ಕಂದಾಯ ಇಲಾಖೆಯಿಂದ ಎರಡನೇ ಬಾರಿ ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡುತ್ತಿದ್ದೇವೆ. ಇಲ್ಲಿಯವರೆಗೆ 2.20 ಲಕ್ಷ ಕುಟುಂಬಗಳಿಗೆ ಹಕ್ಕು ಪತ್ರ ವಿತರಿಸಿ ದಾಖಲೆ ನಿರ್ಮಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿ, ರಾಜ್ಯದ ಜಿಡಿಪಿ ದೇಶದಲ್ಲೇ ನಂಬರ್ ಒನ್ ಆಗಿಸಿದ್ದು ನಮ್ಮ ಜನಪರ ಸರ್ಕಾರ ಎಂದರು. ಕಂದಾಯ ಇಲಾಖೆಗೆ ಕೃಷ್ಣಬೈರೇಗೌಡರು ಸಚಿವರಾದ ಮೇಲೆ ಸರ್ಕಾರದಲ್ಲಿ ಕ್ರಾಂತಿಕಾರಿ ಪ್ರಗತಿ ಆಗಿದೆ ಎಂದು ವೇದಿಕೆಯಲ್ಲೇ ಮೆಚ್ಚುಗೆ ವ್ಯಕ್ತಪಡಿಸಿದರು.
ಜಿಲ್ಲಾಡಳಿತ ಮತ್ತು ಕಂದಾಯ ಇಲಾಖೆ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಸರ್ಕಾರದ ಸಹಸ್ರ ದಿನಾಚರಣೆ ಮತ್ತು ಒಂದು ಲಕ್ಷ ಮಂದಿ ಫಲಾನುಭವಿಗಳಿಗೆ ಹಕ್ಕು ಪತ್ರ ನೀಡುವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ರಾಜ್ಯದ ಜಿಡಿಪಿ ದೇಶದಲ್ಲೇ ನಂಬರ್ ಒನ್ ಆಗಿಸಿದ್ದು ನಮ್ಮ ಜನಪರ ಸರ್ಕಾರ. GST ತೆರಿಗೆ ಸಂಗ್ರಹದಲ್ಲೂ ರಾಜ್ಯ ದಾಖಲೆ ವೇಗದಲ್ಲಿ ಸಾಗುತ್ತಿದೆ ಎಂದು ದಾಖಲೆಗಳನ್ನು ಮಂಡಿಸಿದರು.
ಈ ಎಲ್ಲಾ ಸಾಧನೆ ಮತ್ತು ದಾಖಲೆಗಳನ್ನು ಕೇಂದ್ರ ಸರ್ಕಾರದ ಅನ್ಯಾಯದ ನಡುವೆಯೂ ಮಾಡಿ ತೋರಿಸಿದ್ದೇವೆ. ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ಸಂಸದ ಬಸವರಾಜ ಬೊಮ್ಮಾಯಿಯವರೂ, ಪ್ರಹ್ಲಾದ್ ಜೋಶಿ, ಜಗದೀಶ್ ಶೆಟ್ಟರ್ ಕೂಡ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ಧ ಕೇಂದ್ರದಲ್ಲಿ ಬಾಯಿ ಬಿಡುತ್ತಿಲ್ಲ ಎಂದು ಸಿಎಂ ಆಕ್ರೋಶ ವ್ಯಕ್ತಪಡಿಸಿದರು.
ನಮ್ಮ ಸರ್ಕಾರ ಬಂದು 2 ವರ್ಷ 9 ತಿಂಗಳಾಯ್ತು. ನಾವು ಕೊಟ್ಟ ಭರವಸೆಗಳಲ್ಲಿ 243 ಭರವಸೆಗಳನ್ನು ಈಡೇರಿಸಿದ್ದೇವೆ. ಉಳಿದ ಅವಧಿಯಲ್ಲಿ ಬಾಕಿ ಭರವಸೆಗಳನ್ನೂ ಈಡೇರಿಸಲಾಗುವುದು. 2023-18 ರಲ್ಲೂ ಕೊಟ್ಟ ಭರವಸೆಗಳನ್ನೆಲ್ಲಾ ಈಡೇರಿಸಿ, ಪ್ರಣಾಳಿಕೆಯಲ್ಲಿ ಇಲ್ಲದ 30 ಭರವಸೆಗಳನ್ನು ಈಡೇರಿಸಿ “ನುಡಿದಂತೆ ನಡೆದು” ದಾಖಲೆ ಮಾಡಿದ್ದೇವೆ ಎಂದು ಹೇಳಿದರು.
ಅಧಿಕಾರ ಇದ್ದಾಗ ಕೊಟ್ಟ ಭರವಸೆ ಈಡೇರಿಸದ ಬಿಜೆಪಿ ಈಗ ನಮ್ಮ ಖಜಾನೆ ಖಾಲಿ ಆಗಿದೆ ಎನ್ನುವ ಸುಳ್ಳು ಪ್ರಚಾರದಲ್ಲಿ ನಿರತವಾಗಿದೆ. ಇಲ್ಲಿಯವರೆಗೂ ಗ್ಯಾರಂಟಿಗಳ ಮೂಲಕ 118000 ಕೋಟಿ ರೂಪಾಯಿಗಳನ್ನು ನೇರವಾಗಿ ರಾಜ್ಯದ ಜನರ ಖಾತೆಗೆ ಹಾಕಿದ್ದೇವೆ. ಅಮಾರ್ತ್ಯಸೇನ್, ಅಭಿಜಿತ್ ಬ್ಯಾನರ್ಜಿ ಮುಂತಾದ ಆರ್ಥಿಕ ತಜ್ಞರ ಜೊತೆಗೆ ದಿನ ಪತ್ರಿಕೆಗಳು ಮತ್ತು ವಿಶ್ವ ವಿದ್ಯಾಲಯಗಳ ಅಧ್ಯಯನಗಳು ವ್ಯಕ್ತಪಡಿಸಿದ್ದ ಸದಾಭಿಪ್ರಾಯಗಳನ್ನು ಮುಖ್ಯಮಂತ್ರಿಗಳು ಓದಿ ವಿವರಿಸಿ,
ಬಿಜೆಪಿಯವರು ಜನರನ್ನು ತಪ್ಪು ದಾರಿಗೆಳೆಯುವುದು ಖಂಡನೀಯ ಎಂದರು.
ಕೇಂದ್ರಸರ್ಕಾರ ರಾಜ್ಯಕ್ಕೆ ಅನುದಾನ ನೀಡದೇ ಅನ್ಯಾಯ ಮಾಡುತ್ತಿದೆ.000 ದಿನಗಳ ಯಶಸ್ವೀ ಆಡಳಿತ ನಮ್ಮ ಜನಪರ ಬದ್ಧತೆಗೆ ಸಾಕ್ಷಿಯಾಗಿದೆ. ನಾವು ಅಸಮಾನತೆ ನೀಗಿಸುವ ಕಾಯಕದಲ್ಲಿ ತೊಡಗಿದ್ದೇವೆ. ಬಿಜೆಪಿಯವರು 4 ವರ್ಷ ಏನು ಮಾಡಿಲ್ಲ. ಅವರು ಜನರನ್ನು ತಪ್ಪು ದಾರಿಗೆಳೆಯುವುದು ಖಂಡನೀಯ. ಬಿಜೆಪಿಯವರ ಮಾತುಗಳನ್ನು ಗಂಭೀರವಾಗಿ ತೆಗೆದುಕೊಳ್ಳುವ ಅಗತ್ಯವಿಲ್ಲ ಎಂದರು.
ಸರ್ಕಾರ ಒಂದು ಸಾವಿರ ದಿನ ಪೂರೈಸಿದ್ದು, ಬಡವರು, ದಲಿತರು, ಹಿಂದುಳಿದ ವರ್ಗದವರು,ಅಲ್ಪಸಂಖ್ಯಾತರು, ಮಹಿಳೆಯರು, ಕಾರ್ಮಿಕರ ಪರವಾಗಿ ನಾವು ನಿಲ್ಲುತ್ತೇವೆ ಎಂದು ಮತ್ತೊಮ್ಮೆ ತಿಳಿಸುತ್ತೇನೆ ಎಂದು ಪುನರುಚ್ಚರಿಸಿದರು.
ಕೇಂದ್ರ ಸರ್ಕಾರ, ರಾಜ್ಯಕ್ಕೆ ಅನ್ಯಾಯ ಮಾಡಿದೆ. ಜಿಎಸ್ ಟಿ ಸಂಗ್ರಹಣೆಯಲ್ಲಿ ಕೊರತೆಯಾಗಿದ್ದು, ರಾಜ್ಯಕ್ಕೆ 12 – 15 ಸಾವಿರ ಕೋಟಿ ನಷ್ಟವಾಗಿದೆ. ನಮಗೆ ಬರುವ ನ್ಯಾಯಯುತ ಪಾಲು ಸಿಗುತ್ತಿಲ್ಲ. ಜೆಜೆಎಂ ನಲ್ಲಿ 15 ಸಾವಿರ ಕೋಟಿ ಇನ್ನೂ ಕೊಟ್ಟಿಲ್ಲ. ಈ ಅನುದಾನ ನೀಡಿದರೆ ರಾಜ್ಯದ ಬಹಳಷ್ಟು ರಾಜ್ಯದಲ್ಲಿ ಬಹಳಷ್ಟು ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತವೆ ಎಂದರು. ರಾಜ್ಯದ ಹಣಕಾಸಿನ ಪರಿಸ್ಥಿತಿಯನ್ನು ಪರಿಶೀಲಿಸಿ, ಜಿಲ್ಲೆಯ ಬೇಡಿಕೆಗಳನ್ನು ಈಡೇರಿಸಲಾಗುವುದು ಎಂದು ಭರವಸೆ ನೀಡಿದರು.


