Menu

ಎಸ್‌ಐಆರ್‌ ವಿರೋಧಿಸಿ ಇಸಿಐ ವಿರುದ್ಧ ಸುಪ್ರೀಂ ಮೆಟ್ಟಿಲೇರಿದ ದೀದಿ

ಭಾರತ ಚುನಾವಣಾ ಆಯೋಗ ಮತ್ತು ಪಶ್ಚಿಮ ಬಂಗಾಳದ ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಅಗರ್ವಾಲ್ ವಿರುದ್ಧ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ನಡೆಸುತ್ತಿರುವುದನ್ನು ವಿರೋಧಿಸಿ ಮಮತಾ ನೇತೃತ್ವದ 15 ಸದಸ್ಯರನ್ನು ಒಳಗೊಂಡ ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಿಯೋಗ ದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಭೇಟಿ ಮಾಡಲಿದೆ.

ಫೆಬ್ರವರಿ ಅಂತ್ಯದ ವೇಳೆಗೆ ಚುನಾವಣಾ ಆಯೀಗ ವಿಧಾನಸಭಾ ಚುನಾವಣೆಯ ದಿನಾಂಕ ಘೋಷಿಸುವ ಸಾಧ್ಯತೆ ಇದೆ, ಹೀಗಾಗಿ ಎಸ್‌ಐಆರ್ ಪ್ರಕ್ರಿಯೆ ನಡೆಸುವುದರ ವಿರುದ್ಧ ಈಗಾಗಲೇ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಕಾನೂನು ಹೋರಾಟ ಆರಂಭಗೊಂಡಿದೆ.

ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆ “ಮನಬಂದಂತೆ, ಅಸ್ತವ್ಯಸ್ತವಾಗಿದೆ ಮತ್ತು ದೋಷಪೂರಿತವಾಗಿದೆ. ಇದು ಪ್ರಜಾಪ್ರಭುತ್ವದ ಅಡಿಪಾಯಕ್ಕೆ ಧಕ್ಕೆ ತರಲಿದೆ” ಎಂದು ಮಮತಾ ಅರ್ಜಿಯಲ್ಲಿ ಕಳವಳ ವ್ಯಕ್ತಪಡಿಸಿದ್ದಾರೆ.

ಬಂಗಾಳದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗಳ ಹಿನ್ನೆಲೆಯಲ್ಲಿ ಚುನಾವಣಾ ಆಯೋಗದ ‘ವಿಶೇಷ ತೀವ್ರ ಪರಿಷ್ಕರಣೆ’ ಪ್ರಕ್ರಿಯೆ ಮತದಾರರನ್ನು ಅನರ್ಹಗೊಳಿಸುವ ಸಂಚು ಎಂದು ಆರೋಪಿಸಿದ್ದಾರೆ. ತೃಣಮೂಲ ಕಾಂಗ್ರೆಸ್ ಸಂಸದರು ಮತ್ತು ಸ್ವತಃ ಮಮತಾ ಬ್ಯಾನರ್ಜಿ ಸಲ್ಲಿಸಿರುವ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಪರಿಗಣನೆಗೆ ತೆಗೆದುಕೊಂಡಿದೆ.

Related Posts

Leave a Reply

Your email address will not be published. Required fields are marked *