ಇರಾನ್‌ನಲ್ಲಿ ಅಮೆರಿಕ- ಇಸ್ರೇಲ್ ಜಂಟಿ ದಾಳಿಗೆ ಬಲಿಯಾಗಿರುವ 165 ಶಾಲಾ ಬಿದ್ಯಾರ್ಥಿನಿಯರ ಸಾಮೂಹಿಕ ಅಂತ್ಯ ಸಂಸ್ಕಾರ ನೆರವೇರಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದ ಜನ ತೀವ್ರ ಆಕ್ರೋಶ ಹೊರ ಹಾಕಿದ್ದಾರೆ. ಈ ಸಂಘರ್ಷದಿಂದಾಗಿ ಮಧ್ಯ ಪ್ರಾಚ್ಯ ಹೊತ್ತಿ ಉರಿಯುತ್ತಿದ್ದು, ಅಪಾರ ಪ್ರಮಾಣದ ನಷ್ಟದೊಂದಿಗೆ ನೂರಾರು ಅಮಾಯಕ ಜನರು ಕ್ಷಿಪಣಿ ಹೊಡೆತಕ್ಕೆ ಪರಾಣ ಕಳೆದುಕೊಲ್ಳುವ ಸ್ಥಿತಿ ನಿರ್ಮಾಣಗೊಂಡಿದೆ.
ಇರಾನ್ ನ ಮಿನಾಬ್ ನಗರದಲ್ಲಿ ಅಮೆರಿಕ-ಇಸ್ರೇಲ್ ನಡೆಸಿದ ಕ್ಷಿಪಣಿ ದಾಳಿಗೆ 165 ಅಮಾಯಕ ಶಾಲಾ ಬಾಲಕಿಯರು ಮೃತಪಟ್ಟಿದ್ದಾರೆ. ಅವರ ಅಂತ್ಯ ಸಂಸ್ಕಾರದ ಮೆರವಣಿಗೆಯ ದೃಶ್ಯಗಳ ವೀಡಿಯೊವನ್ನು ಸರ್ಕಾರಿ ಮಾಧ್ಯಮ ಬಿತ್ತರಿಸಿದೆ.
ಮಿನಾಬ್ ಶಾಲೆಯ ಮೇಲೆ ಯುಎಸ್ ಮತ್ತು ಇಸ್ರೇಲ್ ಆಡಳಿತದಿಂದ ನಡೆಸಿದ ಭಯೋತ್ಪಾದಕ ದಾಳಿಗೆ ಬಲಿಯಾದ ವಿದ್ಯಾರ್ಥಿನಿಯರ ಅಂತ್ಯ ಕ್ರಿಯೆ ನಡೆದಿದೆ. ಇದಕ್ಕೆ ಜನಸಾಗರವೇ ಹರಿದು ಬಂದಿತ್ತು. ಈ ಶಾಲೆಯಲ್ಲಿ 100 ಮಂದಿ ಗಾಯಗೊಂಡಿ ರುವುದಾಗಿ ಯುಎನ್ ನ್ಯೂಸ್ ವರದಿ ಮಾಡಿದೆ.
ಅಮೆರಿಕ, ಇಸ್ರೇಲ್‌ಗಳ ಈ ಸೇನಾ ದಾಳಿ ಬಗ್ಗೆ ಯುನೆಸ್ಕೊ ಕಳವಳ ವ್ಯಕ್ತಪಡಿಸಿದೆ. ಅಂತಾರಾಷ್ಟ್ರೀಯ ಮಾನವೀಯ ಕಾನೂನಿನ ಅಡಿ ವಿದ್ಯಾರ್ಥಿಗಳನ್ನು ರಕ್ಷಿಸಬೇಕಾಗಿದೆ. ಶಿಕ್ಷಣ ಸಂಸ್ಥೆಗಳ ವಿರುದ್ಧದ ದಾಳಿ ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಗೆ ಅಪಾಯ ಉಂಟು ಮಾಡುವ ಜೊತೆಗೆ ಮಕ್ಕಳ ಶಿಕ್ಷಣದ ಹಕ್ಕನ್ನು ಹಾಳುಮಾಡುತ್ತವೆ ಎಂದು ಯುನೆಸ್ಕೋ ಹೇಳಿಕೆಯಲ್ಲಿ ತಿಳಿಸಿದೆ.


