Thursday, February 26, 2026
Menu

ವಾಟ್ಸಾಪ್‌ನಲ್ಲಿ ಭಾವನಾತ್ಮಕ ಸ್ಟೇಟಸ್ ಹಾಕಿ ತುರುವೇಕೆರೆಯಲ್ಲಿ ವಿದ್ಯಾರ್ಥಿ ಸುಸೈಡ್‌

ತುಮಕೂರು ಜಿಲ್ಲೆಯ ತುರುವೇಕೆರೆ ಪಟ್ಟಣದಲ್ಲಿ ಆಕಸ್ಮಿಕವಾಗಿ ಕೆರೆಗೆ ಬಿದ್ದು ಮೃತಪಟ್ಟಿದ್ದ ಎನ್ನಲಾದ ಡಿಪ್ಲೊಮಾ ವಿದ್ಯಾರ್ಥಿ ಧನುಷ್ (19) ಸಾವು ಆತ್ಮಹತ್ಯೆ ಎಂಬುದು ಗೊತ್ತಾಗಿದೆ.

ಗೋಪ್ಪೆನಹಳ್ಳಿ ನಿವಾಸಿಯಾದ ಧನುಷ್ ವಾಟ್ಸಾಪ್ ಮತ್ತು ಫೇಸ್‌ಬುಕ್‌ನಲ್ಲಿ ಭಾವನಾತ್ಮಕ ಸ್ಟೇಟಸ್ ಹಾಕಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪಟ್ಟಣದ ಸರ್ಕಾರಿ ಡಿಪ್ಲೊಮಾ ಕಾಲೇಜಿನಲ್ಲಿ ಎರಡನೇ ವರ್ಷದ ವ್ಯಾಸಂಗ ಮಾಡುತ್ತಿದ್ದ ಆತ ಬೆಳಿಗ್ಗೆ ಕಾಲೇಜಿಗೆ ಹೋಗುವುದಾಗಿ ಮನೆಯಿಂದ ಬಂದಿದ್ದ, ಸಂಜೆಯಾದರೂ ವಾಪಸ್ ಹೋಗಿರಲಿಲ್ಲ. ಪೋಷಕರು ಕರೆ ಮಾಡಿದರೂ ಸ್ವೀಕರಿಸದಿದ್ದಾಗ ಆತಂಕಗೊಂಡು ಹುಡುಕಾಟ ಆರಂಭಿಸಿದ್ದರು.

ಕಾಲೇಜಿನ ಹಿಂಭಾಗ ಇರುವ ಕಟ್ಟೆಯೊಂದರ ಬಳಿ ಬ್ಯಾಗ್, ಚಪ್ಪಲಿ, ಮೊಬೈಲ್ ಪತ್ತೆಯಾಗಿದೆ. ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಹಾಗೂ ಅಗ್ನಿಶಾಮಕದಳ ಸಿಬ್ಬಂದಿ ಕಾರ್ಯಚರಣೆ ನಡೆಸಿ ನೀರಿನ ಕಟ್ಟೆ ಬಳಿ ಮೃತದೇಹ ಪತ್ತೆ ಹಚ್ಚಿದ್ದಾರೆ, ಮೃತದೇಹವನ್ನು ಕಟ್ಟೆಯಿಂದ ಹೊರತೆಗೆದು ತುರುವೇಕೆರೆ ಸರ್ಕಾರಿ ಆಸ್ಪತ್ರೆಯ ಶವಗಾರಕ್ಕೆ ರವಾನೆ ಮಾಡಲಾಗಿತ್ತು. ತುರುವೇಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇದೀಗ ಧನುಷ್ ಆತ್ಮಹತ್ಯೆ ಮಾಡಿಕೊಳ್ಳುವ ಮೊದಲು ತನ್ನ ಮೊಬೈಲ್‌ನಲ್ಲಿ ಸ್ಟೇಟಸ್ ಹಾಕಿದ್ದ ಎನ್ನಲಾಗಿದೆ. ನೀನೇ ಖುಷಿಯಾಗಿರು, ನಾನು ಈ ಪ್ರಪಂಚವನ್ನೇ ಬಿಟ್ಟು ಹೋಗುತ್ತಿದ್ದೇನೆ… ಬಾಯ್” ಎಂದು ಬರೆದುಕೊಂಡು ನೀರಿನ ಕಟ್ಟೆಯ ಫೋಟೋ ಹಾಕಿದ್ದ ಎನ್ನಲಾಗಿದೆ. ಇದು ಪ್ರೇಮ ವೈಫಲ್ಯದ ಹಿನ್ನೆಲೆಯಲ್ಲಿ ನಡೆದ ಆತ್ಮಹತ್ಯೆ ಎಂಬ ಅನುಮಾನ ದಟ್ಟವಾಗಿದೆ, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಐ ಲವ್ ಯೂ ಸೋ ಮಚ್ ಅಮ್ಮ: ಮಸೇಜ್‌ ಕಳಿಸಿ ವಿದ್ಯಾರ್ಥಿನಿ ಆತ್ಮಹತ್ಯೆ

ಬಿಎಸ್‌ಸಿ ವಿದ್ಯಾರ್ಥಿನಿ ಹಾಗೂ ಯೂಟ್ಯೂಬರ್ ಬೋನು ಕೋಮಲಿ (21) ಹೈದರಾಬಾದ್‌ನ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಸಾವಿಗೂ ಮೊದಲು ಕುವೈತ್‌ನಲ್ಲಿರುವ ತಾಯಿಗೆ ‘ಐ ಲವ್ ಯೂ ಸೋ ಮಚ್ ಅಮ್ಮ’ ಎಂದು ಮೆಸೇಜ್‌ ಕಳುಹಿಸಿದ್ದರು ಎನ್ನಲಾಗಿದೆ.

ಕೋಮಲಿ ಕಳೆದ ಹೈದರಾಬಾದ್‌ನ ಅಪಾರ್ಟ್‌ಮೆಂಟ್‌ನಲ್ಲಿ ಒಂಟಿಯಾಗಿ ವಾಸಿಸುತ್ತಿದ್ದಳು. ಖಾಸಗಿ ಕಾಲೇಜಿನಲ್ಲಿ ಬಿಎಸ್ಸಿ ವ್ಯಾಸಂಗ ಮಾಡುತ್ತಿದ್ದ ಆಕೆ, ಪಾರ್ಟ್-ಟೈಮ್ ಆಗಿ ಯೂಟ್ಯೂಬ್‌ನಲ್ಲಿ ಲೈಫ್‌ಸ್ಟೈಲ್ ಮತ್ತು ವೈಯಕ್ತಿಕ ವೀಡಿಯೊಗಳನ್ನು ಅಪ್‌ಲೋಡ್ ಮಾಡುತ್ತಿದ್ದರು.

ಕೋಮಲಿ ಸೋಮವಾರ ಕುವೈತ್‌ನಲ್ಲಿ ಕೆಲಸ ಮಾಡುತ್ತಿರುವ ತಾಯಿ ಬಿ. ಸತ್ಯ ವರಲಕ್ಷ್ಮಿಗೆ ಐ ಲವ್ ಯು ಮಮ್ಮಿ ಸೋ ಮಚ್.. ತಮ್ಮನನ್ನು ಚೆನ್ನಾಗಿ ನೋಡಿಕೋ ಎಂದು ಮೆಸೇಜ್‌ ಮಾಡಿದ್ದಳು. ನಂತರ ಆಕೆಯ ಮೊಬೈಲ್ ಸ್ವಿಚ್ ಆಫ್ ಆಗಿದೆ.

ಮಧ್ಯಾಹ್ನ ಸ್ನೇಹಿತ ಫ್ಲಾಟ್‌ಗೆ ಹೋಗಿ ಬಾಗಿಲು ತಟ್ಟಿದರೂ ಪ್ರತಿಕ್ರಿಯೆ ಬಂದಿಲ್ಲ. ಬಾಗಿಲು ಒಡೆದು ನೋಡಿದಾಗ, ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಕೋಮಲಿ ಆರು ತಿಂಗಳ ಹಿಂದೆಯೂ ಆತ್ಮಹತ್ಯೆಗೆ ಯತ್ನಿಸಿದ್ದರು ಎಂದು ತಿಳಿದು ಬಂದಿದೆ.

Related Posts

Leave a Reply

Your email address will not be published. Required fields are marked *