ನಾವು ರಾಜ್ಯಪಾಲರ ವಿರುದ್ಧ ಇಲ್ಲ. ಕೇಂದ್ರ ಸರ್ಕಾರದ ವಿರುದ್ಧ ಇದ್ದೇವೆ.ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ “ಜೈ ಸಂವಿಧಾನ” ಎನ್ನುವುದನ್ನೂ ಉಲ್ಲೇಖಿಸದೆ, ಓದದೆ ಹೋದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ರಾಜ್ಯಪಾಲರ ಭಾಷಣದ ಮೇಲೆ ವಿಧಾನಸಭೆಯಲ್ಲಿ ನಡೆದ ಚರ್ಚೆಗೆ ಮುಖ್ಯಮಂತ್ರಿ ಹೀಗೆಂದು ಉತ್ತರಿಸಿದರು. ಬಿಜೆಪಿ ಶಾಸಕ ಸುನಿಲ್ ಕುಮಾರ್ ಅವರು ಮಾತಾಡುವಾಗ ‘ಸರ್ಕಾರ ಆಡಳಿತ ಹದಗೆಟ್ಟಿದೆ ಮತ್ತು ಸಂವಿಧಾನರಹಿತ ಸರ್ಕಾರ’ ಹಾಗೂ ನನ್ನನ್ನು “ಅಸಹಾಯಕ ಮುಖ್ಯಮಂತ್ರಿ” ಎಂದು ಕರೆದಿದ್ದಾರೆ. ಕೆಲವು ಬಾರಿ, “ಅಸತ್ಯದ ಎದುರು ಸತ್ಯ ಅಸಹಾಯಕವಾಗಿಬಿಡುತ್ತದೆ ಎಂದು ಮಾರ್ಮಿಕವಾಗಿ ನುಡಿದರು.
ನಾವು ರಾಜ್ಯಪಾಲರ ವಿರುದ್ಧ ಇಲ್ಲ. ಕೇಂದ್ರ ಸರ್ಕಾರದ ವಿರುದ್ಧ ಇದ್ದೇವೆ. ಮನರೇಗಾ ಬದಲಾಯಿಸಿ “ವಿಬಿ ಜಿ ರಾಮ್ ಜಿ” ಎಂದು ಮಾಡಿದ್ದಾರೆ. ಇದರಲ್ಲಿರುವ ರಾಮ, ಧಶರಥ ರಾಮನೂ ಅಲ್ಲ. ಅಯೋಧ್ಯೆ ರಾಮನೂ ಅಲ್ಲ. ಹೆಸರು ಬದಲಾಯಿಸುವುದಕ್ಕೇ ಕೆಲವರನ್ನು ಅವರು ಇಟ್ಟುಕೊಂಡಿದ್ದಾರೆ ಅನ್ನಿಸತ್ತೆ. ಸಂವಿಧಾನದ ಆರ್ಟಿಕಲ್ 176 ಓದಿದ್ದರೆ ಚನ್ನಾಗಿರುತ್ತಿತ್ತು. ಸಂವಿಧಾನ ಜಾರಿಯಾದ ದಿನದಿಂದ ಇವತ್ತಿವರೆಗೆ ಜಂಟಿ ಅಧಿವೇಶನಗಳು ನಡೆದುಕೊಂಡು ಬಂದಿವೆ. ಇದು ಸಂವಿಧಾನದ ಪ್ರಕಾರ ನಡೆದುಕೊಂಡು ಬರುತ್ತಿರುವ ಪದ್ಧತಿ ಎಂದರು.
ಬಿಜೆಪಿ ಅಧಿಕಾರದಲ್ಲಿದ್ದಾಗ ರಾಜ್ಯಪಾಲರಾಗಿದ್ದ ಹಂಸರಾಜ್ ಭಾರದ್ವಜ್ ಅವರ ಬಾಯಲ್ಲೂ ಹೇಳಿಸಿದ್ದೀರಿ. H.D.ಕುಮಾರಸ್ವಾಮಿCM ಆಗಿದ್ದಾಗ “ನರೇಗ ಉದ್ಯೋಗ ಸಂಜೀವಿನಿ” ಎಂದು ಕರೆದಿದ್ದರು. ಈಗ ಬಿಜೆಪಿ ಜೊತೆ ಸೇರಿ ನರೇಗಾ ವಿರೋಧಿಸುತ್ತಿದ್ದಾರೆ.
ರಾಜ್ಯಪಾಲರ ಭಾಷಣದ ಮೇಲೆ ವಿರೋಧಪಕ್ಷದ ನಾಯಕ ಆರ್ ಅಶೋಕ್ ಸೇರಿದಂತೆ 15 ಜನ ಸದಸ್ಯರು ಮಾತನಾಡಿದ್ದಾರೆ. ಕಾಂಗ್ರೆಸ್ ನ ವಂದನಾ ನಿರ್ಣಯ ಮಂಡಿಸಿದ ಪೊನ್ನಣ್ಣ ಮತ್ತು ಪ್ರದೀಪ್ ಈಶ್ವರ್ ರವರು ಅನುಮೋದನೆ ಮಾಡಿದ್ದಾರೆ. 9 ಜನ ಮಾತನಾಡಿದ್ದು, ಜೆಡಿಎಸ್ ನಿಂದ ಸುರೇಶ್ ಬಾಬು ಮತ್ತು ಪಕ್ಷೇತರರಲ್ಲಿ ಇಬ್ಬರು ಸೇರಿದಂತೆ ಒಟ್ಟು 27 ಜನ ಮಾತನಾಡಿದ್ದಾರೆ. ಕಾಂಗ್ರೆಸ್ 5 ಗಂಟೆ 18ನಿಮಿಷ, ಬಿಜೆಪಿಯವರು 8 ಗಂಟೆ 53 ನಿ , ಜೆಡಿಎಸ್ ನವರು 12 ನಿಮಿಷ ಮತ್ತು ಪಕ್ಷೇತರರು 54 ನಿಮಷ ಮಾತನಾಡಿದ್ದು, ಹೀಗೆ ಒಟ್ಟು 15 ಗಂಟೆ 17 ನಿಮಿಷ ಚರ್ಚೆ ನಡೆದಿದೆ ಎಂದು ಮಾಹಿತಿ ನೀಡಿದರು.
ರಾಜ್ಯಪಾಲರು ಪೂರ್ಣ ಭಾಷಣವನ್ನು ಓದದೇ, ಮೊದಲನೇ ಹಾಗೂ ಕಡೆಯ ಜೈಹಿಂದ್ ಜೈಕರ್ನಾಟಕ ಎಂದು ಓದಿದರು, ಭಾಷಣದಲ್ಲಿ ಬರೆದುಕೊಡಲಾಗಿದ್ದ ‘ಜೈಸಂವಿಧಾನ’ವನ್ನು ಹೇಳಲಿಲ್ಲ. ರಾಷ್ಟ್ರಗೀತೆ ಮುಗಿಯುವವರೆಗೂ ರಾಜ್ಯಪಾಲರು ತೆರಳಬಹುದಿತ್ತು. ಈ ಬಗ್ಗೆ ಸಂವಿಧಾನದ ಕಲಂ 176 , 163 ಬಗ್ಗೆ ಈಗಾಗಲೇ ಚರ್ಚೆ ಮಾಡಲಾಗಿದೆ.
ಜನರು ನಮ್ಮನ್ನು ಅವರ ಪ್ರತಿನಿಧಿಯಾಗಿ ಆಯ್ಕೆ ಮಾಡುತ್ತಾರೆ. ವಿರೋಧಪಕ್ಷದವರ ಮತ್ತು ಸರ್ಕಾರದವರ ಸಿದ್ಧಾಂತಗಳು ವಿಭಿನ್ನವಾಗಿರುತ್ತವೆ. ನಾವಿಬ್ಬರೂ ಪರಸ್ಪರ ಒಪ್ಪಲೇಬೇಕೆಂಬ ಷರತ್ತಿಲ್ಲ. ಆದರೆ ನಾವೆಲ್ಲರೂ ಸಂವಿಧಾನ ಒಪ್ಪಲೇಬೇಕು. ಸಂವಿಧಾನಬದ್ಧವಾಗಿ ಸರ್ಕಾರ, ಆಡಳಿತ ನಡೆಯಲೇಬೇಕು. ಸಂವಿಧಾನವನ್ನು ಯಾವುದೇ ಕಾರಣಕ್ಕೂ ವಿರೋಧಿಸಬಾರದು ಎಂದು ಸಿಎಂ ಹೇಳಿದರು.
ಮನರೇಗಾ ರದ್ದುಪಡಿಸಿ ವಿಬಿಜಿರಾಮ್ ಜಿ (ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಜಿವಿಕ ಮಿಷನ್ ಗ್ರಾಮೀಣ)ವನ್ನು ಕೇಂದ್ರ ಜಾರಿಗೊಳಿಸಿದೆ. ಅದರಲ್ಲಿ ‘ಗ್ರಾಮ’ ಎನ್ನುವ ಪದವೂ ಇಲ್ಲ. ಈ ಕಾಯ್ದೆ ಜಾರಿಗೆ ಮುನ್ನ 176 ಕಲಂರನ್ನು ಕೇಂದ್ರ ವಿಶ್ಲೇಷಣೆ ಮಾಡಬೇಕಿತ್ತು. ಸಂವಿಧಾನ 1950ರಲ್ಲಿ ಜಾರಿಯಾಗಿ, ಇಂದಿನವರೆಗೂ ಹೊಸವರ್ಷದಲ್ಲಿ , ಹೊಸ ಸರ್ಕಾರ ಬಂದಾಗ, ಜಂಟಿ ಅಧಿವೇಶನ ನಡೆಯುತ್ತಲೇ ಬಂದಿದೆ ಎಂದ ಮುಖ್ಯಮಂತ್ರಿ ರಾಜ್ಯಪಾಲರ ವರ್ತನೆ ಬಗ್ಗೆ ನಾಡಿನ ನಾನಾ ಪತ್ರಿಕೆಗಳು ಬರೆದ ಸಂಪಾದಕೀಯದ ಸಾಲುಗಳನ್ನು ಓದಿದರು.


