Menu

ನೆಲಮಂಗಲದಲ್ಲಿ ಕಾರು ಬಸ್‌ ಡಿಕ್ಕಿ: ಐವರ ಸಾವು

ನೆಲಮಂಗಲ ಜಿಂದಾಲ್ ಬಳಿ ಕೆಎಸ್ಸಾರ್ಟಿಸಿ ಬಸ್​​ ಮತ್ತು ಕಾರು ಅಪಘಾತ ನಡೆದಿದ್ದು, ಕಾರಿನಲ್ಲಿದ್ದ ಐವರು ಮೃತಪಟ್ಟಿದ್ದಾರೆ.

ದುರ್ಗಾ ಪ್ರಸಾದ್ (20), ಕೇಶವ್ (19), ಲಲಿತ್ (22), ಹರ್ಷಿತ್ (20) ಸೇರಿ ಐವರು ದುರಂತದಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ. ತುಮಕೂರು ಕಡೆಯಿಂದ ಬರುತ್ತಿದ್ದ ಕಾರು ಡಿವೈಡರ್​​ ಹಾರಿ ಬೆಂಗಳೂರು ಕಡೆಯಿಂದ ಹೊರಟಿದ್ದ ಬಸ್​ಗೆ ಡಿಕ್ಕಿಯಾಗಿದೆ.

ನೆಲಮಂಗಲ ಸರ್ಕಾರಿ ಆಸ್ಪತ್ರೆಯಲ್ಲಿ ಐವರ ಮೃತದೇಹಗಳಿದ್ದು, ಒಬ್ಬರ ಗುರುತು ಇನ್ನೂ ಪತ್ತೆಯಾಗಿಲ್ಲ. ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಮೃತ ಹರ್ಷಿತ್​​ ರಾಜನಕುಂಟೆ ಸಾಯಿ ವಿದ್ಯಾ ಕಾಲೇಜಿನ ವಿದ್ಯಾರ್ಥಿಯಾಗಿದ್ದು, ದ್ವಿತೀಯ ವರ್ಷದ ಡಿಗ್ರಿ ಓದುತ್ತಿದ್ದ.

ಗಂಭೀರ ಗಾಯಗೊಂಡಿದ್ದ ಕಾರು ಚಾಲಕನನ್ನು ಆಸ್ಪತ್ರೆಗೆ ದಾಖಲಿಸಿದ್ದರೂ ಚಿಕಿತ್ಸೆ ಫಲಕಾರಿಯಾಗದೆ ಪ್ರಾಣ ಬಿಟ್ಟಿದ್ದಾನೆ. ಹರ್ಷಿತ್​​ ಸ್ನೇಹಿತನ ಭೇಟಿ ಮಾಡಿ ಬರುವುದಾಗಿ ಮನೆಯಿಂದ ಹೊರ ಬಂದಿದ್ದ. ತುಮಕೂರು ಕಡೆಯಿಂದ ಬೆಂಗಳೂರಿನತ್ತ ಕಾರಿನಲ್ಲಿ ಐವರು ಬರುತ್ತಿದ್ದಾಗ ಅಪಘಾತ ಸಂಭವಿಸಿದೆ. ಬಸ್​​ ಮುಂಭಾಗ ಜಖಂ ಆಗಿದ್ದರೆ, ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.

Related Posts

Leave a Reply

Your email address will not be published. Required fields are marked *