ಕನಕಪುರ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅನಿಲ ಸೋರಿಕೆಯಾಗಿ ಸಂಭವಿಸಿದ್ದ ಅಗ್ನಿ ಆಕಸ್ಮಿಕದಲ್ಲಿ ಗಾಯಗೊಂಡಿದ್ದ ಒಂದೇ ಕುಟುಂಬದ ಮೂವರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ತಂದೆ ಸಿದ್ದರಾಜು (55), ತಾಯಿ ಚಂದ್ರಮ್ಮ (50), ಮಗ ಪ್ರಶಾಂತ್ (22) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಕನಕಪುರ ನಗರದ ಅಮರನಾರಾಯಣ ಬ್ಲಾಕ್ನಲ್ಲಿ ನಾಲ್ಕು ದಿನಗಳ ಮನೆಯಲ್ಲಿ ಅಡುಗೆ ಮಾಡುತ್ತಿರುವಾಗ ಗ್ಯಾಸ್ ಸೋರಿಕೆಯಾಗಿ ಈ ಅಗ್ನಿ ದುರಂತ ಸಂಭವಿಸಿತ್ತು.
ಗಾಯಾಳುಗಳನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನಿಡಲಾಗುತ್ತಿತ್ತು. ಚಿಕಿತ್ಸೆ ಫಲಿಸದೆ ಮೂವರೂ ಅಸು ನೀಗಿದ್ದಾರೆ.
ಆಟೊ ನಿಲ್ಲಿಸುವ ವಿಚಾರಕ್ಕೆ ಗಲಾಟೆ: ಸ್ನೇಹಿತನ ಕೊಲೆ
ಬೆಂಗಳೂರಿನ ನಾಯಂಡಹಳ್ಳಿ ಬಳಿ ಅಂಬೇಡ್ಕರ್ ಕಾಲೋನಿಯಲ್ಲಿ ಮನೆ ಬಳಿ ಆಟೋ ನಿಲ್ಲಿಸುವ ವಿಚಾರಕ್ಕೆ ನಡೆದ ಜಗಳವೊಂದು ಸ್ನೇಹಿತನ ಕೊಲೆಯಲ್ಲಿ ಅಂತ್ಯ ಕಂಡಿದೆ.
ಗುಣ (28) ಕೊಲೆಯಾದ ಯುವಕ. ಈತನ ಸ್ನೇಹಿತ ವಿನೋದ್ ಕೊಲೆ ಆರೋಪಿ. ಘಟನೆಯಲ್ಲಿ ಮತ್ತೊಬ್ಬ ಯುವಕ ವೇಲು ಎಂಬಾತನಿಗೆ ಗಾಯಗಳಾಗಿದ್ದು,ಚಿಕಿತ್ಸೆ ನೀಡಲಾಗುತ್ತಿದೆ.
ಈ ಮೂವರೂ ಅಂಬೇಡ್ಕರ್ ಕಾಲೋನಿಯಲ್ಲಿ ವಾಸವಿದ್ದರು. ಎರಡು ದಿನದ ಹಿಂದೆ ಮನೆ ಬಳಿ ಆಟೊ ನಿಲ್ಲಿಸುವ ವಿಚಾರಕ್ಕೆ ಮೂವರ ನಡುವೆ ಗಲಾಟೆಯಾಗಿತ್ತು. ಬೈಕ್ನಲ್ಲಿ ಬರುತ್ತಿದ್ದ ವೇಲು ಮತ್ತು ಗುಣನನ್ನು ವಿನೋದ್ ಅಡ್ಡಗಟ್ಟಿದ್ದ. ಮಾತಿಗೆ ಮಾತು ಬೆಳೆದು ಇಬ್ಬರಿಗೂ ಚಾಕು ಇರಿದಿದ್ದ. ಗುಣ ಮೃತಪ್ಟಿದ್ದಾನೆ.
ಈ ಮೂವರೂ ಸ್ನೇಹೊಇತರು ಕೊಲೆ ಪ್ರಕರಣವೊಂದರಲ್ಲಿ ಆರೋಪಿಗಳಾಗಿದ್ದರು. ಸ್ಥಳಕ್ಕೆ ಬ್ಯಾಟರಾಯನಪುರ ಪೊಲೀಸರು ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡು ತಲೆಮರೆಸಿಕೊಂಡಿರುವ ಆರೋಪಿ ವಿನೋದ್ಗಾಗಿ ಹುಡುಕಾಟ ನಡೆಸುತ್ತಿದ್ದಾರೆ.


