Menu

ಗ್ರಾ.ಪಂ.ಗಳಿಗೆ ಆಡಳಿತಾಧಿಕಾರಿ ನೇಮಕಕ್ಕೆ ಸರ್ಕಾರ ಆದೇಶ

ರಾಜ್ಯದ ಬಹುತೇಕ ಗ್ರಾಮ ಪಂಚಾಯಿತಿಗಳ ಅಧಿಕಾರಾವಧಿ ಇದೇ ಫೆಬ್ರವರಿ-ಮಾರ್ಚ್‌ನಲ್ಲಿ ಮುಗಿಯಲಿರುವ ಬೆನ್ನಲ್ಲೇ ಚುನಾವಣೆ ನಡೆಯುವವರೆಗೂ ಆಡಳಿತಾಧಿಕಾರಿಗಳ ನೇಮಕಕ್ಕೆ ಸರ್ಕಾರ ಆದೇಶ ಹೊರಡಿಸಿದೆ.

ಮತ್ತೊಂದೆಡೆ 2026ರ ಏಪ್ರಿಲ್-ಮೇ ತಿಂಗಳಲ್ಲಿ ಚುನಾವಣೆ ನಡೆಸಲು ಸರ್ಕಾರ ಸಿದ್ಧತೆ ನಡೆಸಿದ್ದು, ಈ ಸಂಬಂಧ ಜಿಲ್ಲಾಧಿಕಾರಿಗಳಿಗೆ ಪೂರ್ವಸಿದ್ಧತೆಗೆ ನಿರ್ದೇಶನ ನೀಡಲಾಗಿದೆ. ಈ ಎಲ್ಲಾ ಬೆಳವಣಿಗಗಳ ನಡುವೆ ಮುಂಬರುವ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್(ಮತಪತ್ರ) ಬಳಕೆಗೆ ಗುರುವಾರ ಸಂಜೆ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.

ಸಭೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆಗೆ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಿದ್ದುಪಡಿ) ವಿಧೇಯಕ 2026ಕ್ಕೆ ಅನುಮೋದನೆ ನೀಡಲಾಗಿದ್ದು ಇದರೊಂದಿಗೆ ಸ್ಥಳೀಯ ಸಂಸ್ಥೆಗಳ ಜಿಲ್ಲಾ, ತಾಲೂಕು, ಪಟ್ಟಣ ಹಾಗೂ ಗ್ರಾಮ ಪಂಚಾಯಿತಿ ಚುನಾವಣೆಗಳಲ್ಲೂ ಬ್ಯಾಲೆಟ್ ಪೇಪರ್ ಬಳಕೆಗೆ ತೀರ್ಮಾನಿಸಲಾಗಿದೆ.

ಜನಸಾಮಾನ್ಯರಲ್ಲಿ ಇವಿಎಂ ಮೇಲಿನ ವಿಶ್ವಾಸಾರ್ಹತೆ ಕಡಿಮೆಯಾಗಿದೆ. ಮತಗಳ್ಳತನಕ್ಕೆ ಸಂಬಂಧಿಸಿದಂತೆ ಹಲವಾರು ದೂರುಗಳು ಬಂದಿವೆ. ಆದ್ದರಿಂದ ಸಚಿವ ಸಂಪುಟವು ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಇವಿಎಂ ಬದಲು ಬ್ಯಾಲೇಟ್ ಪೇಪರ್ ಮೂಲಕ ನಡೆಸುವಂತೆ ಚುನಾವಣೆ ಆಯೋಗಕ್ಕೆ ತಿಳಿಸಲು ನಿರ್ಧರಿಸಲಾಗಿದೆ.

ಈಗಾಗಲೇ ಗ್ರೇಟರ್ ಬೆಂಗಳೂರು (ಜಿಬಿಎ) ಚುನಾವಣೆಯನ್ನೂ ಸಹ ಬ್ಯಾಲೆಟ್ ಪೇಪರ್ ನಡೆಸಲು ನಿರ್ಣಯಿಸಿದ್ದು, ಈ ಬಗ್ಗೆ ರಾಜ್ಯ ಚುನಾವಣೆ ಆಯೋಗವೂ ಸಹ ಜಿಬಿಎ ಎಲೆಕ್ಷನ್ ನಲ್ಲಿ ಇವಿಎಂ ಬಳಸದಿರಲು ತಿಳಿಸಿದೆ. ಇದೀಗ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಸಹ ಬ್ಯಾಲೆಟ್ ಪೇಪರ್ ಮೂಲಕ ನಡೆಸಲು ರಾಜ್ಯ ಸರ್ಕಾರ ತೀರ್ಮಾನ ಮಾಡಿದೆ.

ರಾಜ್ಯದ ಬಹುತೇಕ ಗ್ರಾಮ ಪಂಚಾಯಿತಿಗಳ ಚುನಾಯಿತ ಪ್ರತಿನಿಧಿಗಳ ಅಧಿಕಾರಾವಧಿ ಫೆಬ್ರವರಿ- ಮಾರ್ಚ್ ತಿಂಗಳಲ್ಲಿ ಮುಗಿಯಲಿದೆ. ಹೀಗಾಗಿ 2026ರ ಏಪ್ರಿಲ್- ಮೇ ತಿಂಗಳಲ್ಲಿ ಚುನಾವಣೆ ನಡೆಸಲು ಸರಕಾರ ಸಜ್ಜಾಗಿದೆ.

Related Posts

Leave a Reply

Your email address will not be published. Required fields are marked *