Tuesday, February 17, 2026
Menu

ರಸ್ತೆ ದಾಟುತ್ತಿದ್ದಾಗ ಬೈಕ್‌ ಡಿಕ್ಕಿ: ಬೆಂಗಳೂರಿನಲ್ಲಿ ಯುವತಿ ಸಾವು

ಬೆಂಗಳೂರಿನ ರಾಜ್‌ಕುಮಾರ್ ರಸ್ತೆಯ ಹೆಚ್‌ಡಿಎಫ್‌ಸಿ ಬ್ಯಾಂಕ್ ಬಳಿ ರಸ್ತೆ ದಾಟುತ್ತಿದ್ದ ಯುವತಿಗೆ ಅತಿ ವೇಗವಾಗಿ ಬಂದ ಬೈಕ್‌ ಡಿಕ್ಕಿಯಾಗಿದ್ದು, ಆಕೆ ಮೃತಪಟ್ಟಿದ್ದಾರೆ. ಅತಿ ವೇಗವಾಗಿ ಬುಲೆಟ್ ಬೈಕ್ ಚಲಾಯಿಸಿಕೊಂಡು ಬಂದ ಸವಾರನ ಅತಿರೇಕಕ್ಕೆ ಯುವತಿಯ ಪ್ರಾಣ ಹೋಗಿದೆ.

ಸೋಮವಾರ ಮಧ್ಯಾಹ್ನ  27 ವರ್ಷದ ಯೋಗೇಶ್ವರಿ ಕೆಲಸದ ಸ್ಥಳದ ಸಮೀಪ ಊಟ  ಮಾಡುವುದಕ್ಕಾಗಿ ರಸ್ತೆ ದಾಟುತ್ತಿದ್ದರು. ಆಗ ವೇಗವಾಗಿ ಬಂದ ಬೈಕ್ ಡಿಕ್ಕಿ ಹೊಡೆದು ಯುವತಿ ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಲಗ್ಗೆರೆ ಬಳಿಯ ಕೆಂಪೇಗೌಡ ಲೇಔಟ್ ನಿವಾಸಿಯಾಗಿದ್ದ ಯೋಗೇಶ್ವರಿಯನ್ನು ಸುಗುಣಆಸ್ಪತ್ರೆಗೆ ದಾಖಲಿಸಲಾಗಿತ್ತು. ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ರಾಜಾಜಿನಗರ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದು, ಬೈಕ್ ಸವಾರನ ಪತ್ತೆಗಾಗಿ ತನಿಖೆ ಮುಂದುವರಿಸಿದ್ದಾರೆ.

Related Posts

Leave a Reply

Your email address will not be published. Required fields are marked *