ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್‌ನಲ್ಲಿ ಕರ್ನಾಟಕ, ಕೇರಳ ಮತ್ತು ಒಡಿಶಾಗಳ ಪ್ರಮುಖ ತಾಣಗಳನ್ನು ಪ್ರವಾಸೋದ್ಯಮ ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಹೊಸ ಯೋಜನೆಗಳನ್ನು ಪ್ರಕಟಿಸಿದ್ದಾರೆ. ದೇಶಾದ್ಯಂತ 15 ಪುರಾತತ್ವ ಸ್ಥಳಗಳಿಗೆ ಕಾಯಕಲ್ಪ ನೀಡುವುದಾಗಿ ಘೋಷಿಸಿದ್ದಾರೆ.
ರೇಷ್ಮೆ, ಉಣ್ಣೆ ಮತ್ತು ಸೆಣಬಿಗೆ ಸಂಬಂಧಿಸಿದ ನಾರುಗಳಲ್ಲಿ ಸ್ವಾವಲಂಬನೆ ಸಾಧಿಸಲು ರಾಷ್ಟ್ರೀಯ ಫೈಬರ್ ಯೋಜನೆ, ಸಾಂಪ್ರದಾಯಿಕ ಕ್ಲಸ್ಟರ್‌ಗಳನ್ನು ಆಧುನೀಕರಿಸಲು ಜವಳಿ ವಿಸ್ತರಣೆ ಮತ್ತು ಉದ್ಯೋಗ ಯೋಜನೆ ಘೋಷಿಸಲಾಗಿದೆ.
ನೇಕಾರರು ಮತ್ತು ಕುಶಲಕರ್ಮಿಗಳ ಕಲ್ಯಾಣಕ್ಕಾಗಿ ರಾಷ್ಟ್ರೀಯ ಕೈಮಗ್ಗ ಮತ್ತು ಕರಕುಶಲ ಕಾರ್ಯಕ್ರಮ ಮೆಗಾ ಜವಳಿ ಪಾರ್ಕ್‌ಗಳನ್ನು ಸ್ಥಾಪಿಸುವ ಪ್ರಸ್ತಾಪ ಮಾಡಲಾಗಿದೆ. ಉತ್ಪಾದಕತೆಯನ್ನು ಹೆಚ್ಚಿಸಲು ತೆಂಗಿನಕಾಯಿ ಉತ್ಪಾದನಾ ಯೋಜನೆಯನ್ನು ಪ್ರಕಟಿಸಲಾಗಿದೆ.
ಹೈನೋದ್ಯಮಿಗಳಿಗೆ ಸಾಲ ಸೌಲಭ್ಯ ನೀಡಲು ಕ್ರಮ, ಮೀನುಗಾರಿಕೆ, ಕೋಳಿ ಸಾಗಾಣಿಕೆಗೆ ಹೆಚ್ಚು ಒತ್ತು ನೀಡಲಾಗುವುದು ಎಂದು ತಿಳಿಸಿದ್ದಾರೆ. ಬಜೆಟ್‌ನಲ್ಲಿ ಕೃಷಿ ಇಲಾಖೆಗೆ ಕಳೆದ ವರ್ಷ 1.71 ಲಕ್ಷ ಕೋಟಿ ರೂ. ಅನುದಾನ ನೀಡಲಾಗಿತ್ತು. ಆದರೆ ಈ ವರ್ಷ 1.62 ಲಕ್ಷ ಕೋಟಿಯಷ್ಟೇ ಮೀಸಲಿಡಲಾಗಿದೆ.


