Tuesday, February 10, 2026
Menu

ಶೇಷಾದ್ರಿಪುರಂ ರಸ್ತೆಯಲ್ಲಿ ನವಜಾತ ಶಿಶು ಶವ ಪತ್ತೆ

ಬೆಂಗಳೂರಿನ ಶೇಷಾದ್ರಿಪುರಂ ರೈಲ್ವೆ ಪ್ಯಾರ್ಲೆಲ್‌  ರಸ್ತೆ ಬದಿಯ ಕಸದ ತೊಟ್ಟಿಯಲ್ಲಿ ನವಜಾತ ಗಂಡು ಶಿಶುವಿನ ಶವ ಪತ್ತೆಯಾಗಿದೆ. ಮಗುವಿನ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ.

ಸ್ಥಳಕ್ಕೆ ಶೇಷಾದ್ರಿಪುರಂ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಸ್ಥಳದ ಸುತ್ತಮುತ್ತಲಿನ ಸಿಸಿಟಿವಿ ಕ್ಯಾಮೆರಾಗಳ ವೀಡಿಯೊಗಳನ್ನು ಪರಿಶೀಲಿಸಿ ಆರೋಪಿಗಳ ಪತ್ತೆ ಕಾರ್ಯಕ್ಕೆ ಮುಂದಾಗಿದ್ದಾರೆ.

ಎರಡುವರೆ ವರ್ಷದ ಮಗುವಿನ ಕಿಡ್ಯಾಪ್‌
ಇಬ್ಬರು ಹೆಣ್ಣು ಮಕ್ಕಳಿದ್ದರೂ ಗಂಡು ಮಗು ಬೇಕೆಂಬ ದುರಾಸೆಯಿಂದ ಮಹಿಳೆಯೊಬ್ಬಳು ಎರಡುವರೆ ವರ್ಷದ ಮಗುವನ್ನು ಅಪಹರಿಸಿರುವ ಪ್ರಕರಣ ತುಮಕೂರಿನ ಜಾತ್ರೆಯಲ್ಲಿ ನಡೆದಿದೆ. ಅಪಹೃತ ಮಗು ಬೆಂಗಳೂರಿನ ಕೊರಮಂಗಲ ಪ್ರದೇಶದಲ್ಲಿ ಪತ್ತೆಯಾಗಿದ್ದು, ಸುರಕ್ಷಿತವಾಗಿ ಪೋಷಕರಿಗೆ ಹಸ್ತಾಂತರಿಸಲಾಗಿದೆ.

ಶಿರಾದ ಮಾಗೋಡು ಗ್ರಾಮದಲ್ಲಿ ನಡೆದ ಶ್ರೀರಂಗ ಜಾತ್ರೆಗೆ ತಾತ ಪುಟ್ಟರಂಗಯ್ಯ ಮಗುವನ್ನು ಕರೆ ತಂದಿದ್ದರು. ಆಗ ಬೆಂಗಳೂರಿನ ಲಗ್ಗೆರೆಯ ದಂಪತಿ ಅಪಹರಿಸಿದ್ದರು. ಜಾತ್ರೆಯಲ್ಲಿ ಅಂಗಡಿ ಹಾಕಿದ್ದ ತಾತನೊಂದಿಗೆ ಇದ್ದ ಮಗುವನ್ನು ನೋಡಿದ ಆರೋಪಿಗಳು ಚಾಕೊಲೇಟ್ ಕೊಡಿಸುವ ನೆಪದಲ್ಲಿ ಕರೆದೊಯ್ದಿದ್ದರು. ಶಿರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಡಿವೈಎಸ್‌ಪಿ ಶೇಖರ್ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ಪತ್ತೆ ಕಾರ್ಯಾಚರಣೆ ಕೈಗೊಂಡಿತ್ತು.

ಕೋರಮಂಗಲದಲ್ಲಿರುವ ಶಾಂತಮೇರಿ ಎಂಬ ಮಹಿಳೆಯ ಮನೆಯಲ್ಲಿ ಮಗು ಪತ್ತೆಯಾಗಿದೆ. ಆರೋಪಿ ಶಾಂತಮೇರಿಗೆ ಇಬ್ಬರು ಹೆಣ್ಣು ಮಕ್ಕಳು ಇದ್ದಾರೆ. ಜಾತ್ರೆಗೂ ಎರಡು ದಿನ ಮೊದಲು ತುಮಕೂರಿಗೆ ಬಂದಿದ್ದ ಶಾಂತಮೇರಿ ಮತ್ತು ನರಸಯ್ಯ ಮಗುವನ್ನು ಅಪಹರಿಸಿದ್ದರು. ಜಾತ್ರೆಯ ಸಿಸಿಟಿವಿ ದೃಶ್ಯಾವಳಿಗಳ ಆಧಾರದಲ್ಲಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

Related Posts

Leave a Reply

Your email address will not be published. Required fields are marked *