Menu

ಮನೆ ಮುಂದೆ ಕೆಮ್ಮಿದ್ದಕ್ಕೆ ಹಲ್ಲೆ: ಬಿಡದಿಯಲ್ಲಿ ವ್ಯಕ್ತಿ ಸಾವು

ರಾಮನಗರ ತಾಲೂಕಿನ ಬಿಡದಿಯಲ್ಲಿ ಮನೆ ಮುಂದೆ ವ್ಯಕ್ತಿಯೊಬ್ಬ ಕೆಮ್ಮಿದ ಎಂಬ ಕ್ಷುಲ್ಲಕ ಕಾರಣಕ್ಕೆ ಮಾರಣಾಂತಿಕ ಹಲ್ಲೆ ನಡೆಸಿದ್ದು ಆತ ಮೃತಪಟ್ಟಿದ್ದಾನೆ.

ರಾಜಸ್ಥಾನ ಮೂಲದ ವಿನೋದ್ ಕುಮಾರ್ ಶೈನಿ (34) ಹಲ್ಲೆಯಿಂದ ಅಸು ನೀಗಿದ ವ್ಯಕ್ತಿ. ಅವರು ಕಳೆದ 11 ವರ್ಷಗಳಿಂದ ಬಿಡದಿಯ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ಅಲ್ಲಿಯೇ ವಾಸವಾಗಿದ್ದರು.

ಮೂರು ದಿನಗಳ ಹಿಂದೆ ಮನೆ ಪಕ್ಕದಲ್ಲಿದ್ದ ಸಂಜಯ್ ಅವರೊಂದಿಗೆ ಮಾತಿನ ಚಕಮಕಿ ಉಂಟಾಗಿದ್ದು, ಕೆಮ್ಮಿದ ವಿಚಾರಕ್ಕೆ ಜಗಳ ತೀವ್ರಗೊಂಡಿದೆ. ಸಂಜಯ್, ಹೊಂಬಯ್ಯ (ಹೊಂಬೆಗೌಡ), ವಿಜಯ್ ಸೇರಿ ವಿನೋದ್ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ ಎಂಬ ಆರೋಪವಿದೆ.

ಗಂಭೀರವಾಗಿ ಗಾಯಗೊಂಡ ವಿನೋದ್ ಅವರನ್ನು ತಕ್ಷಣ ಬಿಡದಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಬಿಡದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹಲ್ಲೆ ನಡೆಸಿದ ಆರೋಪಿಗಳು ತಲೆ ಮರೆಸಿಕೊಂಡಿದ್ದಾರೆ. ಆರೋಪಿಗಳ ಬಂಧನಕ್ಕಾಗಿ ಪೊಲೀಸರು ವ್ಯಾಪಕ ಶೋಧ ಕಾರ್ಯಾಚರಣೆ ಕೈಗೊಂಡಿದ್ದಾರೆ.

Related Posts

Leave a Reply

Your email address will not be published. Required fields are marked *