Wednesday, February 11, 2026
Menu

ಥಣಿಸಂದ್ರದಲ್ಲಿ ಬೈಕ್‌ಗೆ ಶಾಲಾ ಬಸ್‌ ಡಿಕ್ಕಿ: ಪುಟ್ಟ ಮಕ್ಕಳಿಬ್ಬರ ಸಾವು

ಶಾಲಾ ಬಸ್‌ ಬೈಕ್‌ಗೆ ಡಿಕ್ಕಿ ಹೊಡೆದು ಕೆಳಗೆ ಬಿದ್ದ ಮಕ್ಕಳ ಮೇಲೆಯೇ ಬಸ್‌ ಚಲಿಸಿದ್ದರಿಂದ ಪುಟ್ಟ ಮಕ್ಕಳಿಬ್ಬರು ಮೃತಪಟ್ಟಿರುವ ದಾರುಣ ಘಟನೆ ಬೆಂಗಳೂರಿನ ಥಣಿಸಂದ್ರದ ಪೊಲೀಸ್‌ ಕ್ವಾರ್ಟಸ್‌ ಬಳಿ ನಡೆದಿದೆ.

ಯಾದಗಿರಿಯ ನಾಗನಗೌಡಸಿಎಆರ್​ನಲ್ಲಿ ಕಾನ್ಸ್​ಟೇಬಲ್​​ ಆಗಿದ್ದು, ಹಾಲು ತರಲೆಂದು ಮಕ್ಕಳನ್ನು ಕರೆದುಕೊಂಡು ಹೋಗುವಾಗ ಈ ದುರಂತ ಸಂಭವಿಸಿದೆ. ಹೆಣ್ಣೂರು ಸಂಚಾರಿ ಠಾಣೆ ವ್ಯಾಪ್ತಿಯ ಥಣಿಸಂದ್ರ ಬಳಿ ಶಾಲಾ ಬಸ್​ ಯೂಟರ್ನ್ ತೆಗೆದುಕೊಳ್ಳುವಾಗ ಬೈಕ್​ಗೆ ಡಿಕ್ಕಿ ಹೊಡೆದಿದೆ. ಬೈಕ್​ನಿಂದ ಕೆಳಗೆ ಬಿದ್ದ ಇಬ್ಬರು ಮಕ್ಕಳ ಮೇಲೆ ಬಸ್ ಹಿಂಬದಿ ಚಕ್ರ ಚಲಿಸಿದ್ದು, ಇಬ್ಬರೂ ಮೃತಪಟ್ಟಿದ್ದಾರೆ.

ಹೆಣ್ಣೂರು ಸಂಚಾರಿ ಪೊಲೀಸ್ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಾನ್‌ಸ್ಟೇಬಲ್‌ಗೆ ಸಣ್ಣಪುಟ್ಟ ಗಾಯಗಳಾಗಿವೆ. ಬಸ್ ಚಾಲಕ ಮಾರೇಪ್ಪನನ್ನು ಪೊಲೀಸರು ಬಂಧಿಸಿದ್ದಾರೆ.  ಮರಣೋತ್ತರ ಪರೀಕ್ಷೆಗಾಗಿ ಮೃತದೇಹಗಳನ್ನು ಯಲಹಂಕ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

Related Posts

Leave a Reply

Your email address will not be published. Required fields are marked *