Tuesday, February 24, 2026
Menu

ವಿಟ್ಲ ಮೈತ್ರೇಯಿ ಗುರುಕುಲದ ವಿದ್ಯಾರ್ಥಿನಿಯ ಮೃತದೇಹ ಕೆರೆಯಲ್ಲಿ ಪತ್ತೆ

ದಕ್ಷಿಣ ಕನ್ನಡದ ವಿಟ್ಲ ಠಾಣೆ ವ್ಯಾಪ್ತಿಯ ಕೊಡಂಗಾಯಿ ಕೆರೆಯಲ್ಲಿ ಮೂರುಕಜೆ ಎಂಬಲ್ಲಿನ ಮೈತ್ರೆಯಿ ಗುರುಕುಲ ವಿದ್ಯಾಸಂಸ್ಥೆಯ 10ನೇ ತರಗತಿಯ ವಿದ್ಯಾರ್ಥಿನಿಯ ಶವ ಪತ್ತೆಯಾಗಿದೆ. ಬೆಂಗಳೂರಿನ ವೈಗ ಲಕ್ಷ್ಮಿ ಆತ್ಮಹತ್ಯೆ ಮಾಡಿಕೊಂಡವರು. ಆಕೆ ಫೆ. 22ರಿಂದ ನಾಪತ್ತೆಯಾಗಿದ್ದು, ಹುಡುಕಾಟ ನಡೆಸಲಾಗಿತ್ತು.

ಕೆರೆಯಲ್ಲಿ ಮೃತದೇಹ ಪತ್ತೆಯಾಗಿದ್ದು, ವಿಟ್ಲ ಠಾಣೆ ಪೊಲೀಸರು ಬಂದು ಮಾಹಿತಿ ಸಂಗ್ರಹಿಸಿ ಪರಿಶೀಲನೆ ನಡೆದ್ದಾರೆ. ವಿದ್ಯಾರ್ಥಿನಿಯ ಮೃತದೇಹವನ್ನು ಫ್ರೆಂಡ್ಸ್ ವಿಟ್ಲದ ಮುರಳೀಧರ ಅವರ ತಂಡ ಮೇಲಕ್ಕೆತ್ತಿದ್ದು, ಮರಣೋತ್ತರ ಪರೀಕ್ಷೆಗಾಗಿ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. ವಿದ್ಯಾರ್ಥಿನಿಯ ಸಾವಿಗೆ ನಿಖರ ಕಾರಣವೇನು ಎಂಬುದು ತನಿಖೆಯಿಂದ ತಿಳಿದುಬರಬೇಕಿದೆ.

ಪಿಯುಸಿ ವಿದ್ಯಾರ್ಥಿನಿ ನಾಪತ್ತೆ
ಕಾಪು ತಾಲೂಕು ಕಟಪಾಡಿ ಏಣಗುಡ್ಡೆಯ ಬಾಡಿಗೆ ಮನೆಯಲ್ಲಿ ವಾಸವಿದ್ದ ಕಾಲೇಜೊಂದರಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಬಿಜಾಪುರದ ಬಸವನ ಬಾಗೇವಾಡಿ ತಾಲೂಕಿನ ದೀಪ ಸುರೇಶ ಲಮಾಣಿ (20) ಫೆಬ್ರವರಿ 20 ರಂದು ಕಾಲೇಜಿಗೆ ರಜೆ ಹಾಕಿ ಮನೆಯಿಂದ ಹೊರ ಹೋದವರು ನಾಪತ್ತೆಯಾಗಿದ್ದಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಜಿಲ್ಲಾ ಪೊಲೀಸ್ ಕಂಟ್ರೋಲ್ ರೂಂ ದೂ.ಸಂ: 0820- 2526709/2526444, ಕಾರ್ಕಳ ಉಪವಿಭಾಗದ ಪೊಲೀಸ್ ಉಪಾಧೀಕ್ಷಕರ ಕಚೇರಿ ದೂ.ಸಂ: 08258-231333, ಕಾಪು ಪೊಲೀಸ್ ವೃತ್ತ ನಿರೀಕ್ಷಕರ ಕಚೇರಿ ದೂ.ಸಂ: 0820-2572333, ಮೊಬೈಲ್: 9480805431, ಕಾಪು ಪೊಲೀಸ್ ಠಾಣೆ ಪೊಲೀಸ್ ಉಪ ನಿರೀಕ್ಷಕರ ಕಚೇರಿ ದೂ.ಸಂ: 0820-2551033, ಮೊಬೈಲ್: 9480805449 ಸಂಪರ್ಕಿಸಬಹುದಾಗಿದೆ ಎಂದು ಕಾಪು ಪೊಲೀಸ್ ಠಾಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

ಮಂಗಳೂರಿನ ಕುದ್ರೋಳಿ ಮಂಡಿ ಬಳಿಯ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಐಶ್ವರ್ಯ ಮಲ್ಲಪ್ಪ ಕಾತ್ರಿಕೆ (19) ಎಂಬಾಕೆ ನಾಪತ್ತೆಯಾಗಿರುವ ಬಗ್ಗೆ ಬಂದರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕುದ್ರೋಳಿಯ ಮಟನ್‌ಶಾಪ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದ ಮಂಜಪ್ಪ ಹೊಳೆಯಪ್ಪ ಉಸಲ್‌ಕೊಪ್ಪ ಅವರ ಪತ್ನಿ ಐಶ್ವರ್ಯ ಫೆ.20ರಂದು ಮನೆಯಿಂದ ಹೊರಗೆ ಹೋದವರು ನಾಪತ್ತೆಯಾಗಿದ್ದಾರೆ.

Related Posts

Leave a Reply

Your email address will not be published. Required fields are marked *