Thursday, February 12, 2026
Menu

ರಾಹುಲ್ ಗಾಂಧಿ ಬಗ್ಗೆ ಅವಹೇಳನಕಾರಿ ಪೋಸ್ಟ್, ಆರಗ ಜ್ಞಾನೇಂದ್ರ ಆಪ್ತ ಸಹಾಯಕನ ಬಂಧನ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಂಚಿಕೊಂಡ ಆರೋಪದಡಿ, ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಅವರ ಹೊಸನಗರ ಭಾಗದ ಆಪ್ತ ಸಹಾಯಕನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಇಲ್ಲಿನ ಹೊಸನಗರ ಜೆ.ಎಂ.ಎಫ್.ಸಿ ನ್ಯಾಯಾಲಯ ಆದೇಶ ಹೊರಡಿಸಿದೆ.

​ಮಳಲಿ ಗ್ರಾಮದ ನಿವಾಸಿ, ಶಾಸಕರ ಆಪ್ತ ಸಹಾಯಕ ರಾಜೇಶ್ ಹಿರಿಮನೆ ಬಂಧಿತ ಆರೋಪಿ. ರೋಪಿ ರಾಜೇಶ್ ಹಿರಿಮನೆ, ರಾಹುಲ್ ಗಾಂಧಿಯವರ ಮುಖದ ಅರ್ಧ ಭಾಗ ಹಾಗೂ ಪಾಕಿಸ್ತಾನ ಸೇನೆಯ ಸಮವಸ್ತ್ರ ಧರಿಸಿದ ಅಧಿಕಾರಿ ಅಸಿಮ್ ಎಂಬವರ ಫೋಟೊ ಎಡಿಟ್ ಮಾಡಿ ಸೇರಿಸಿದ್ದರು. ಈ ಚಿತ್ರಕ್ಕೆ “ONE AGENDA” ಎಂಬ ಟ್ಯಾಗ್ ಲೈನ್ ನೀಡಿ, ಫೇಸ್‌ಬುಕ್‌ನಲ್ಲಿ ಶೇರ್‌ ಮಾಡಿದ್ದರು.

​ಈ ಸಂಬಂಧ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ ಹೊಸನಗರ ಜೆ.ಎಂ.ಎಫ್.ಸಿ ನ್ಯಾಯಾಲಯದ ನ್ಯಾಯಾಧೀಶರು, ಆರೋಪಿ ರಾಜೇಶ್ ಹಿರಿಮನೆ ಅವರನ್ನು ಫೆ.24 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿ ಆದೇಶ ನೀಡಿದ್ದಾರೆ.

Related Posts

Leave a Reply

Your email address will not be published. Required fields are marked *