Wednesday, February 04, 2026
Menu

ವ್ಯಕ್ತಿಯ ಕೊಲೆ: ಕಮಲಾಕರ ಭಟ್‌ ಸೇರಿ ಆರೋಪಿಗಳಿಗೆ ನ್ಯಾಯಾಂಗ ಬಂಧನ

ಸಿದ್ದಾಪುರದಲ್ಲಿ ಅಕ್ರಮ ಸಂಬಂಧ ಬಯಲಾದ ಹಿನ್ನೆಲೆ ನಡೆದ ಹತ್ಯೆ ಪ್ರಕರಣ ಸಂಬಂಧ ಆರೋಪಿಗಳಾದ ಸುಚಿತ್ರಾ, ಲೋಕನಾಥ್, ಕಮಲಾಕರ ಭಟ್ ಮತ್ತು ಆಕಾಶ್ ಎಂಬವರನ್ನು ನ್ಯಾಯಾಂಗ ಬಂಧನಕ್ಕೆ ನೀಡಿ ಸಿದ್ದಾಪುರ ಜೆಎಂಎಫ್​ಸಿ ಕೋರ್ಟ್​ ಆದೇಶ ಮಾಡಿದೆ.

ಈ ಕೊಲೆ ಪ್ರಕರಣಕ್ಕೆ ಸಾರ್ವಜನಿಕ ವಲಯದಲ್ಲೂ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಗ್ರಾಮಸ್ಥರು ಸಿದ್ದಾಪುರ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ, ಕಮಲಾಕರ್ ಭಟ್ ಅವರನ್ನು ಹತ್ತು ನಿಮಿಷ ವಶಕ್ಕೆ ನೀಡುವಂತೆ ಆಗ್ರಹಿಸಿದ ಘಟನೆಯೂ ನಡೆದಿದೆ. ಎರಡು ಮಕ್ಕಳ ತಾಯಿ ಸುಚಿತ್ರಾ ಜೊತೆ ಕಮಲಾಕರ್ ಭಟ್ ಅಕ್ರಮ ಸಂಬಂಧವೇ ಇದಕ್ಕೆಲ್ಲ ಮೂಲ ಕಾರಣ ಎನ್ನಲಾಗಿದೆ. ಇದೇ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ವಸಂತ್ ಎಂಬವರ ಕೊಲೆಯಾಗಿದೆ.

ಸಿದ್ದಾಪುರ ತಾಲೂಕಿನ ಅವರಗುಪ್ಪ ಗ್ರಾಮದಲ್ಲಿ ಕಮಲಾಕರ ಭಟ್ ಗುರೂಜಿ ಶಿವಮೊಗ್ಗದ ಮಹಿಳೆ ಜೊತೆ ಅಕ್ರಮ ಸಂಬಂಧ ವಿಚಾರದಲ್ಲಿ ನಡೆದ ಗಲಾಟೆಯಲ್ಲಿ ವ್ಯಕ್ತಿಯೊಬ್ಬನ ಕೊಲೆಯಾಗಿತ್ತು. ಮಹಿಳೆಯ ಪತಿ ದೂರು ನೀಡಿದ ಕಾರಣಕ್ಕೆ ಮಹಿಳೆ, ಕಮಲಾಕರ ಭಟ್‌ ಹಾಗೂ ಇತರರು ಸೇರಿ ಮೂವರ ಮೇಲೆ ಹಲ್ಲೆ ನಡೆಸಿದ್ದು, ಒಬ್ಬ ವ್ಯಕ್ತಿ ಮೃತಪಟ್ಟಿದ್ದಾರೆ. ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಪ್ರಕರಣ ಸಂಬಂಧ ಪೊಲೀಸರು ಏಳು ಆರೋಪಿಗಳನ್ನು ಬಂಧಿಸಿದ್ದಾರೆ.

Related Posts

Leave a Reply

Your email address will not be published. Required fields are marked *