Thursday, February 26, 2026
Menu

‘ನ್ಯಾಯಾಂಗದಲ್ಲಿ ಭ್ರಷ್ಟಾಚಾರ’ ಆಳ ಒಳಸಂಚು: ಕ್ಷಮೆಯಿಲ್ಲ, ತಪ್ಪಿತಸ್ಥರ ತಲೆದಂಡವೆಂದು ಸರ್ಕಾರಕ್ಕೆ ಸುಪ್ರೀಂ ತಾಕೀತು

ಎನ್‌ಸಿಇಆರ್‌ಟಿ ಎಂಟನೇ ತರಗತಿಗೆ ಅಳವಡಿಸಿರುವ ʼನ್ಯಾಯಾಂಗದಲ್ಲಿ ಭ್ರಷ್ಟಾಚಾರʼ ಪಾಠವನ್ನು ಒಳಗೊಂಡ ಸಮಾಜ ವಿಜ್ಞಾನ ಪಠ್ಯಪುಸ್ತಕದ ಮೇಲೆ ಸುಪ್ರೀಂ ಕೋರ್ಟ್‌ ಸಂಪೂರ್ಣ ನಿಷೇಧ ಹೇರಿದೆ.

ಪುಸ್ತಕದಲ್ಲಿ ‘ನ್ಯಾಯಾಂಗದಲ್ಲಿ ಭ್ರಷ್ಟಾಚಾರ’ ಎಂಬ ಭಾಗವನ್ನು ಸೇರಿಸಿರುವುದು ಆಳವಾದ ಒಳಸಂಚು ಎಂದು ತೀವ್ರವಾಗಿ ಖಂಡಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ನೇತೃತ್ವದ ಪೀಠವು ವಿಷಯವನ್ನು ಸ್ವಯಂ ಪ್ರೇರಿತವಾಗಿ ವಿಚಾರಣೆಗೆ ತೆಗೆದುಕೊಂಡು, ಪುಸ್ತಕದ ಭೌತಿಕ ಹಾಗೂ ಡಿಜಿಟಲ್ ನಕಲುಗಳನ್ನು ತಕ್ಷಣ ಸ್ವಾಧೀನಪಡಿಸಿಕೊಳ್ಳುವಂತೆ ಆದೇಶಿಸಿದೆ. ಮುದ್ರಣ, ಮರುಮುದ್ರಣ, ಡಿಜಿಟಲ್ ಹಂಚಿಕೆ ಅಥವಾ ಯಾವುದೇ ರೂಪದಲ್ಲಿ ಹಂಚಿಕೊಳ್ಳುವುದನ್ನು ನಿಷೇಧಿಸಿದೆ. ಉಲ್ಲಂಘಿಸಿದರೆ ನ್ಯಾಯಾಲಯದ ಆದೇಶ ಉಲ್ಲಂಘನೆ ಎಂದು ಪರಿಗಣಿಸಲಾಗುವುದು ಎಂದು ಎಚ್ಚರಿಕೆ ನೀಡಿದೆ.

ಕೇಂದ್ರ ಸರ್ಕಾರದ ಪರವಾಗಿ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಬೇಷರತ್ ಕ್ಷಮೆ ಕೇಳಿದರು. ಈ ಅಧ್ಯಾಯ ರಚನೆಯಲ್ಲಿ ಭಾಗಿಯಾಗಿದ್ದವರನ್ನು ಯುಜಿಸಿ ಅಥವಾ ಯಾವುದೇ ಸಚಿವಾಲಯದೊಂದಿಗೆ ಮುಂದೆ ಕೆಲಸ ಮಾಡಲು ಅವಕಾಶ ನೀಡದಂತೆ ಮಾಡಲಾಗುವುದು ಎಂದು ತಿಳಿಸಿದರು. 32 ಪ್ರತಿಗಳು ಮಾರಾಟವಾಗಿದ್ದು, ಪುಸ್ತಕವನ್ನು ಹಿಂಪಡೆಯಲಾ ಗಿದೆ ಎಂದು ಹೇಳಿದರು. ಕೋರ್ಟ್‌ ಈ ಕ್ಷಮಾಪಣೆಯನ್ನು ಸ್ವೀಕರಿಸಲಿಲ್ಲ. ಅಧಿಕಾರಿಗಳ ತಲೆದಂಡವಾಗಬೇಕು ಎಂದು ಹೇಳಿದೆ.

ಶಾಲಾ  ಶಿಕ್ಷಣ ಇಲಾಖೆಯ ಕಾರ್ಯದರ್ಶಿ ಹಾಗೂ ಎನ್‌ಸಿಇಆರ್‌ಟಿ ನಿರ್ದೇಶಕ ಡಾ. ದಿನೇಶ್ ಪ್ರಸಾದ್ ಸಕ್ಲಾನಿ ಅವರಿಗೆ ನೋಟಿಸ್ ಜಾರಿ ಮಾಡಲಾಯಿತು. ಭ್ರಷ್ಟಾಚಾರದ ಉಲ್ಲೇಖಕ್ಕೆ ಕಾರಣ ರಾದವರ ವಿರುದ್ಧ ಕ್ರಿಮಿನಲ್ ನ್ಯಾಯಾಲಯಕ್ಕೆ ಅವಮಾನ ಅಥವಾ ಇತರ ಕಾನೂನು ಕ್ರಮ ಏಕೆ ತೆಗೆದುಕೊಳ್ಳಬಾರದು ಎಂದು ಪ್ರಶ್ನಿಸಲಾಗಿದೆ. ಇದರ ಹಿಂದೆ ಯಾರಿದ್ದಾರೆ ಎಂಬುದನ್ನು ನಾವು ಕಂಡುಹಿಡಿಯುತ್ತೇವೆ. ನ್ಯಾಯಾಲಯವು ಸಂಪೂರ್ಣವಾಗಿ ತೃಪ್ತಿ ಹೊಂದುವವರೆಗೆ ಈ ಪ್ರಕರಣ ಮುಂದುವರಿಯುತ್ತದೆ ಎಂದು ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಹೇಳಿದ್ದಾರೆ.

Related Posts

Leave a Reply

Your email address will not be published. Required fields are marked *