Saturday, February 14, 2026
Menu

ಸರ್ಕಾರಿ ಜಮೀನಿನಿಂದ ಮನೆ ತೆರವು: ತಹಸೀಲ್ದಾರ್‌ ಹೆಸರು ಬರೆದಿಟ್ಟು ವ್ಯಕ್ತಿ ಆತ್ಮಹತ್ಯೆ ಯತ್ನ

ಚಿಕ್ಕಬಳ್ಳಾಪುರದಲ್ಲಿ ನಿರ್ಮಾಣ ಹಂತದಲ್ಲಿದ್ದ ಮನೆ ತೆರವು ಮಾಡಲು ಮುಂದಾಗಿದ್ದಕ್ಕೆ ವ್ಯಕ್ತಿ ತಹಸೀಲ್ದಾರ್‌ ಹೆಸರು ಉಲ್ಲೇಖಿಸಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಚಿಕ್ಕಬಳ್ಳಾಪುರದ ಮಂಚೇನಹಳ್ಳಿ ತಾಲೂಕಿನ ಗಿಡಗಾನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, .ರಾಧಕೃಷ್ಣ ಜಿ ಎಂಬವರು ಮಾತ್ರೆಗಳನ್ನು ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಆತ್ಮಹತ್ಯೆಗೆ ಯತ್ನಕ್ಕೂ ಮುನ್ನ ರಾಧಾಕೃಷ್ಣ ಅವರು ಡೆತ್ ನೋಟ್ ಬರೆದಿಟ್ಟು, ತನ್ನ ಸಾವಿಗೆ ಮಂಚೇನಹಳ್ಳಿ ತಹಶೀಲ್ದಾರ್ ಪೂರ್ಣಿಮಾ ಹಾಗೂ ಜಿಲ್ಲಾಡಳಿತ ಕಾರಣ ಎಂದಿದ್ದಾರೆ. ರಾಧಾಕೃಷ್ಣ ಅವರನ್ನು ಚಿಕ್ಕಬಳ್ಳಾಪುರ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ರಾಧಾಕೃಷ್ಣ ವಿರುದ್ಧ ಸರ್ಕಾರಿ ಜಮೀನಿನಲ್ಲಿ ಅಕ್ರಮವಾಗಿ ಮನೆ ನಿರ್ಮಾಣ ಮಾಡುತ್ತಿರುವ ಆರೋಪ ಕೇಳಿಬಂದಿದೆ. ಸ್ವಂತ ಜಮೀನಿನ ಪಕ್ಕದಲ್ಲೇ ಸರ್ಕಾರಿ ಜಮೀನು ಇದ್ದು, ಸಾರ್ವಜನಿಕ ಉದ್ದೇಶಕ್ಕೆ ಕಾಯ್ದಿರಿಸಿರುವ ಸರ್ಕಾರಿ ಜಮೀನಿನಲ್ಲಿ ಅಕ್ರಮ ವಾಗಿ ಮನೆ ನಿರ್ಮಾಣ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಈ ಹಿನ್ನೆಲೆ ಮಂಚೇನಹಳ್ಳಿ ತಹಶೀಲ್ದಾರ್ ಪೂರ್ಣಿಮಾ ಮನೆ ತೆರವು ಮಾಡಲು ಮುಂದಾಗಿದ್ದ ವೇಳೆ ರಾಧಾಕೃಷ್ಣ ಆತ್ಮಹತ್ಯೆಗೆ ಪ್ರಯತ್ನಿಸಿದ್ದಾರೆ.

 

Related Posts

Leave a Reply

Your email address will not be published. Required fields are marked *