ಪ್ರತಿಷ್ಠಿತ ಮಠದ ಸ್ವಾಮೀಜಿ, ಮಂತ್ರಿಗಳು, ಐಪಿಎಸ್ ಅಧಿಕಾರಿಗಳ ಹೆಸರನ್ನು ಬಳಸಿಕೊಂಡು ಕೋಟಿ ಕೋಟಿ ರೂಪಾಯಿ ವಂಚನೆ ಮಾಡಿರುವುದಾಗಿ ದೂರು ದಾಖಲಾಗಿದೆ. ಪ್ರಕರಣದ ಮುಖ್ಯ ಆರೋಪಿ ಸನ್ನಿ ಎಂ. ನಾಯಕ್ ರಾಜಮನೆ ಗ್ರೂಪ್ಸ್‌ನ ಎಂಡಿ ಎಂದು ಹೇಳಲಾಗಿದೆ.
ಬೆಂಗಳೂರು ಮತ್ತು ದಾಬಸ್‌ಪೇಟೆ ಇಂಡಸ್ಟ್ರಿಯಲ್ ಏರಿಯಾದಲ್ಲಿ ಕೆಐಎಡಿಬಿ ಮೂಲಕ ಸೈಟ್ ಅಲಾಟ್‌ಮೆಂಟ್ ಭರವಸೆ ನೀಡಿ, ಉದ್ಯಮಿಗಳಾದ ರಾಜಗೋಪಾಲ್ ಮತ್ತು ಮಾಲ್ತೇಶ್ ಅವರಿಂದ ಕೋಟಿ ಕೋಟಿ ರೂಪಾಯಿ ಪಡೆದು ವಂಚಿಸಲಾಗಿದೆ ಎಂದು ದೂರಿನಲ್ಲಿ ದೂರಿನಲ್ಲಿ ತಿಳಿಸಲಾಗಿದೆ. ಆರೋಪಿಯು ತನ್ನೊಂದಿಗೆ ಮಂತ್ರಿಗಳು, ಐಪಿಎಸ್ ಅಧಿಕಾರಿಗಳ ಪೋಟೊಗಳನ್ನು ತೋರಿಸಿ ನಂಬಿಸುತ್ತಿದ್ದ ಎಂದು ಆರೋಪಿಸಲಾಗಿದೆ.
ಹಂತ ಹಂತವಾಗಿ ಹಣ ಪಡೆದು ಸೈಟ್ ಕೊಡಿಸುವುದಾಗಿ ಹೇಳಿ ಉದ್ಯಮಿಗಳಿಗೆ ವಂಚನೆ ಮಾಡಿರುವುದಾಗಿ ನಗರ ಪೊಲೀಸ್ ಆಯುಕ್ತರಿಗೆ ದೂರು ಸಲ್ಲಿಕೆಯಾಗಿದೆ. ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಪ್ರಭಾವಿ ವ್ಯಕ್ತಿಗಳ ಹೆಸರನ್ನು ಬಳಸಿಕೊಂಡು ಇಂತಹ ವಂಚನೆಗಳು ನಡೆಯುತ್ತಿದ್ದು, ಸಾರ್ವಜನಿಕರು ಮತ್ತು ಉದ್ಯಮಿಗಳು ಈ ಬಗ್ಗೆ ಎಚ್ಚರಿಕೆ ವಹಿಸಬೇಕು ಎಂದು ಪೊಲೀಸರು ತಿಳಿಸಿದ್ದಾರೆ.


