Menu

ಮಂತ್ರಾಲಯದಿಂದ ವಾಪಸಾಗುತ್ತಿದ್ದ ಕಾರು ಲಾರಿಗೆ ಡಿಕ್ಕಿ: ಮೂವರ ಸಾವು

ಚಿತ್ರದುರ್ಗದ ಚಳ್ಳಕೆರೆ ತಾಲೂಕಿನ ಹಿರೆಹಳ್ಳಿ ಬಳಿ ನಿಂತಿದ್ದ ಲಾರಿಗೆ ಕಾರೊಂದು ಡಿಕ್ಕಿಯಾಗಿ ಮೂವರು ಪ್ರಾಣ ಕಳೆದುಕೊಂಡಿದ್ದಾರೆ. ಕುಣಿಗಲ್‌ನ ಐವರು ಕಾರಲ್ಲಿ ಮಂತ್ರಾಲಯಕ್ಕೆ ತೆರಳಿ ರಾಯರ ದರ್ಶನ ಪಡೆದು ಕುಣಿಗಲ್‌ಗೆ ವಾಪಸಾಗುತ್ತಿದ್ದಾಗ ಅಪಘಾತ ಸಂಭವಿಸಿದೆ.

ಕಾರು ಚಾಲಕನ ಅಜಾಗರೂಕತೆ ಹಾಗೂ ಅತಿವೇಗದಿಂದ ಅವಘಡ ಸಂಭವಿಸಿದೆ. ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಗುಬ್ಬಿ ತಾಲೂಕಿನ ಹೊಸಕೆರೆ ಗ್ರಾಮದ ನರಸಿಂಹ ಮೂರ್ತಿ (38), ಗಂಗಾಧರ್ (35),ಲೋಹಿತ್ (40) ಅಪಘಾತದಲ್ಲಿ ಮೃತಪಟ್ಟಿದ್ದಾರೆ.

ಡಿಕ್ಕಿಯ ರಭಸಕ್ಕೆ ಕಾರಿನ ಚಾಲಕನ ಬದಿಯಲ್ಲಿ ಕುಳಿತಿದ್ದವರ ತಲೆಗಳೇ ಬೇರ್ಪಟ್ಟಿದ್ದು, ಇಬ್ಬರು ಗಂಭಿರವಾಗಿ ಗಾಯಗೊಂಡು ಚಳ್ಳಕೆರೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಥಳಕ್ಕೆ ಚಿತ್ರದುರ್ಗ ಎಸ್ಪಿ ರಂಜಿತ್ ಕುಮಾರ್ ಬಂಡಾರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತಳಕು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Posts

Leave a Reply

Your email address will not be published. Required fields are marked *