Menu

ಬೆಳಗಾವಿ ಗಡಿಯಲ್ಲಿ 400 ಕೋಟಿ ರೂ. ದರೋಡೆ: ಪ್ರಮುಖ ಆರೋಪಿ ಕಿಶೋರ್‌ ಸಾಳ್ವೆ ಪೊಲೀಸ್‌ಗೆ ಶರಣು

ಕರ್ನಾಟಕ-ಮಹಾರಾಷ್ಟ್ರ ಗಡಿಯ ಚೋರ್ಲಾ ಘಾಟ್‌ನಲ್ಲಿ ಎರಡು ಕಂಟೇನರ್‌ಗಳಲ್ಲಿದ್ದ 400 ಕೋಟಿ ರೂ. ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಕಿಶೋರ್ ಸಾಳ್ವೆಯನ್ನು ಬಂಧಿಸಲಾಗಿದೆ. ಇ ಕಿಶೋರ್ ಸಾಳ್ವೆ ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಘೋಟಿ ಪೊಲೀಸ್ ಠಾಣೆಗೆ ತೆರಳಿ ಶರಣಾದ ಬಳಿಕ ಬಂಧಿಸಲಾಗಿದೆ.

ಕಿಶೋರ್ ಸಾಳ್ವೆ ಬಂಧನದೊಂದಿಗೆ ದರೋಡೆ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ಎಂಟಕ್ಕೆ ಏರಿಕೆಯಾಗಿದೆ. ಮಹಾರಾಷ್ಟ್ರ ಸರ್ಕಾರ ತನಿಖೆಯನ್ನು ಬಿಗಿಗೊಳಿಸಿ ಮುಂದುವರಿಸುವಂತೆ ಪೊಲೀಸ್‌ ಇಲಾಖೆಗೆ ಕಟ್ಟುನಿಟ್ಟಾಗಿ ಆದೇಶಿಸಿದೆ. ಪ್ರಕರಣದ ದೂರುದಾರ ಸಂದೀಪ್ ಪಾಟೀಲ್ ಅವರ ಕಿಡ್ನ್ಯಾಪ್ ಮತ್ತು 400 ಕೋಟಿ ರೂ. ದರೋಡೆ ಸಂಬಂಧ ಎಸ್‌ಐಟಿ ತನಿಖೆ ನಡೆಸುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ವೈರಲ್ ಆಗಿರುವ ಆಡಿಯೋವನ್ನು ಎಸ್‌ಐಟಿ ಪರಿಶೀಲನೆ ನಡೆಸಿದೆ.

ಎಸ್‌ಐಟಿ ತನಿಖೆಯ ವಿರುದ್ಧವೇ ದೂರುದಾರ ಸಂದೀಪ್ ಪಾಟೀಲ್ ಇತ್ತೀಚೆಗೆ ಆರೋಪ ಮಾಡಿ ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿದ್ದರು. ತನಿಖೆಯಲ್ಲಿ ಪಾರದರ್ಶಕತೆ ಇಲ್ಲ. ಒತ್ತಡ ಮತ್ತು ಏಕಪಕ್ಷೀಯ ತನಿಖೆ ನಡೆಯುತ್ತಿದೆ ಎಂದು ಆರೋಪಿಸಿದ್ದರು.

ಬೆಳಗಾವಿ ಜಿಲ್ಲೆಯ ಚೋರ್ಲಾ ಘಾಟ್ ಪ್ರದೇಶದಲ್ಲಿ 2025 ರ ಅಕ್ಟೋಬರ್ 25 ರಂದು ಎರಡು ಕಂಟೇನರ್‌ಗಳಲ್ಲಿದ್ದ 400 ಕೋಟಿ ರೂ. ದರೋಡೆ ಮಾಡಲಾಗಿತ್ತು ಎಂದು ನಾಸಿಕ್ ಮೂಲದ ಉದ್ಯಮಿ ಸಂದೀಪ್ ದತ್ತಾ ಪಾಟೀಲ್ ಇತ್ತೀಚೆಗೆ ಮಹಾರಾಷ್ಟ್ರ  ಪೊಲೀಸರಿಗೆ ದೂರು ನೀಡಿದ್ದರು. ದೂರುದಾರರ ಪ್ರಕಾರ, ದರೋಡೆಯಾದ ಹಣ ಗುಜರಾತ್ ಮೂಲದ ಬಿಲ್ಡರ್ ಕಿಶೋರ್ ಸವಲಾ ಸೇಠ್‌ ಅವರಿಗೆ ಸೇರಿದ್ದು, ಅದರಲ್ಲಿ ರದ್ದಾದ 2,000 ರೂ. ಮುಖಬೆಲೆಯ ನೋಟುಗಳೂ ಇದ್ದವು ಎನ್ನಲಾಗಿದೆ.

ದರೋಡೆ  ನಡೆದು ತಿಂಗಳ ಬಳಿಕ ಪ್ರಕರಣ ಪತ್ತೆಯಾಗಿದ್ದು, ಮೂರು ರಾಜ್ಯದ ಪೊಲೀಸರೇ ಬೆಚ್ಚಿಬೀಳುವಂತಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ನಡೆದ ಈ ದರೋಡೆ ಪ್ರಕರಣ ಮಹಾರಾಷ್ಟ್ರದಲ್ಲಿ ಸಂಚಲನ ಸೃಷ್ಟಿಸಿತ್ತು. ಹಾಗಾಗಿ ಕರ್ನಾಟಕ, ಮಹಾರಾಷ್ಟ್ರ ಮತ್ತು ಗೋವಾ ಪೊಲೀಸರು ಕಂಟೇನರ್ ಹುಡುಕಾಟಕ್ಕೆ ಕಾರ್ಯಾಚರಣೆ ತೀವ್ರಗೊಳಿಸಿದ್ದರು. ಮಹಾರಾಷ್ಟ್ರ ‌ಸಿಎಂ ದೇವೇಂದ್ರ ಫಡ್ನವಿಸ್, ಪ್ರಕರಣ ತನಿಖೆಗೆ ಎಸ್ಐಟಿ ರಚನೆ ಮಾಡಿ ಆದೇಶ ಹೊರಡಿಸಿದ್ದರು.

ಕಂಟೇನರ್ ದರೋಡೆ ಆದ ಬಳಿಕ ಕಿಶೋರ್  ಸಹಚರರು ಸಂದೀಪ್ ಪಾಟೀಲ್​​ಗೆ ಗನ್ ಪಾಯಿಂಟ್ ತೋರಿಸಿ ಅಪಹರಿ ಸಿದ್ದರು. ಕಂಟೇನರ್ ಹೈಜಾಕ್‌ಗೆ ನೀನೇ ಕಾರಣ ಎಂದು ಒಂದೂವರೆ ತಿಂಗಳು ಒತ್ತೆಯಾಳಾಗಿಸಿಕೊಂಡು ಚಿತ್ರಹಿಂಸೆ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.

400 ಕೋಟಿ ರೂ ಹಣ ಕೊಡದಿದ್ದರೆ ಜೀವ ತೆಗೆಯುತ್ತೇವೆಂದು ಬೆದರಿಕೆ ಹಾಕಿದ್ದಾರೆ. ಅಪಹರಣಕಾರರಿಂದ ತಪ್ಪಿಸಿಕೊಂಡು ಬಂದ ಸಂದೀಪ್​​ ನಾಸಿಕ್ ಪೊಲೀಸ್​ ಠಾಣೆಗೆ ದೂರು ನೀಡಿದ್ದರು. 400 ಕೋಟಿ ರೂ.ಗಳಿದ್ದ ವಾಹನ ಅಪಹರಿಸಿರುವ ಬಗ್ಗೆ
ಸಂದೀಪ್ ಪಾಟೀಲ್​​ ಹೇಳಿಕೆ ಬಿಡುಗಡೆ ಮಾಡಿದ್ದು, ಇದು 400 ಕೋಟಿ ರೂ.ಪ್ರಕರಣ ಅಲ್ಲ, 1000 ಕೋಟಿ ರೂ ಪ್ರಕರಣ. ಚೋರ್ಲಾ ಘಾಟ್​ನಲ್ಲಿ ರದ್ದಾದ 2000 ನೋಟು ತುಂಬಿದ ಹಣದ ಕಂಟೇನರ್​ ದರೋಡೆ ಆಗಿದೆ. ಆರೋಪಿಗಳು‌ ಬಿಲ್ಡರ್ ಕಿಶೋರ್​​​ಗೆ ನನ್ನ ಹೆಸರಿನಿಂದ ಕರೆ ಮಾಡಿ 100 ಕೋಟಿ ರೂ. ಡಿಮ್ಯಾಂಡ್​​ ಮಾಡಿರುವುದಾಗಿ ಹೇಳಿದ್ದರು.

Related Posts

Leave a Reply

Your email address will not be published. Required fields are marked *