ಬೆಂಗಳೂರು, ಮೈಸೂರು, ದಾವಣಗೆರೆ ಜಿಲ್ಲೆಗಳ ಹಲವು ಕಡೆ ಭ್ರಷ್ಟ ಅಧಿಕಾರಿಗಳ ಕಚೇರಿ ಮತ್ತು ನಿವಾಸಗಳಿಗೆ ಲೋಕಾಯುಕ್ತ ಏಕಕಾಲಕ್ಕೆ ದಾಳಿ ನಡೆಸಿದೆ.
ಬೆಂಗಳೂರಿನಲ್ಲಿ ಪಿಡಬ್ಲ್ಯುಡಿ ಮುಖ್ಯ ಇಂಜಿನಿಯರ್ ಪುರುಷೋತ್ತಮ ದಾಸ್ ಎಂಬವರಿಗೆ ಸೇರಿದ ಮೈಸೂರಿನ ಐದು ಸ್ಥಳ, ಬೆಂಗಳೂರಿನ ಆರು ಕಡೆ ದಾಳಿ ನಡೆಸಿ ಮಹತ್ವದ ದಾಖಲೆಗಳ ಜಪ್ತಿ ಮಾಡಿದ್ದಾರೆ.
ದಾವಣಗೆರೆಯ ಬೆಸ್ಕಾಂನ ಸಿವಿಲ್ ವಿಭಾಗದ ಇಂಜಿನಿಯರ್ ಆರ್.ಹೆಚ್ ಅರ್ಜುನ್ ಅವರ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳ ತಂಡ ದಾಳಿ ನಡೆಸಿದೆ. ಆದಾಯ ಮೀರಿ ಅಪಾರ ಪ್ರಮಾಣದ ಆಸ್ತಿ ಗಳಿಸಿರುವ ಆರೋಪಡಿ ಈ ಕಾರ್ಯಾಚರಣೆ ನಡೆಸಲಾಗಿದೆ. ಲೋಕಾಯುಕ್ತ ಎಸ್ಪಿ ಎಂಎಸ್ ಕೌಲಾಪುರೆ ನೇತೃತ್ವದ ತಂಡ ದಾಳಿ ನಡೆಸಿದೆ.
ಅರ್ಜುನ್ ವಾಸವಿದ್ದ ದಾವಣಗೆರೆ ನಗರದ ನಿಟ್ಟುವಳ್ಳಿಯಲ್ಲಿರುವ ಕಟ್ಟಡ, ಕಚೇರಿ ಹಾಗೂ ಶಿವಮೊಗ್ಗದ ಮನೆಯ ಮೇಲೆ ದಾಳಿ ನಡೆಸಲಾಗಿದೆ. ಶಿವಮೊಗ್ಗದ ಮನೆಯಲ್ಲಿ ಆಸ್ತಿ ಪತ್ರ ಹಾಗೂ ಚಿನ್ನ ಬೆಳ್ಳಿ ಪತ್ತೆಯಾಗಿದ್ದು, ಅಧಿಕಾರಿಗಳು ಶೋಧ ಮುಂದುವರಿಸಿದ್ದಾರೆ.


