂದ ಮೃತಪಟ್ಟಿದ್ದಾರೆ.   ಸೋಂಕಿನಿಂದಾಗಿ  ತೀವ್ರ ಜ್ವರದಿಂದ ಬಳಲುತ್ತಿದ್ದ ಅವರು ಕಳೆದ ಭಾನುವಾರದಿಂದ  ಮಣಿಪಾಲ್ ಆಸ್ಪತ್ರೆ ಯಲ್ಲಿ ಚಿಕಿತ್ಸೆ  ಪಡೆಯುತ್ತಿದ್ದರೂ ಫಲಕಾರಿಯಾಗದೆ ಅಸು ನೀಗಿದ್ದಾರೆ.

ಜಿಲ್ಲಾ ಆರೋಗ್ಯ ಇಲಾಖೆಯು ಈಗಾಗಲೇ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದು, ಕಟಗಾರು ಮತ್ತು ಸುತ್ತಮುತ್ತಲ ಗ್ರಾಮಗಳಲ್ಲಿ ಜ್ವರದ ಲಕ್ಷಣವಿರುವವರ ತಪಾಸಣೆಗೆ ಸೂಚಿಸಿದೆ. ಮಂಗಗಳು ಸತ್ತಿರುವುದು ಕಂಡುಬಂದಲ್ಲಿ ಕೂಡಲೇ ಮಾಹಿತಿ ನೀಡುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಲಾಗಿದೆ.

ವಸತಿ ಶಾಲೆಯ ವಿದ್ಯಾರ್ಥಿನಿಯರಿಗೆ ಕೆಮ್ಮು ಆಸ್ಪತ್ರೆಗೆ ದಾಖಲು

ಶಿವಮೊಗ್ಗ  ನಗರದ ರಾಗಿಗುಡ್ಡ ಪ್ರದೇಶದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆಯಲ್ಲಿ ಓದುತ್ತಿರುವ ವಿದ್ಯಾರ್ಥಿನಿಯರಲ್ಲಿ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿದೆ.  14 ವಿದ್ಯಾರ್ಥಿನಿಯರಿಗೆ ಕಳೆದ ಮೂರು ದಿನಗಳಿಂದ ನಿರಂತರ ಕೆಮ್ಮು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆತಂಕ ವ್ಯಕ್ತವಾಗಿದೆ. ಕೆಮ್ಮು ತೀವ್ರಗೊಂಡ ಕಾರಣ ವಿದ್ಯಾರ್ಥಿನಿಯರನ್ನು ಶಿವಮೊಗ್ಗದ ಮೆಗ್ಗಾನ್ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

6 ರಿಂದ 10ನೇ ತರಗತಿಯ ವಿದ್ಯಾರ್ಥಿನಿಯರಲ್ಲಿ ಈ ಸಮಸ್ಯೆ ಕಂಡುಬಂದಿದ್ದು, ವಸತಿ ಶಾಲೆಯ ವಾರ್ಡನ್ ನಿರಂತರ ಕೆಮ್ಮಿನ ಹಿನ್ನೆಲೆಯಲ್ಲಿ ಆತಂಕಗೊಂಡಿದ್ದಾರೆ. ಇದು ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ ಬಾಲಕಿಯರ ವಸತಿ ಶಾಲೆ ಆಗಿದ್ದು, ಪ್ರಕರಣದ ಗಂಭೀರತೆಯನ್ನು ಗಮನಿಸಿ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತ್ ಸಿಇಒ, ತಹಶೀಲ್ದಾರ್ ಹಾಗೂ ಆರೋಗ್ಯಾಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಿದ್ಯಾರ್ಥಿನಿಯರ ಆರೋಗ್ಯದ ಬಗ್ಗೆ ಹೆಚ್ಚಿನ ತನಿಖೆ ಮತ್ತು ಅಗತ್ಯ ಕ್ರಮಗಳನ್ನು ಆರೋಗ್ಯ ಇಲಾಖೆ ಕೈಗೊಂಡಿದೆ.

Related Posts

Leave a Reply

Your email address will not be published. Required fields are marked *