Menu

ಪ್ರವಾಸ ವಿಚಾರದಲ್ಲಿ ಪತಿಯೊಂದಿಗೆ ಜಗಳ: ಮೈಸೂರಿನಲ್ಲಿ ಮಹಿಳೆ ಆತ್ಮಹತ್ಯೆ

ಮೈಸೂರಿನ ಸರಸ್ವತಿಪುರಂನಲ್ಲಿ ಪ್ರವಾಸಕ್ಕೆ ತೆರಳಲು ಗಂಡ ಅನುಮತಿ ನಿರಾಕರಿಸಿದ್ದಕ್ಕೆ ನೊಂದುಕೊಂಡ ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 46 ವರ್ಷದ ಸಂಧ್ಯಾ ಆತ್ಮಹತ್ಯೆ ಮಾಡಿಕೊಂಡವರು.

ಮಹಿಳೆಯ ಸಂಬಂಧಿಕರು ಇದು ಕೊಲೆ ಎಂದು ಆರೋಪಿಸಿದ್ದಾರೆ. ಮನೆಯಲ್ಲಿ ಕೋಣೆಯ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರಿನ ರು ಸಂಧ್ಯಾ 25 ವರ್ಷಗಳ ಹಿಂದೆ ಚಾಮರಾಜನಗರ ಜಿಲ್ಲೆಯ ರಂಗನಾಥ್ ಎಂಬವರನ್ನು ಮದುವೆ ಆಗಿದ್ದರು. ದಂಪತಿಗೆ ಇಬ್ಬರು ಮಕ್ಕಳಿದ್ದು, ಮಗಳು ವಿದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಸಂಧ್ಯಾ ಮನೆಯಲ್ಲಿ ಗಂಡ ಹಾಗೂ ಮಗನ ಜೊತೆ ವಾಸವಿದ್ದರು.

ಗುರುವಾರ ರಾತ್ರಿ ಪ್ರವಾಸದ ವಿಚಾರದಲ್ಲಿ ಗಂಡ-ಹೆಂಡತಿ ನಡುವೆ ಜಗಳವಾಗಿದೆ. ಗಂಡ ಮನೆಯಿಂದ ಹೊರ ಹೋದ ಸಂಧ್ಯಾ ಫ್ಯಾನ್‌ಗೆ ನೇಣು ಬಿಗಿದುಕೊಂಡಿದ್ದಾರೆ. ಈ ಸಾವಿನ ಬಗ್ಗೆ ಗಂಡ ಹಾಗೂ ಮಗನ ಮೇಲೆ ಅನುಮಾನ ವ್ಯಕ್ತಪಡಿಸಿ ಸಹೋದರ ಗುರುಮೂರ್ತಿ ದೂರು ನೀಡಿದ್ದಾರೆ. ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Posts

Leave a Reply

Your email address will not be published. Required fields are marked *