Tuesday, February 17, 2026
Menu

ಅಮೆರಿಕ ಹಾಕಿ ಕ್ರೀಡಾಂಗಣದಲ್ಲಿ ಗುಂಡಿನ ದಾಳಿಗೆ ಮೂವರು ಬಲಿ

ಅಮೆರಿಕದ ಹಾಕಿ ಕ್ರೀಡಾಂಗಣದಲ್ಲಿ ನಡೆದ ಗುಂಡಿನ ದಾಳಿಗೆ ಮೂವರು ಬಲಿಯಾಗಿದ್ದಾರೆ. ರೋಡ್ ಐಲೆಂಡ್ ರಾಜ್ಯದ ಪಾವ್‌ಟಕೆಟ್‌ನ ಡೆನ್ನಿಸ್ ಎಂ. ಲಿಂಚ್ ಅರೆನಾದ ಕ್ರೀಡಾಂಗಣದಲ್ಲಿ ನಡೆದ ಈ ಘಟನೆ ಭೀತಿ ಸೃಷ್ಟಿಸಿದೆ.

ದಾಳಿಯಲ್ಲಿ ಶಂಕಿತ ದಾಳಿಕೋರ ಸೇರಿ ಮೂವರು ಪ್ರಾಣ ಕಳೆದುಕೊಂಡಿದ್ದರೆ, ಮೂವರು ಗಾಯಗೊಂಡಿದ್ದಾರೆ. ಕ್ರೀಡಾಂಗಣದಲ್ಲಿ ಎರಡು ಪ್ರೌಢಶಾಲಾ ತಂಡಗಳ ನಡುವೆ ಹಾಕಿ ಪಂದ್ಯ ನಡೆಯುತ್ತಿರುವಾಗ ಈ ಗುಂಡಿನ ದಾಳಿ ನಡೆದಿದೆ.

ದಾಳಿಕೋರ ತನಗೆ ತಾನೇ ತಾನೇ ಗುಂಡು ಹಾರಿಸಿಕೊಂಡು ಮೃತಪಟ್ಟಿದ್ದಾಗಿ ಕಾನೂನು ಜಾರಿ ವಿಭಾಗದ ಅಧಿಕಾರಿಗಳು ತಿಳಿಸಿದ್ದಾರೆ. ಶಂಕಿತ ದಾಳಿಕೋರ ತನ್ನದೇ ಕುಟುಂಬದ ಸದಸ್ಯರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿರಬಹುದು. ಇದು ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ನಡೆದಿರುವ ಸಾಧ್ಯತೆ ಇದೆ ಎಂದು ಪೊಲೀಸರು ಹೇಳಿದ್ದಾರೆ.

ಘಟನೆಯ ಹಿಂದಿನ ಉದ್ದೇಶ ತಿಳಿದು ಬಂದಿಲ್ಲ, ಈ ಸಂಬಂಧ ತನಿಖೆಗಳು ನಡೆಯುತ್ತಿವೆ. ಅಧಿಕಾರಿಗಳು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ಡಿನ ದಾಳಿಯ ನಂತರ ಮೇಯರ್ ಗ್ರೆಬಿಯನ್ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಮಾತನಾಡಿರುವುದಾಗಿ ರೋಡ್ ಐಲೆಂಡ್ ಗವರ್ನರ್ ಡ್ಯಾನ್ ಮೆಕ್ಕೀ ತಿಳಿಸಿದ್ದಾರೆ.

ಈ ತಿಂಗಳ ಆರಂಭದಲ್ಲಿ ರಾಕ್‌ವಿಲ್ಲೆಯ ಥಾಮಸ್ ಎಸ್ ವೂಟನ್ ಪ್ರೌಢಶಾಲೆಯಲ್ಲಿ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ 16 ವರ್ಷದ ವಿದ್ಯಾರ್ಥಿಯನ್ನು ಬಂಧಿಸಲಾಗಿತ್ತು. ಈ ಳಿಯ ತನಿಖೆ ಮುಂದುವರಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.

Related Posts

Leave a Reply

Your email address will not be published. Required fields are marked *