ಮೂರು ವರ್ಷಗಳಿಂದ ಪ್ರೀತಿಸುತ್ತಿದ್ದ ಯುವತಿ ಬೇರೆಯವನನ್ನು ಮದುವೆಯಾಗಲು ಒಪ್ಪಿದ್ದರಿಂದ ನೊಂದುಕೊಂಡ ಬಾಡಿಬಿಲ್ಡರ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ನಲ್ಲಿ ನಡೆದಿದೆ.
ಡೆತ್ ನೋಟ್ನಲ್ಲಿ ಪ್ರೇಯಸಿ ಮತ್ತು ಆಕೆಯ ತಾಯಿ ಹೆಸರನ್ನು ಉಲ್ಲೇಖಿಸಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಮನೆಯಲ್ಲಿ ನೇಣು ಬಿಗಿದುಕೊಂಡು ಬಾಡಿ ಬಿಲ್ಡರ್ ಕಿರಣ್(26) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತನಗೆ ಬೇರೆ ಯುವಕನ ಜೊತೆ ಮದುವೆ ನಿಶ್ಚಯವಾಗಿದೆ ಎಂದು ಯುವತಿ ಕಿರಣ್ಗೆ ಹೇಳಿದ್ದಲ್ಲದೆ ಮದುವೆಯ ಆಮಂತ್ರಣ ಪತ್ರಿಕೆ, ಹೊಸ ಸೀರೆ ತೋರಿಸಿದ್ದಳು. ಇದರಿಂದ ನೊಂದು ಮನೆಗೆ ಬಂದು ಕಿರಣ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ಮಹಾಲಕ್ಷ್ಮೀಲೇಔಟ್ ಠಾಣೆಯ ಪೊಲೀಸರು ಭೇಟಿ ನೀಡಿ ಪರೀಶೀಲನೆ ನಡೆಸಿದ್ದಾರೆ.
ಹಲವು ವರ್ಷಗಳಿಂದ ಜಿಮ್ ಟ್ರೈನರ್ ಆಗಿದ್ದು, ಬಾಡಿ ಬಿಲ್ಡಿಂಗ್ ಮಾಡ್ತಿದ್ದ ಕಿರಣ್, ಪ್ರಿಯತಮೆಗೆ ಪ್ರೇಮಿಗಳ ದಿನಾಚರಣೆಗೆ ಗಿಫ್ಟ್ ಕೊಡಲು ಸಿದ್ಧತೆ ಮಾಡಿಕೊಂಡಿದ್ದರು. ಈ ನಡುವೆ ಪ್ರೇಯಸಿ ಮತ್ತೊಬ್ಬನ ಜೊತೆ ಮದುವೆ ವಿಷಯ ಪ್ರಸ್ತಾಪಿಸಿದ ಕಾರಣ ಆಘಾತಗೊಂಡಿದ್ದರು.
ಆಕೆಯ ಮದುವೆ ವಿಚಾರ ತಿಳಿದು ಬೇಸರದಲ್ಲಿ ಮನೆಗೆ ಬಂದಿದ್ದ ಕಿರಣ್ ಸಂಜೆ ತಾಯಿಯಲ್ಲಿ ವೈಟ್ ಶೀಟ್ ಮತ್ತು ಪೆನ್ ಕೇಳಿದ್ದರು. ತಾಯಿ ಯಾಕೆ ಎಂದು ವಿಚಾರಿಸಿದಾಗ, ಫೈನಾನ್ಸ್ ಲೆಕ್ಕ ಬರೀತಿನಿ ಎಂದು ಕಿರಣ್ ಹೇಳಿದ್ದರಂತೆ. ಘಟನೆ ಸಂಬಂಧ ಯುವತಿ ಹಾಗೂ ಕುಟುಂಬಸ್ಥರ ವಿರುದ್ಧ ಮಹಾಲಕ್ಷ್ಮಿ ಲೇಔಟ್ ಠಾಣೆಗೆ ಕಿರಣ್ ಕುಟುಂಬಸ್ಥರು ದೂರು ನೀಡಿದ್ದು, ತನಿಖೆ ನಡೆಯುತ್ತಿದೆ.


