ಮಾಹಿತಿ ತಂತ್ರಜ್ಞಾನ ಕಾಯಿದೆ 2021 ಮತ್ತು ಐಟಿ ಕಾಯಿದೆಯ ಸೆಕ್ಷನ್ 69A ಅಡಿ ಐದು ಒಟಿಟಿ ಪ್ಲಾಟ್ಫಾರ್ಮ್ಗಳನ್ನು ಕೇಂದ್ರ ಸರ್ಕಾರ ನಿರ್ಬಂಧಿಸಿದೆ. ಅಶ್ಲೀಲ ಮತ್ತು ಆಕ್ಷೇಪಾರ್ಹ ವಿಷಯ ಪ್ರಸಾರ ಮಾಡುವ ಮೂಲಕ ಸಾಮಾಜಿಕ ಮಾನ ದಂಡಗಳನ್ನು ಪಾಲಿಸದ ಕಾರಣಕ್ಕೆ ನಿರ್ಬಂಧ ವಿಧಿಸಿದೆ.
ಡಿಜಿಟಲ್ ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮ ಎದುರಿಸಬೇಕಾಗುತ್ತದೆ. ನಿಯಂತ್ರಣದ ನಿಟ್ಟಿನಲ್ಲಿ ಇದು ಪ್ರಮುಖ ಹೆಜ್ಜೆಯಾಗಿದೆ. ಅಶ್ಲೀಲ ಮತ್ತು ಆಕ್ಷೇಪಾರ್ಹ ವಿಷಯವನ್ನು ತೋರಿಸುವ ಐದು ಒಟಿಟಿ ಪ್ಲಾಟ್ಫಾರ್ಮ್ಗಳ ನಿರ್ಬಂಧಿಸಿ ಕೇಂದ್ರ ಸರ್ಕಾರ ಆದೇಶಿಸಿದೆ.
ಮೂಡ್ಎಕ್ಸ್ವಿಐಪಿ, ಕೋಯಲ್ ಪ್ಲೇಪ್ರೊ, ಡಿಜಿ ಮೂವಿಪ್ಲೆಕ್ಸ್, ಫೀಲ್ ಮತ್ತು ಜುಗ್ನು ಒಟಿಟಿ ಪ್ಲಾಟ್ಫಾರ್ಮ್ಗಳನ್ನು ನಿರ್ಬಂಧಿಸಲಾಗಿದೆ. ಈ ವೇದಿಕೆಗಳು ಅಶ್ಲೀಲ ಮತ್ತು ಆಕ್ಷೇಪಾರ್ಹವೆಂದು ಪರಿಗಣಿಸಲಾದ ವಿಷಯವನ್ನು ಒಳಗೊಂಡಿವೆ ಎಂದು ಮಾಹಿತಿ ಸಚಿವಾಲಯ ಹೇಳಿದೆ. ಡಿಜಿಟಲ್ ವೇದಿಕೆಗಳು ಸ್ವಾತಂತ್ರ್ಯ ಹೊಂದಿರುವ ಜೊತೆಗೆ ನಿಯಮಗಳು ಮತ್ತು ಸಾಮಾಜಿಕ ಮಾನದಂಡಗಳನ್ನು ಪಾಲಿಸಬೇಕು. ಈ ವೇದಿಕೆಗಳ ವೆಬ್ಸೈಟ್ಗಳು ಮತ್ತು ಅಪ್ಲಿಕೇಶನ್ಗಳು ಇನ್ನು ಮುಂದೆ ಭಾರತ ದಲ್ಲಿ ಕಾರ್ಯನಿರ್ವಹಿಸುವುದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಯಾವುದೇ ಪ್ಲಾಟ್ಫಾರ್ಮ್ ನಿಯಮಗಳನ್ನು ಉಲ್ಲಂಘಿಸಿದರೆ ಅಥವಾ ಆಕ್ಷೇಪಾರ್ಹ ವಿಷಯವನ್ನು ಪ್ರದರ್ಶಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಮನರಂಜನಾ ಉದ್ಯಮವು ಸೃಜನಶೀಲ ಸ್ವಾತಂತ್ರ್ಯದ ಹೆಸರಿನಲ್ಲಿ ಅಶ್ಲೀಲತೆಯನ್ನು ಹೆಚ್ಚಾಗಿ ಉತ್ತೇಜಿಸುವುದನ್ನು ತಡೆಯಲಾಗುತ್ತದೆ ಎಂದು ಸಚಿವಾಲಯ ತಿಳಿಸಿದೆ.


