ಬಾಗೇಪಲ್ಲಿ ಕಾಂಗ್ರೆಸ್ ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು ಎಂದು ಕರ್ನಾಟಕ ಹೈಕೋರ್ಟ್ ಆದೇಶ ನೀಡಿದ್ದು, ಚುನಾವಣಾ ಆಯೋಗ ಹಾಗೂ ವಿಧಾನಸಭೆ ಕಾರ್ಯದರ್ಶಿಗೂ ಈ ಬಗ್ಗೆ ಸೂಚನೆ ನೀಡಿದೆ.
2023 ರಲ್ಲಿ ನಡೆದ ವಿಧಾನಸಭಾ ಚುನಾವಣೆ ವೇಳೆ ಎಸ್.ಎನ್. ಸುಬ್ಬಾರೆಡ್ಡಿ ಸಲ್ಲಿಸಿದ್ದ ನಾಮಪತ್ರ ದೋಷದಿಂದ ಕೂಡಿದ್ದು, ಆಸ್ತಿ ವಿವರಗಳನ್ನು ಮುಚ್ಚಿಟ್ಟು ಸುಳ್ಳು ಪ್ರಮಾಣಪತ್ರ ಸಲ್ಲಿಸಿದ್ದಾರೆ. ಅವರ ಆಯ್ಕೆಯನ್ನು ಅಸಿಂಧುಗೊಳಿಸಬೇಕೆಂದು ಬಿಜೆಪಿ ಅಭ್ಯರ್ಥಿ ಮುನಿರಾಜು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.
ವಿಚಾರಣೆ ನಡೆಸಿದ ನ್ಯಾ. ಎಂಜಿಎಸ್ ಕಮಲ್ ಅವರಿದ್ದ ಪೀಠವು ಶಾಸಕರ ಆಯ್ಕೆಯನ್ನು ಅಸಿಂಧುಗೊಳಿಸಿ ಆದೇಶ ನೀಡಿದೆ. ಆದರೆ ಎರಡನೇ ಅಭ್ಯರ್ಥಿ ಸಿ. ಮುನಿರಾಜುಗೆ ಗೆಲುವು ಎಂದು ಎಂದು ಘೋಷಿಸಲು ಕೋರ್ಟ್ ನಿರಾಕಣೆ ಮಾಡಿದೆ.
ಅಸಿಂಧುಗೊಳಿಸಿದ ಆದೇಶ ಚುನಾವಣಾ ಆಯೋಗಕ್ಕೆ, ವಿಧಾನಸಭೆ ಕಾರ್ಯದರ್ಶಿಗೂ ಕಳುಹಿಸಲು ಪೀಠವು ನಿರ್ದೇಶನ ನೀಡಿದೆ. ಈ ಆದೇಶದ ಮೂಲಕ ಕಾಂಗ್ರೆಸ್ ಶಾಸಕ ಎಸ್ಎನ್ ಸುಬ್ಬಾರೆಡ್ಡಿಗೆ ಕರ್ನಾಟಕ ಹೈಕೋರ್ಟ್ ಶಾಕ್ ನೀಡಿದೆ.


