Thursday, February 05, 2026
Menu

ಕಲ್ಲಂಗಡಿ ಹಣ್ಣನ್ನು ಸಾಗಿಸುತ್ತಿದ್ದ ಟ್ರಕ್​ನಲ್ಲಿ ಸ್ಫೋಟಕಗಳು ಪತ್ತೆ

ಕೇರಳದ ವಲಯಾರ್-ವಡಕ್ಕಂಚೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಲ್ಲಂಗಡಿ ಹಣ್ಣನ್ನು ಸಾಗಿಸುತ್ತಿದ್ದ ಟ್ರಕ್​ನಲ್ಲಿ ಸ್ಫೋಟಕಗಳು ಪತ್ತೆಯಾವೆ. ತಮಿಳುನಾಡಿನ ಧರ್ಮಪುರಿಯ ಪಾಪರಪಟ್ಟಿಯ ಲಾರಿ ಚಾಲಕ ಸೆಂಥಿಲ್ ಕುಮಾರ್​ನನ್ನು ಪೊಲೀಸರು ವಶಕ್ಕೆ ಪಡೆದಿದ್ದು, 100ಕ್ಕೂ ಹೆಚ್ಚು ಪೆಟ್ಟಿಗೆಗಳಲ್ಲಿ ಇದ್ದ ಜಿಲೆಟಿನ್ ಹಾಗೂ ಸ್ಪೋಟಕಗಳನ್ನು ಜಪ್ತಿ ಮಾಡಿದ್ದಾರೆ.

ಪಾಲಕ್ಕಾಡ್ ಸರ್ಕಾರಿ ವೈದ್ಯಕೀಯ ಕಾಲೇಜು ಬಳಿಯ ಸರ್ವೀಸ್ ರಸ್ತೆಯಲ್ಲಿ ಈ ಕಾರ್ಯಾಚರಣೆ ನಡೆದಿದೆ. ಲಾರಿಯ ಮೇಲೆ ರಾಶಿ ಹಾಕಿದ್ದ ಕಲ್ಲಂಗಡಿ ಹಣ್ಣುಗಳನ್ನು ತೆಗೆದು ಪರಿಶೀಲಿಸಿದಾಗ ಪೆಟ್ಟಿಗೆಗಳಲ್ಲಿ ಸ್ಫೋಟಕಗಳನ್ನು ತ್ರಿಶೂರ್​​ಗೆ ಸಾಗಿಸುತ್ತಿರುವುದು ಪತ್ತೆಯಾಗಿದೆ ಎಂದು ಸೆಂಥಿಲ್ ಕುಮಾರ್ ತಿಳಿಸಿದ್ದಾರೆ.

ಇನ್ಸ್​ಪೆಕ್ಟರ್ ವಿಪಿನ್ ಕುಮಾರ್ ನೇತೃತ್ವದಲ್ಲಿ ತನಿಖೆ ನಡೆಸಿದ್ದು, ಬಾಂಬ್ ನಿಷ್ಕ್ರಿಯ ದಳ ಸ್ಥಳಕ್ಕೆ ಧಾವಿಸಿತ್ತು. ಚಾಲಕನಮುಗಿದ ಬಳಿಕ ಹೆಚ್ಚಿನ ಮಾಹಿತಿ ಲಭ್ಯವಾಗಲಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಳೆದ ವರ್ಷ ಪಾಲಕ್ಕಾಡ್ ಮತ್ತು ಕೊಯಮತ್ತೂರಿನ ಪೊಲೀಸರು ತಮಿಳುನಾಡಿನಿಂದ ಕೇರಳಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ ನಲವತ್ತು ಸಾವಿರಕ್ಕೂ ಹೆಚ್ಚು ಜಿಲೆಟಿನ್​ಗಳು ಹಾಗೂ ಐದು ಸಾವಿರಕ್ಕೂ ಹೆಚ್ಚು ಸ್ಪೋಟಕಗಳನ್ನು ವಶಪಡಿಸಿಕೊಂಡಿದ್ದರು.

Related Posts

Leave a Reply

Your email address will not be published. Required fields are marked *