Saturday, February 21, 2026
Menu

ಸಿಎಸ್‌ ವಿರುದ್ಧ ಆರೋಪ: ಸ್ನೇಹಮಯಿ ಕೃಷ್ಣ ಬಹಿರಂಗ ಕ್ಷಮೆ ಯಾಚನೆ

snehamai krihna

ಮುಡಾದ ಮಾಜಿ ಆಯುಕ್ತ ಡಿ.ಬಿ ನಟೇಶ್‌ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಅವರಿಗೆ ಒಂದೂವರೆ ಕೋಟಿ ರೂ. ನೀಡಿ ಮುಂಬಡ್ತಿ ತೆಗೆದುಕೊಂಡಿದ್ದಾರೆ ಎಂದು ಆರೋಪಿಸಿರುವ ಪ್ರಕರಣ ಸಂಬಂಧ ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಮಾಧ್ಯಮಗಳ ಮುಂದೆ ಬಹಿರಂಗವಾಗಿ ಕ್ಷಮೆ ಯಾಚಿಸಿದ್ದಾರೆ.

ಈ ಆರೋಕ್ಕೆ ಸಂಬಂಧಿಸಿದಂತೆ ಡಿ.ಬಿ ನಟೇಶ್‌ ನೀಡಿದ್ದ ದೂರಿನ ಅನ್ವಯ ಸಿಸಿಬಿ ಪೊಲೀಸರು ಸ್ನೇಹಮಯಿ ಕೃಷ್ಣ ಅವರನ್ನು ಬಿಡುಗಡೆಗೊಳಿಸಿದ್ದಾರೆ. ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌  ವಿರುದ್ಧ ತಪ್ಪು ಮಾಹಿತಿ ನೀಡಿದ್ದಕ್ಕಾಗಿ ಬಹಿರಂಗವಾಗಿ ಕ್ಷಮೆ ಕೇಳಿದ್ದಾರೆ. ಪೊಲೀಸ್‌ ತನಿಖೆಗೆ ಪೂರ್ಣ ಸಹಕಾರ ನೀಡಿದ್ದೇನೆ. ಯಾವುದೇ ನಕಲಿ ದಾಖಲೆಗಳನ್ನು ನಾನು ಸೃಷ್ಟಿಸಿಲ್ಲ, ಸಿಸಿಬಿ ಪೊಲೀಸರು ನನಗೆ ಫೆ.24 ರಂದು ಮತ್ತೊಮ್ಮೆ ವಿಚಾರಣೆಗೆ ಬರುವಂತೆ ಸೂಚನೆ ನೀಡಿದ್ದಾರೆ ಎಂದು ಹೇಳಿದರು.

ವಿನೋದ್ ಎಂಬ ವ್ಯಕ್ತಿ ನನ್ನನ್ನು ದಾರಿ ತಪ್ಪಿಸಿದ್ದಾನೆ. ಮುಡಾ ಮಾಜಿ ಆಯುಕ್ತ ನಟೇಶ್ ಮತ್ತು ವಿನೋದ್ ನಡುವೆ ಹಣಕಾಸು ವ್ಯವಹಾರವಿತ್ತು. ನಟೇಶ್‌ಗೆ ವಿನೋದ್ ಹಣ ನೀಡಬೇಕಿತ್ತು. ಆ ಹಣವನ್ನು ಕೇಳಬಾರದು ಎಂಬ ಕಾರಣಕ್ಕೆ ವಿನೋದ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಹೆಸರು ಬಳಸಿ ಸುಳ್ಳು ದಾಖಲೆ ಮತ್ತು ಮಾಹಿತಿ ನೀಡಿದ್ದ. ವಿನೋದ್ ಕೊಟ್ಟ ದಾಖಲೆಗಳನ್ನು ನಂಬಿ ದೊಡ್ಡ ತಪ್ಪು ಮಾಡಿದೆ. ಈ ವಿಚಾರದಲ್ಲಿ ಶಾಲಿನಿ ರಜನೀಶ್ ಅವರಿಗೆ ನೋವಾಗಿದ್ದರೆ ಕ್ಷಮೆಯಾಚಿಸುತ್ತೇನೆ. ಇದು ವೈಯಕ್ತಿಕವಾಗಿ ನಡೆದ ಒಂದು ಪ್ರಮಾದ ಎಂದಿದ್ದಾರೆ.

ವಿನೋದ್ ಮೊದಲು ಶಾಲಿನಿ ರಜನೀಶ್ ಅವರ ಹೆಸರನ್ನು ಹೇಳಿದ್ದ, ಈಗ ವಿಚಾರಣೆ ವೇಳೆ ಅವರು ಯಾರೋ ಪ್ರಭಾವಿ ವ್ಯಕ್ತಿ ಎಂದು ಮಾತು ಬದಲಿಸುತ್ತಿದ್ದಾನೆ. ವಿನೋದ್ ನನ್ನನ್ನು ಸ್ವಾರ್ಥಕ್ಕಾಗಿ ಬಳಸಿಕೊಳ್ಳುವ ಪ್ರಯತ್ನ ಮಾಡಿದ್ದಾನೆ ಎಂದು ಅಸಮಾಧಾನ ಹೊರಹಾಕಿದರು.

 

Related Posts

Leave a Reply

Your email address will not be published. Required fields are marked *