Thursday, January 30, 2025
Menu

ನಂಜನಗೂಡು ಮಹಿಳೆ ಆತ್ಮಹತ್ಯೆ; ಮೈಕ್ರೋ ಫೈನಾನ್ಸ್‌ ಕಿರುಕುಳ ಶಂಕೆ

ನಂಜನಗೂಡು ತಾಲೂಕಿನ ಅಂಬಳೆ ಗ್ರಾಮದಲ್ಲಿ ವಿಷದ ಮಾತ್ರೆಗಳನ್ನು ನುಂಗಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜಯಶೀಲಾ (53) ಆತ್ಮಹತ್ಯೆ ಮಾಡಿಕೊಂಡ ಮಹಿಳೆ.

ಐಐಎಫ್‌ಎಲ್, ಫೈವ್ ಸ್ಟಾರ್ ಮೈಕ್ರೋ ಫೈನಾನ್ಸ್‌ನಲ್ಲಿ ಮನೆ, ವ್ಯವಸಾಯ ಹಾಗೂ ಹಸು ಸಾಕಾಣಿಕೆಗಾಗಿ ಜಯಶೀಲಾ 5 ಲಕ್ಷ ಸಾಲ ಪಡೆದಿದ್ದರು. ಪ್ರತಿ ತಿಂಗಳು 20,000ಕ್ಕೂ ಹೆಚ್ಚು ಇಎಂಐ ಕಟ್ಟಬೇಕಾಗಿತ್ತು. ಸಾಲದಲ್ಲಿ ತೆಗೆದುಕೊಂಡಿದ್ದ ಹಸು ಇತ್ತೀಚೆಗೆ ಮೃತಪಟ್ಟಿತ್ತು. ಈ ಕಾರಣಕ್ಕೆ ಜೀವನ ನಿರ್ವಹಣೆ ಮಾಡಲು ಸಾಧ್ಯವಾಗದ ಪರಿಸ್ಥಿತಿಗೆ ತಲುಪಿದ್ದರು ಎನ್ನಲಾಗಿದೆ.

ಆರ್ಥಿಕ ಸಂಕಷ್ಟದಿಂದ ಬೇಸತ್ತ ಆಕೆ ಹುಲ್ಲಹಳ್ಳಿಗೆ ತೆರಳಿ ವಿಷದ ಮಾತ್ರೆಗಳನ್ನು ತಂದು ಜಮೀನಿನಲ್ಲಿ ನುಂಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳ ಲಾಗಿದೆ. ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಂತರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬರಲಿದೆ.

Related Posts

Leave a Reply

Your email address will not be published. Required fields are marked *