Thursday, January 30, 2025
Menu

ಬಾಕಿ ಉಳಿದಿರುವ ರಾಜ್ಯ ಚಲನಚಿತ್ರ ಪ್ರಶಸ್ತಿ ಇದೇ ವರ್ಷ ಘೋಷಣೆ : ಕೆವಿಪಿ 

ಬಾಕಿ ಉಳಿದಿರುವ ಐದೂ ವರ್ಷಗಳ ರಾಜ್ಯ ಚಲನಚಿತ್ರ ಪ್ರಶಸ್ತಿಗಳನ್ನು ಇದೇ ವರ್ಷ ಘೋಷಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ಭರವಸೆ ನೀಡಿದರು.

ಶ್ರೀ ರಾಘವೇಂದ್ರ ಚಿತ್ರವಾಣಿಯ 49ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಸಿನಿಮಾ ಕ್ಷೇತ್ರದ ಸಾಧಕರಿಗೆ 24ನೇ ವರ್ಷದ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು.‌

ಐದು ವರ್ಷಗಳಿಂದ ರಾಜ್ಯ ಸಿನಿಮಾ ಪ್ರಶಸ್ತಿಗಳು ಸ್ಥಗಿತಗೊಂಡಿದ್ದವು. ನಾವು ಈಗಗಲೇ 2019 ರ ಪ್ರಶಸ್ತಿ ಘೋಷಣೆಯಾಗಿದ್ದು ಬಾಕಿ ಇರುವ ಐದೂ ವರ್ಷಗಳ ಪ್ರಶಸ್ತಿಯನ್ನೂ ಇದೇ ವರ್ಷ ನೀಡಿ ಗೌರವಿಸಲಾಗುವುದು ಎಂದು ಘೋಷಿಸಿದರು. ಸಿನಿಮಾ ಪಿಆರ್ ಒ ಗಳಿಗೂ ಚಲನಚಿತ್ರ ವಾಣಿಜ್ಯ ಮಂಡಳಿಯ ನಿರ್ದೇಶಕರನ್ನಾಗಿಸಲು ಮತ್ತು ಸರ್ಕಾರದ ಸಿನಿಮಾ ಪ್ರಶಸ್ತಿಗೆ ಪರಿಗಣಿಸುವ ಬಗ್ಗೆ ಮುಖ್ಯಮಂತ್ರಿಗಳ ಜೊತೆ ಚರ್ಚಿಸುವುದಾಗಿ ಭರವಸೆ ನೀಡಿದರು. ನಟಿ ಜಯಂತಿ ಅವರ ಹೆಸರಿನ ಪ್ರಶಸ್ತಿ ಸ್ಥಾಪಿಸಲು ಈಗಾಗಲೇ ಸರ್ಕಾರಿ ಆದೇಶ ಆಗಿದೆ ಎಂದು ತಿಳಿಸಿದರು.

ಸೊಸೆ ತಂದ ಸೌಭಾಗ್ಯ ಸಿನಿಮಾದಿಂದ ಪಿಆರ್ ಒ ಕ್ಷೇತ್ರಕ್ಕೆ ಆಗಮಿಸಿದ ರಾಘವೇಂದ್ರ ಚಿತ್ರವಾಣಿ ಈಗ ಕನ್ನಡ ಚಿತ್ರರಂಗದ ಸೌಭಾಗ್ಯ ಆಗಿದೆ ಎಂದು ಮೆಚ್ಚುಗೆ ಸೂಚಿಸಿದರು.  ಈ ವಾರ ಸಿನಿಮಾ ಜಗತ್ತಿಗೆ ಸಂಭ್ರಮದ ವಾರ. 2019 ನೇ ಸಾಲಿನ ರಾಜ್ಯ ಸಿನಿಮಾ ಪ್ರಶಸ್ತಿಗಳು ಹಾಗೂ ನೆನ್ನೆ ಅನಂತನಾಗ್ ಅವರೂ ಸೇರಿ ಸಿನಿಮಾ ಕ್ಷೇತ್ರದ ದಿಗ್ಗಜರಿಗೆ ಪದ್ಮ‌ ಪ್ರಶಸ್ತಿಗಳು ಲಭಿಸಿವೆ. ಇದು ಸಂಭ್ರಮದ ವಾರ ಎಂದರು.

Related Posts

Leave a Reply

Your email address will not be published. Required fields are marked *