ಬಬಲೇಶ್ವರ ತಾಲೂಕಿನ ಮಂಗಳೂರು ಗ್ರಾಮದಲ್ಲಿ ಜೆಟ್ ವಿಮಾನವೊಂದು ಭಾನುವಾರ ಪತನಗೊಂಡಿದೆ. ಕಲಬುರಗಿಯಿಂದ ಬೆಳಗಾವಿಗೆ ತೆರಳುತ್ತಿದ್ದಾಗ ಇಂಧನ ಖಾಲಿಯಾದ ಕಾರಣ ವಿಮಾನ ಪತನಗೊಂಡಿದೆ ಎಂಬುದಾಗಿ ಪ್ರಾಥಮಿಕ ಮಾಹಿತಿ ಸಿಕ್ಕಿದೆ. ತಾಂತ್ರಿಕ ದೋಷದಿಂದ ಜೆಟ್ ಉರುಳಿದೆ ಎಂಬ ಮಾತುಗಳೂ ಕೇಳಿ ಬಂದಿವೆ.
ರೆಡ್ ಬರ್ಡ್ ಕಂಪನಿಯ ಖಾಸಗಿ ಕಂಪನಿಯ ವಿಮಾನ ರೈತರ ಜಮೀನಿನ ಮೇಲೆ ಬಿದ್ದಿದೆ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ, ಜೆಟ್ನಲ್ಲಿದ್ದ ಪೈಲಟ್ ಗೌತಮ್ ಮತ್ತು ಸಿಬ್ಬಂದಿ ತೀವ್ರ ಗಾಯಗೊಂಡಿದ್ದು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಮಾನ ಜಮೀನಿನಲ್ಲಿ ಬಿದ್ದಿರುವುದನ್ನು ತಿಳಿದ ಗ್ರಾಮಸ್ಥರು ಬಂದು ಗಾಯಾಳುಗಳನ್ನು ರಕ್ಷಿಸುವ ಕೆಲಸ ಮಾಡಿದ್ದಾರೆ. ಸ್ಥಳಕ್ಕೆ ಬಬಲೇಶ್ವರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ತನಿಖೆ ಕೈಗೊಂಡಿದ್ದಾರೆ.
ಚಿಂದಿ ಆಯುವ ಮಹಿಳೆಯ ರೇಪ್
ಕಲಬುರಗಿ ನಗರದ ಮಾಲಗತ್ತಿ ಕ್ರಾಸ್ ಬಳಿ ಚಿಂದಿ ಆಯುವ ಮಹಿಳೆ ಲೆ ಕೆಲವರು ಹಲ್ಲೆ ಮಾಡಿ ಕಾರಿನಲ್ಲಿ ಬಲವಂತವಾಗಿ ಕರೆದೊಯ್ದು ಅತ್ಯಾಚಾರ ಯತ್ನ ನಡೆಸಿದ್ದಾರೆ ಎಂದು ಸಬ್ ಅರ್ಬನ್ ಠಾಣೆಯಲ್ಲಿ ದೂರು ದಾಖಲಾಗಿದೆ. ಹಲ್ಲೆಗೊಳಗಾಗಿರುವ ಮಹಿಳೆಯನ್ನು ಚಿಕಿತ್ಸೆಗಾಗಿ ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಹಿಳೆ ನೀಡಿದ ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿದ್ದಾರೆ.


