Menu

ನಿಧಾನವಾಗಿ ಕಾರು ಓಡಿಸುವಂತೆ ಹೇಳಿದ್ದಕ್ಕೆ ಯವಕನಿಗೆ ಗುದ್ದಿಸಿ ಕೊಲೆ

ಹೊಳೆನರಸೀಪುರ ತಾಲೂಕಿನ ಸೂರನಹಳ್ಳಿ ಗ್ರಾಮದಲ್ಲಿ ನಿಧಾನವಾಗಿ ಕಾರು ಓಡಿಸುವಂತೆ ತಿಳಿ ಹೇಳಿದ ಯುವಕನಿಗೆ ಗುದ್ದಿಸಿ ಹತ್ಯೆ ಮಾಡಿದ ಘಟನೆ ನಡೆದಿದೆ. ಹತ್ಯೆಯಾದ ಯುವಕನನ್ನು ಮನು (27) ಎಂದು ಗುರುತಿಸಲಾಗಿದೆ.

ರಾತ್ರಿ ಮನು, ಅಭಿಷೇಕ್, ರಾಕೇಶ್ ಹಾಗೂ ಕುಶಾಲ್ ರಸ್ತೆ ಪಕ್ಕದಲ್ಲಿ ನಿಂತು ಮಾತನಾಡುತ್ತಿದ್ದರು. ಈ ವೇಳೆ ಕಾರಿನಲ್ಲಿ ಅತಿ ವೇಗವಾಗಿ ಅಪರಿಚಿತ ವ್ಯಕ್ತಿ ಬಂದಿದ್ದಾನೆ. ಇದನ್ನು ಕಂಡ ಯುವಕರ ತಂಡ, ಕಾರು ಚಾಲಕನಿಗೆ ನಿಧಾನವಾಗಿ ಹೋಗು ಎಂದು ಹೇಳಿದ್ದರು. ಇದರಿಂದ ಕೋಪಗೊಂಡ ಕಾರು ಚಾಲಕ ಸ್ಬಲ್ಪ ದೂರು ಹೋಗಿ ತಿರುಗಿಸಿಕೊಂಡು ಬಂದು ಮಾತನಾಡುತ್ತ ನಿಂತಿದ್ದವರಿಗೆ ಡಿಕ್ಕಿ ಹೊಡೆಸಿ ಪರಾರಿಯಾಗಿದ್ದಾನೆ.

ಡಿಕ್ಕಿ ಹೊಡೆದ ರಭಸಕ್ಕೆ ಮನು ಸ್ಥಳದಲ್ಲೇ ಅಸು ನೀಗಿದ್ದು, ಮೂವರು ಯುವಕರು ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ನಾಲ್ವರು ಯುವಕರು ಸಂಬಂಧಿಗಳು ಎಂದು ತಿಳಿದು ಬಂದಿದೆ.

Related Posts

Leave a Reply

Your email address will not be published. Required fields are marked *