ಗದಗದ ರೋಣ ತಾಲೂಕಿನ ಜಿಗಳೂರ ಕ್ರಾಸ್ ಬಳಿ ಕ್ರೂಸರ್ ಹಾಗೂ ಕ್ಯಾಂಟರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಮೂವರು ರೈತ ಮಹಿಳೆಯರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ.
ಮೃತರನ್ನು ಗಜೇಂದ್ರಗಡದ ಶಿವಾಜಿಪೇಟೆ ನಿವಾಸಿಗಳಾದ ಅನ್ನಪೂರ್ಣ (56), ಸಂಗೀತ ಹೊಸಮನಿ (48), ಮರಿಯಂಬೂ ಹುನಗುಂದ (55) ಎಂದು ಗುರುತಿಸಲಾಗಿದೆ. ಇವರು ರೋಣಕ್ಕೆ ಕಡಲೆ ಕೀಳಲು ಹೊರಟಿದ್ದಾಗ ಈ ದುರಂತ ಸಂಭವಿಸಿದೆ.
ಅಪಘಾತದ ತೀವ್ರತೆಗೆ ಕ್ರೂಸರ್ ವಾಹನ ನಜ್ಜುಗುಜ್ಜಾಗಿದೆ. ಹತ್ತಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಆರು ಮಂದಿಯ ಕೈಕಾಲು ಮುರಿದಿದೆ. ಅಪಘಾತದಲ್ಲಿ ಗಾಯಗೊಂಡವರನ್ನು ಗದಗದ ಜಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದು, ಸಾವಿನ ಸಂಖ್ಯೆ ಹೆಚ್ಚುವ ಸಾಧ್ಯತೆ ಇದೆ, ಸ್ಥಳಕ್ಕೆ ರೋಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.


