Menu

ಹಾಸನದಲ್ಲಿ ಪಾಠ ಮಾಡುತ್ತಿದ್ದಾಗಲೇ ಶಿಕ್ಷಕ ಕುಸಿದು ಸಾವು

ತರಗತಿಯಲ್ಲಿ ವಿದ್ಯಾರ್ಥಿಗಳಿಗೆ ಪಾಠ ಮಾಡುತ್ತಿದ್ದಾಗಲೇ ಮುಖ್ಯಶಿಕ್ಷಕರು ಹೃದಯಾಘಾತದಿಂದ ಮೃತಪಟ್ಟ ದುರ್ಘಟನೆ ಅರಕಲಗೂಡು ತಾಲೂಕಿನ ಕೆಬ್ಬೆಕೊಪ್ಪಲು ಗ್ರಾಮದಲ್ಲಿ ನಡೆದಿದೆ.

ಕೆಬ್ಬೆಕೊಪ್ಪಲು ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಕೇರಳಾಪುರ ಗ್ರಾಮದ ಸತೀಶ್ (53) ಎಂದು ಗುರುತಿಸಲಾಗಿದೆ. ವಿದ್ಯಾರ್ಥಿಗಳಿಗೆ ಪಾಠ ಮಾಡುತ್ತಿದ್ದ ವೇಳೆ ಸತೀಶ್ ಅಸ್ವಸ್ಥಗೊಂಡು ಕುಸಿದು ಬಿದ್ದಿದ್ದಾರೆ.

ಗಮನಿಸಿದ ವಿದ್ಯಾರ್ಥಿಗಳು ಹಾಗೂ ಸಹಶಿಕ್ಷಕರು ನೆರವಿಗೆ ಬಂದು ಅಂಬ್ಯುಲೆನ್ಸ್‌ಗೆ ಕರೆ ಮಾಡಿದ್ದಾರೆ. ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಅವರ ಪ್ರಾಣ ಹೋಗಿತ್ತು. ಶಿಕ್ಷಣ ಇಲಾಖೆಯ ಅಧಿಕಾರಿಗಳು ಶಾಲೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.

ಬೆಂಕಿ ಆಕಸ್ಮಿಕ: ವ್ಯಕ್ತಿ ಸಜೀವ ದಹನ

ಮನೆಯೊಳಗಿಟ್ಟಿದ್ದ ಪೆಟ್ರೋಲ್‌ಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದ್ದು, ಮಾಜಿ ಸಿಆರ್‌ಪಿಎಫ್‌ ಯೋಧ ಮೃತಪಟ್ಟ ಘಟನೆ ಮಡಿಕೇರಿಯ ತೋಳುರುಶೆಟ್ಟಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಹೆಚ್.ಎ.ವೆಂಕಟೇಶ್(64) ಎಂದು ಗುರುತಿಸಲಾಗಿದೆ. ತೋಟದ ಯಂತ್ರಗಳ ಬಳಕೆಗೆ ತಂದಿಟ್ಟಿದ್ದ ಪೆಟ್ರೋಲ್‍ಗೆ ಆಕಸ್ಮಿಕ ಬೆಂಕಿ ಹೊತ್ತಿಕೊಂಡಿದ್ದು, ಹೊರ ಬರಲಾಗದೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮನೆಯಿಂದ ದಟ್ಟ ಹೊಗೆ ಕಾಣಿಸಿಕೊಂಡಾಗ ಸ್ಥಳೀಯರು ಮನೆ ಬಳಿ ಬಂದು ನೋಡಿದ್ದಾರೆ. ಬೆಂಕಿ ನಂದಿಸಲು ಯತ್ನಿಸಿದರೂ ಪ್ರಯೋಜನವಾಗಿಲ್ಲ. ಅಗ್ನಿಶಾಮಕ ಸಿಬ್ಬಂದಿ ಹಾಗೂ ಸೋಮವಾರಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related Posts

Leave a Reply

Your email address will not be published. Required fields are marked *