Wednesday, February 25, 2026
Menu

ಕಾಂಗ್ರೆಸ್‌ ದುರಾಡಳಿತ ವಿರುದ್ಧ ಬೀದಿಗಿಳಿದ ಜನ: ಆರ್‌ ಅಶೋಕ ಕಿಡಿ

R Ashoka

ಕಾಂಗ್ರೆಸ್‌ ಅಧಿಕಾರದಲ್ಲಿದೆ, ಜನರು ಬೀದಿಗಿಳಿದಿದ್ದಾರೆ. @INCKarnataka ಸರ್ಕಾರದ ಕೆಟ್ಟ ಕೊಳಕು ಆಡಳಿತದಿಂದ ಸಮಾಜದ ಪ್ರತಿ ವರ್ಗ ಬೀದಿಗಿಳಿದು ಹೋರಾಟ ನಡೆಸುತ್ತಿದೆ. ಅರಾಜಕ ಮುಖ್ಯಮಂತ್ರಿ @siddaramaiah ನವರೇ, ನಿಮ್ಮ ಭ್ರಷ್ಟ ಆಡಳಿತದಲ್ಲಿ ಒಬ್ಬರಾದರೂ ನೆಮ್ಮದಿಯಿಂದ ಇದ್ದಾರಾ? ಸರ್ಕಾರದ ಖಜಾನೆ ಖಾಲಿಯಾಗಿರುವುದಕ್ಕೆ ಈ ಹೋರಾಟಗಳಿಗಿಂತ ಬೇರೆ ಸಾಕ್ಷಿ ಬೇಕೆ? ಇಡೀ ಕರ್ನಾಟಕ ಇಂದು ಅರಾಜಕತೆಯಲ್ಲಿದೆ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ  ಕಿಡಿ ಕಾರಿದ್ದಾರೆ.

ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, ಧಾರವಾಡದಲ್ಲಿ ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಂದ ನೇಮಕಾತಿಗೆ ಆಗ್ರಹಿಸಿ ಪ್ರತಿಭಟನೆ ನಡೆಯುತ್ತಿದೆ, ಖಾಲಿ ಹುದ್ದೆ ಭರ್ತಿ ಸೇರಿ ವಿವಿಧ ಬೇಡಿಕೆಗೆ ಆಗ್ರಹಿಸಿ ರಾಜ್ಯ ಸರ್ಕಾರಿ ವೈದ್ಯರಿಂದ ಮಾರ್ಚ್‌ 11 ರಿಂದ ಒಪಿಡಿ ಬಂದ್‌ ಆಗಲಿದೆ. 37,000 ಕೋಟಿ ರೂ. ಬಾಕಿಗೆ ಆಗ್ರಹಿಸಿ ಗುತ್ತಿಗೆದಾರರಿಂದ ಮಾರ್ಚ್‌ 6 ರಂದು ಕಾಮಗಾರಿ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಯಲಿದೆ ಎಂದು ತಿಳಿಸಿದ್ದಾರೆ.

ಪರಿಶಿಷ್ಟ ಜಾತಿಗಳ ಒಳಮೀಸಲಾತಿ ವರ್ಗೀಕರಣದಲ್ಲಿ ಆಗಿರುವ ಅನ್ಯಾಯ ಸರಿಪಡಿಸುವಂತೆ ಬಂಜಾರ, ಭೋವಿ, ಕೊರಮ, ಕೊರಚ ಮತ್ತು ಅಲೆಮಾರಿ ಸಮುದಾಯಗಳ ಪ್ರತಿಭಟನೆ ಹಮ್ಮಿಕೊಂಡಿದೆ. ಒಳಮೀಸಲಾತಿಯಿಂದ ಆಗಿರುವ ಅನ್ಯಾಯ ವಿರುದ್ಧ ಎಸ್ಸಿ ಬಲಗೈ ಸಮುದಾಯ ಪ್ರತಿಭಟನೆಗೆ ಇಳಿದಿದೆ. ಬಿಡದಿ ಟೌನ್‌ಶಿಪ್‌ ಯೋಜನೆ, ಸೆಣಬು ಸಬ್ಸಿಡಿ ಬಂದ್‌, ಕಬ್ಬು ಬಿಲ್‌ ಬಾಕಿ ವಿರುದ್ಧ ರೈತರಿಂದ ಬೀದಿಳಿಗಿಳಿದಿದ್ದಾರೆ. ವೇತನ ಹೆಚ್ಚಳ ಸೇರಿ ವಿವಿಧ ಬೇಡಿಕೆಗೆ ಒತ್ತಾಯಿಸಿ ಫೆಬ್ರವರಿ 27 ರಿಂದ ಆಶಾ ಕಾರ್ಯಕರ್ತೆಯರಿಂದ ಪ್ರತಿಭಟನೆ ನಡೆಯಲಿದೆ ಎಂದು ಬರೆದುಕೊಂಡಿದ್ದಾರೆ.

38 ತಿಂಗಳ ಹಿಂಬಾಕಿಗಾಗಿ ಸಾರಿಗೆ ನೌಕರರಿಂದ ಮುಷ್ಕರ ನಡೆಯುತ್ತಿದೆ, ಅರಾಜಕ ಮುಖ್ಯಮಂತ್ರಿ @siddaramaiah ನವರೇ, ನಿಮ್ಮ ಭ್ರಷ್ಟ ಆಡಳಿತದಲ್ಲಿ ಒಬ್ಬರಾದರೂ ನೆಮ್ಮದಿಯಿಂದ ಇದ್ದಾರಾ? ಸರ್ಕಾರದ ಖಜಾನೆ ಖಾಲಿಯಾಗಿರುವುದಕ್ಕೆ ಈ ಹೋರಾಟಗಳಿಗಿಂತ ಬೇರೆ ಸಾಕ್ಷಿ ಬೇಕೇ ಎಂದು ಪ್ರಶ್ನಿಸಿದ್ದಾರೆ.

Related Posts

Leave a Reply

Your email address will not be published. Required fields are marked *