Menu

ಮಾಜಿ ಸಿಎಂ ದಿ. ಕೆಸಿ ರೆಡ್ಡಿಯವರ ಆದರ್ಶಗಳು ನಮಗೆ ಸ್ಫೂರ್ತಿ: ಸಿದ್ದರಾಮಯ್ಯ

ರಾಜ್ಯದ ಅಭಿವೃದ್ಧಿಗೆ ಮಹತ್ತರ ಕೊಡುಗೆ ನೀಡಿದ ಮಾಜಿ ಮುಖ್ಯಮಂತ್ರಿ ದಿವಂಗತ ಕೆಸಿ ರೆಡ್ಡಿಯವರ ಆದರ್ಶಗಳು ನಮಗೆ ಸ್ಪೂರ್ತಿ ಹಾಗೂ ಮಾರ್ಗದರ್ಶನ ನೀಡಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಹೇಳಿದ್ದಾರೆ.

ಅವರು  ಮಾಜಿ ಮುಖ್ಯಮಂತ್ರಿ ದಿವಂಗತ ಕೆ ಸಿ ರೆಡ್ಡಿ ಯವರ ಪುಣ್ಯ ತಿಥಿಯ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಮಾಜಿ ಮುಖ್ಯಮಂತ್ರಿ ದಿವಂಗತ ಕೆ ಸಿ ರೆಡ್ಡಿ ಯವರಿಗೆ ಇಂದು ಗೌರವ ಅರ್ಪಿಸಲಾಗಿದೆ. ಅವರು ಸ್ವತಂತ್ರ ಭಾರತದ ರಾಜ್ಯದ ಮೊದಲ ಮುಖ್ಯಮಂತ್ರಿ. ಸ್ವಾತಂತ್ರ್ಯ ಹೋರಾಟದಲ್ಲಿ ಸಕ್ರಿಯರಾಗಿದ್ದ ಅವರು ಅನೇಕ ಬಾರಿ ಜೈಲುವಾಸ ಅನುಭವಿಸಿದ್ದಾರೆ. ಮೈಸೂರು ಸಂಸ್ಥಾನವನ್ನು ಒಗ್ಗೂಡಿಸುವುದರಲ್ಲಿ ಪ್ರಮುಖ ಪಾತ್ರ ವಹಿಸಿದ್ದರು ಎಂಬುದಾಗಿ ಸ್ಮರಿಸಿದರು.

ಮುಖ್ಯಮಂತ್ರಿಯಾಗಿ, ಕೇಂದ್ರ ಸಚಿವರಾಗಿ, ರಾಜ್ಯಪಾಲರಾಗಿ ಜನಸೇವೆಯನ್ನು ಮಾಡಿದ್ದರು, ಕರ್ನಾಟಕದಲ್ಲಿ ಕಾರ್ಖಾನೆಗಳ ಸ್ಥಾಪನೆಗೆ ಶ್ರಮಿಸಿದ ಕೆ.ಸಿ.ರೆಡ್ಡಿಯವರು ರಾಜ್ಯ ಅಭಿವೃದ್ಧಿಗೆ ಮಹತ್ತರ ಕೊಡುಗೆ ಪ್ರಾಮಾಣಿಕ ರಾಜಕೀಯ ನಾಯಕರಾಗಿದ್ದರು. ಅವರ ಆತ್ಮಕ್ಕೆ ಭಗವಂತನು ಚಿರಶಾಂತಿಯನ್ನು ನೀಡಲಿ ಹಾಗೂ ಅವರ ಆದರ್ಶಗಳು ಸದಾ ನಮಗೆ ಮಾರ್ಗದರ್ಶನ ನೀಡಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

Related Posts

Leave a Reply

Your email address will not be published. Required fields are marked *