ಶ್ರೀ ಗುರು ರಾಘವೇಂದ್ರ ಸ್ವಾಮಿ ಸನ್ನಿಧಿ ಮಂತ್ರಾಲಯದಲ್ಲಿ ಅಡ್ವಾನ್ಸ್ ರೂಂ ಬುಕ್ ಮಾಡುವ ಭಕ್ತರನ್ನು ವಂಚಿಸುವ ಜಾಲವೊಂದು ಕಾರ್ಯಾಚರಿಸುತ್ತಿರುವುದು ಬಯಲಾಗಿದೆ. ಹೀಗಾಗಿ ಭಕ್ತರು ಈ ಬಗ್ಗೆ ಎಚ್ಚರಿಕೆ ವಹಿಸಬೇಕಿದೆ.
ರೂಂ ಬುಕ್ಕಿಂಗ್, ಪ್ರಸಾದ, ವಿವಿಧ ಸೇವೆಗಳ ಸೌಲಭ್ಯ ಒದಗಿಸುವ ಹೆಸರಲ್ಲಿ ವಂಚಕರ ಜಾಲ ಭಕ್ತರಿಂದ ಹಣ ವಸೂಲಿ ಮಾಡುತ್ತಿದ್ದು, ಈ ಕುರಿತು ಮಂತ್ರಾಲಯ ರಾಯರ ಮಠದ ಆಡಳಿತ ಮಂಡಳಿ ಪ್ರಕಟಣೆ ಹೊರಡಿಸಿದೆ. ಮಂತ್ರಾಲಯ ಗುರು ರಾಘವೇಂದ್ರ ಸ್ವಾಮಿ ಮಠದ ಹೆಸರಿನಲ್ಲಿ ಭಕ್ತರಿಂದ ಹಣ ಸಂಗ್ರಹ ಮಾಡಲಾ ಗುತ್ತಿದೆ. ಫೇಕ್ ಯುಪಿಐ ಐಡಿಗಳ ಮೂಲಕ ಹಣ ಹಾಕಿಸಿಕೊಂಡು ವಂಚಿಸಲಾಗುತ್ತಿದೆ. ವಂಚಕರ ಕರೆ, ಪೋಸ್ಟ್, ಮೆಸೇಜ್ ನಂಬಿ ನಕಲಿ ಯುಪಿಐ ಐಡಿಗಳಿಗೆ ಹಣ ಹಾಕದಂತೆ ಮಠ ಎಚ್ಚರಿಕೆ ನೀಡಿದೆ.
ವಂಚಕರಿಂದ ಕರೆ, ಮೆಸೇಜ್ ಬಂದರೆ ಸೈಬರ್ ಪೊಲೀಸರಿಗೆ ಮಾಹಿತಿ ನೀಡುವಂತೆ ಸೂಚಿಸಿದೆ. ಕೊಠಡಿಗಳನ್ನು ಅಧಿಕೃತ ವೆಬ್‌ಸೈಟ್‌ನಿಂದ ಬುಕ್ ಮಾಡು ವಂತೆ ತಿಳಿಸಿದೆ. ಮಠದ ವ್ಯವಸ್ಥಾಪಕ ವೆಂಕಟೇಶ್ ಜೋಶಿ ವಂಚಕರ ಜಾಲದ ಬಗ್ಗೆ ಪ್ರಕಟಣೆ ಹೊರಡಿಸಿ ಭಕ್ತರು ಎಚ್ಚರ ವಹಿಸುವಂತೆ ಕೋರಿದ್ದಾರೆ.