Menu

ರಿಯಾದ್‌ನಲ್ಲಿ ಅಮೆರಿಕ ರಾಯಭಾರ ಕಚೇರಿಗೆ ಡ್ರೋನ್‌ ದಾಳಿ

ಸೌದಿ ಅರೇಬಿಯಾದ ರಿಯಾದ್‌ನಲ್ಲಿರುವ ಅಮೆರಿಕ ರಾಯಭಾರಿ ಕಚೇರಿಯನ್ನು ಗುರಿಯಾಗಿಸಿಕೊಂಡು ಮಂಗಳವಾರ ಡ್ರೋನ್ ದಾಳಿ ನಡೆದಿದೆ. ಇರಾನ್ ಬೆಂಬಲಿತ ಪಡೆಗಳು ಈ ಕೃತ್ಯ ಎಸಗಿರಬಹುದು ಎಂದು ಶಂಕಿಸಲಾಗಿದ್ದು, ಈ  ಬೆಳವಣಿಗೆಯಿಂದಾಗಿ ಯುದ್ಧ ಭೀತಿ ಮತ್ತಷ್ಟು ಹೆಚ್ಚಿದೆ.

ರಿಯಾದ್‌ನ ಡಿಪ್ಲೊಮ್ಯಾಟಿಕ್ ಕ್ವಾರ್ಟರ್‌ನಲ್ಲಿರುವ ಅಮೆರಿಕ ರಾಯಭಾರಿ ಕಚೇರಿಯ ಮೇಲೆ ಎರಡು ಆತ್ಮಹತ್ಯಾ ಡ್ರೋನ್‌ಗಳು ದಾಳಿ ನಡೆಸಿವೆ. ದಾಳಿಯ ಸಮಯದಲ್ಲಿ ಕಚೇರಿ ಖಾಲಿಯಾಗಿದ್ದರಿಂದ ಸಾವು-ನೋವು ಸಂಭವಿಸಿಲ್ಲ, ರೆ ಕಟ್ಟಡಕ್ಕೆ ಹಾನಿಯಾಗಿದೆ. ಇತರ ನಾಲ್ಕು ಡ್ರೋನ್ ಗಳನ್ನು ಸೌದಿ ವಾಯು ರಕ್ಷಣಾ ಪಡೆಗಳು ಹೊಡೆದುರುಳಿಸಿವೆ.

ಈ ದಾಳಿಯನ್ನು ಗಂಭೀರವಾಗಿ ಪರಿಗಣಿಸಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ತಕ್ಕ ಪ್ರತಿಕ್ರಿಯೆ ನೀಡಲಾಗುವುದು ಎಂದು ಎಚ್ಚರಿಸಿದ್ದಾರೆ. ಸೌದಿ ಸೇರಿದಂತೆ 12 ಮಧ್ಯಪ್ರಾಚ್ಯ ದೇಶಗಳನ್ನು ಕೂಡಲೇ ತೊರೆಯುವಂತೆ ಅಮೆರಿಕನ್ನರಿಗೆ ಸೂಚನೆ ನೀಡಿದ್ದಾರೆ.

ಇವೆಲ್ಲದರ ನಡುವೆ ಜಾಗತಿಕ ಮಾರುಕಟ್ಟೆಯಲ್ಲಿ ತೈಲ ಬೆಲೆ ಶೇ. 10 ಏರಿಕೆಯಾಗಿದೆ. ಸೌದಿ ಪ್ರಮುಖ ತೈಲ ಸಂಸ್ಕರಣಾಗಾರವನ್ನು ತಾತ್ಕಾಲಿಕವಾಗಿ ಮುಚ್ಚಿದೆ. ರಿಯಾದ್ ಸೇರಿದಂತೆ ಪ್ರಮುಖ ನಗರಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ದಾಳಿಯ ಹಿಂದೆ ಇರುವ ಶಕ್ತಿಗಳನ್ನು ಪತ್ತೆಹಚ್ಚಲು ಮತ್ತು ಪ್ರಾದೇಶಿಕ ಭದ್ರತೆಯನ್ನು ಕಾಪಾಡಲು ಅಂತರಾಷ್ಟ್ರೀಯ ಸಮುದಾಯದೊಂದಿಗೆ ಸಹಕರಿಸುವುದಾಗಿ ಸೌದಿ ತಿಳಿಸಿದೆ.

ಭಾರತವು ಅಗತ್ಯ ಕಚ್ಚಾ ತೈಲದ ಶೇ.80 ಕ್ಕಿಂತ ಹೆಚ್ಚು ಆಮದು ಮಾಡಿಕೊಳ್ಳುತ್ತದೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬೆಲೆ ಶೇ. 1 ಏರಿಕೆಯಾಗಿರುವುದರಿಂದ, ಭಾರತದಲ್ಲೂ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಲೀಟರ್‌ಗೆ ರೂ.5 ರಿಂದ ರೂ.8 ರವರೆಗೆ ಹೆಚ್ಚಾಗುವ ಸಾಧ್ಯತೆಯಿದೆ. ಭಾರತಕ್ಕೆ ತೈಲ ನೀಡುವ ಪ್ರಮುಖ ದೇಶಗಳಲ್ಲಿ ಸೌದಿ ಅರೇಬಿಯಾ ಒಂದಾಗಿದೆ. ಅಲ್ಲಿಂದ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆಗಳಿವೆ. ಡೀಸೆಲ್ ಬೆಲೆ ಏರಿಕೆಯಾದರೆ ಸರಕು ಸಾಗಣೆ ವೆಚ್ಚ ಹೆಚ್ಚಿ ತರಕಾರಿ, ಹಾಲು ಮತ್ತು ದಿನಸಿ ಪದಾರ್ಥಗಳ ಬೆಲೆಗಳು ಏರಿಕೆಯಾಗಬಹುದು.

Related Posts

Leave a Reply

Your email address will not be published. Required fields are marked *